Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ತಿರುನಲ್ವೇಲಿ ಎಕ್ಸ್‌ಪ್ರೆಸ್ ಆರಂಭ…!

Dhrishya News by Dhrishya News
07/03/2026
in ಕರಾವಳಿ, ಸುದ್ದಿಗಳು
0
ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ತಿರುನಲ್ವೇಲಿ ಎಕ್ಸ್‌ಪ್ರೆಸ್ ಆರಂಭ…!
0
SHARES
39
VIEWS
Share on FacebookShare on Twitter

ಮಂಗಳೂರು, ಮಾ. 07: ಮಂಗಳೂರು ಪ್ರದೇಶದ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆಗೆ ಕೊನೆಗೂ ಸ್ಪಂದನೆ ದೊರೆತಿದೆ. ದಕ್ಷಿಣ ಭಾರತದ ಪ್ರಮುಖ ನಗರಗಳ ನಡುವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮಂಗಳೂರು ಮತ್ತು ತಮಿಳುನಾಡಿನ ತಿರುನಲ್ವೇಲಿ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವಾಲಯ ಅನುಮತಿ ನೀಡಿದೆ.

ಕೇಂದ್ರ ಸಚಿವ ಡಾ. ಎಲ್. ಮುರುಗನ್ ಅವರ ವಿಶೇಷ ಮನವಿಯನ್ನು ಪರಿಗಣಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ರೈಲು ಸೇರಿ ಒಟ್ಟು ನಾಲ್ಕು ಹೊಸ ರೈಲುಗಳಿಗೆ ಅನುಮೋದನೆ ನೀಡಿದ್ದಾರೆ. ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಈ ಸೇವೆಗಳು ಮಾರ್ಚ್ ತಿಂಗಳ ಮೂರನೇ ವಾರದಿಂದ ಹಂತ ಹಂತವಾಗಿ ಆರಂಭವಾಗುವ ಸಾಧ್ಯತೆ ಇದೆ.

ಮಂಗಳೂರಿಗೆ ಹೊಸ ರೈಲುಗಳ ಸೇರ್ಪಡೆ, ಆದರೆ ಲಾಭ ಕೇರಳ–ತಮಿಳುನಾಡಿಗೆ ಹೆಚ್ಚು

ಕಳೆದ ಮೂರು ತಿಂಗಳ ಅವಧಿಯಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಹಲವು ಹೊಸ ರೈಲು ಸೇವೆಗಳು ಮಂಜೂರಾಗಿವೆ. ಈಗಾಗಲೇ ನಾಗರಕೋಯಿಲ್–ತಾಂಬರಂ ನಡುವೆ ‘ಅಮೃತ್ ಭಾರತ್’ ರೈಲುಗಳು ಹಾಗೂ ರಾಮೇಶ್ವರಂಗೆ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಿದ್ದು, ಇದೀಗ ತಿರುನಲ್ವೇಲಿ ಎಕ್ಸ್‌ಪ್ರೆಸ್ ಕೂಡ ಸೇರ್ಪಡೆಯಾಗಲಿದೆ.

ಇದಲ್ಲದೆ, ಈಗಿರುವ ಕೆಲವು ರೈಲುಗಳಿಗೆ ಹೆಚ್ಚುವರಿ ನಿಲ್ದಾಣಗಳಲ್ಲಿ ನಿಲುಗಡೆ ಕಲ್ಪಿಸುವುದಕ್ಕೂ ರೈಲ್ವೆ ಇಲಾಖೆ ಮುಂದಾಗಿದೆ. ಮಂಗಳೂರು–ರಾಮೇಶ್ವರಂ ಎಕ್ಸ್‌ಪ್ರೆಸ್ (16621/16622) ರೈಲು ಇನ್ನುಮುಂದೆ ತಿರೂರ್, ಉಡುಮಲೈಪೆಟ್ಟೈ ಮತ್ತು ಪರಮಕುಡಿ ನಿಲ್ದಾಣಗಳಲ್ಲಿಯೂ ನಿಲುಗಡೆ ಪಡೆಯಲಿದೆ. ಅದೇ ವೇಳೆ ತಾಂಬರಂ–ರಾಮೇಶ್ವರಂ ಎಕ್ಸ್‌ಪ್ರೆಸ್‌ಗೆ ಪನ್ರುತಿ ನಿಲ್ದಾಣದಲ್ಲಿ ಹೊಸ ನಿಲುಗಡೆ ಅವಕಾಶ ನೀಡಲಾಗಿದೆ.

ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಪ್ರಯಾಣವನ್ನು ಹೆಚ್ಚು ಸುಗಮ ಹಾಗೂ ಆರಾಮದಾಯಕವಾಗಿಸಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

Previous Post

ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

Next Post

ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check