Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರಾವಳಿಗೆ ನಿರ್ಲಕ್ಷ್ಯ ತೋರಿದ ರಾಜ್ಯ ಬಜೆಟ್: ಬ್ರಿಜೇಶ್ ಚೌಟ ಆಕ್ರೋಶ…!

Dhrishya News by Dhrishya News
07/03/2026
in ಕರಾವಳಿ, ಸುದ್ದಿಗಳು
0
ಕರಾವಳಿಗೆ ನಿರ್ಲಕ್ಷ್ಯ ತೋರಿದ ರಾಜ್ಯ ಬಜೆಟ್: ಬ್ರಿಜೇಶ್ ಚೌಟ ಆಕ್ರೋಶ…!
0
SHARES
1
VIEWS
Share on FacebookShare on Twitter

ಮಂಗಳೂರು, ಮಾ. 07 : ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿರುವ ಅಪಾರ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂತಹ ನಿರೀಕ್ಷೆಗೂ ಮೀರಿದ ನಿರಾಸಾದಾಯಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಶೂನ್ಯವಾಗಿರುವ ಬಜೆಟ್‌ ನಿರೀಕ್ಷಿಸಿರಲಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ಈ ಬಾರಿಯ ರಾಜ್ಯ ಬಜೆಟ್‌ ಕೇವಲ ಅಂಕಿ-ಅಂಶಗಳ ಆಟವಾಗಿದ್ದು, ಜನತೆಗೆ ಯಾವುದೇ ಸ್ಪಷ್ಟ ದಿಕ್ಕು ತೋರಿಸುವುದಿಲ್ಲ ಎಂದು ಟೀಕಿಸಿದ್ದಾರೆ. ರಾಜ್ಯದ ಒಟ್ಟು ಸಾಲವು 8.24 ಲಕ್ಷ ಕೋಟಿ ರೂಪಾಯಿಗೆ ಏರಿರುವುದು ಗಂಭೀರ ಚಿಂತೆಯ ವಿಷಯವಾಗಿದ್ದು, ಇದು ಸರ್ಕಾರದ ಆರ್ಥಿಕ ಶಿಸ್ತಿನ ಕೊರತೆಯನ್ನು ಬಯಲಿಗೆಳೆಯುತ್ತದೆ ಎಂದು ಹೇಳಿದ್ದಾರೆ. ಜೊತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತ ಮಹತ್ವದ ಯೋಜನೆಗಳನ್ನು ಘೋಷಿಸದಿರುವುದು ಕೂಡ ವಿಷಾದಕರವೆಂದು ಹೇಳಿದ್ದಾರೆ.

ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತಹ ಯಾವುದೇ ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಒಳಗೊಂಡಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿಸಿದೆ ಎಂದು ಆರೋಪಿಸಿರುವ ಅವರು, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಬಡ ರೋಗಿಗಳಿಗೆ ಪ್ರಮುಖ ಆರೈಕೆ ಕೇಂದ್ರವಾಗಿರುವ ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲವೆಂದು ಹೇಳಿದ್ದಾರೆ.

ಇದಲ್ಲದೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೇವೆಗಳನ್ನು ಮೇಲ್ದರ್ಜೆಗೆತ್ತಲು ಕೇವಲ 45 ಕೋಟಿ ರೂ. ಅನುದಾನವನ್ನು ಮಾತ್ರ ಮೀಸಲಿಟ್ಟಿರುವುದು ಅಸಮರ್ಪಕ ಕ್ರಮ ಎಂದು ಅವರು ಟೀಕಿಸಿದ್ದಾರೆ.

ಪ್ರತಿ ವರ್ಷವೂ ಕರಾವಳಿ ಭಾಗದಲ್ಲಿ ಉಲ್ಬಣಗೊಳ್ಳುತ್ತಿರುವ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತಹ ಯಾವುದೇ ಗಂಭೀರ ಕ್ರಮಗಳನ್ನು ಈ ಬಜೆಟ್‌ನಲ್ಲಿ ಘೋಷಿಸಿಲ್ಲ. ಜೊತೆಗೆ ಕರಾವಳಿ ಪ್ರವಾಸೋದ್ಯಮದ ಅಪಾರ ಸಾಧ್ಯತೆಗಳನ್ನು ಬಳಸಿಕೊಳ್ಳಲು ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳೂ ಈ ಬಜೆಟ್‌ನಲ್ಲಿ ಕಾಣಿಸದಿರುವುದು ನಿರಾಶೆ ತಂದಿದೆ ಎಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Previous Post

ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

Next Post

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಲ ಮುಂಗೈ ಇಲ್ಲದಿದ್ದರೂ ದಿಟ್ಟ ಸಾಧನೆ: UPSC ನಲ್ಲಿ ಕಾಜಲ್‌ಗೆ 167ನೇ ರ‍್ಯಾಂಕ್…!

ಬಲ ಮುಂಗೈ ಇಲ್ಲದಿದ್ದರೂ ದಿಟ್ಟ ಸಾಧನೆ: UPSC ನಲ್ಲಿ ಕಾಜಲ್‌ಗೆ 167ನೇ ರ‍್ಯಾಂಕ್…!

07/03/2026
ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

07/03/2026
ಕರಾವಳಿಗೆ ನಿರ್ಲಕ್ಷ್ಯ ತೋರಿದ ರಾಜ್ಯ ಬಜೆಟ್: ಬ್ರಿಜೇಶ್ ಚೌಟ ಆಕ್ರೋಶ…!

ಕರಾವಳಿಗೆ ನಿರ್ಲಕ್ಷ್ಯ ತೋರಿದ ರಾಜ್ಯ ಬಜೆಟ್: ಬ್ರಿಜೇಶ್ ಚೌಟ ಆಕ್ರೋಶ…!

07/03/2026
ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

07/03/2026

Recent News

ಬಲ ಮುಂಗೈ ಇಲ್ಲದಿದ್ದರೂ ದಿಟ್ಟ ಸಾಧನೆ: UPSC ನಲ್ಲಿ ಕಾಜಲ್‌ಗೆ 167ನೇ ರ‍್ಯಾಂಕ್…!

ಬಲ ಮುಂಗೈ ಇಲ್ಲದಿದ್ದರೂ ದಿಟ್ಟ ಸಾಧನೆ: UPSC ನಲ್ಲಿ ಕಾಜಲ್‌ಗೆ 167ನೇ ರ‍್ಯಾಂಕ್…!

07/03/2026
ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಮಂಗಳೂರು ವಿಮಾನ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನಗಳು ರದ್ದು…!

07/03/2026
ಕರಾವಳಿಗೆ ನಿರ್ಲಕ್ಷ್ಯ ತೋರಿದ ರಾಜ್ಯ ಬಜೆಟ್: ಬ್ರಿಜೇಶ್ ಚೌಟ ಆಕ್ರೋಶ…!

ಕರಾವಳಿಗೆ ನಿರ್ಲಕ್ಷ್ಯ ತೋರಿದ ರಾಜ್ಯ ಬಜೆಟ್: ಬ್ರಿಜೇಶ್ ಚೌಟ ಆಕ್ರೋಶ…!

07/03/2026
ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

ಅಕ್ರಮ ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ, ಓರ್ವನ ಬಂಧನ…!

07/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved