Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರು–ಆಟೋ ಡಿಕ್ಕಿ: ಒಂದೇ ಕುಟುಂಬದ ಐದು ಮಕ್ಕಳು ಸೇರಿ ಆರು ಮಂದಿಗೆ ಗಾಯ…!

Dhrishya News by Dhrishya News
10/03/2026
in ಕರಾವಳಿ, ಸುದ್ದಿಗಳು
0
ಕಾರು–ಆಟೋ ಡಿಕ್ಕಿ: ಒಂದೇ ಕುಟುಂಬದ ಐದು ಮಕ್ಕಳು ಸೇರಿ ಆರು ಮಂದಿಗೆ ಗಾಯ…!
0
SHARES
5
VIEWS
Share on FacebookShare on Twitter

ಪುತ್ತೂರು, ಮಾ.10: ಅತಿವೇಗದಲ್ಲಿ ಬಂದ ಕಾರು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐದು ಮಕ್ಕಳು ಹಾಗೂ ಅವರ ತಂದೆ ಗಾಯಗೊಂಡ ಘಟನೆ ಸೋಮವಾರ ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಆಟೋ ಚಾಲಕ ಕಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5) ಹಾಗೂ ಸಝಾ (4) ಎಂದು ಗುರುತಿಸಲಾಗಿದೆ. ಇವರಲ್ಲಿ ಕಲಂದರ್ ಶಾಫಿ, ಸಝಾ ಮತ್ತು ಮಹಮ್ಮದ್ ಜಾಝೀರ್ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಾಹಿತಿಯ ಪ್ರಕಾರ, ಕಲಂದರ್ ಶಾಫಿ ಅವರು ಉಪ್ಪಿನಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು 34 ನೆಕ್ಕಿಲಾಡಿಯಲ್ಲಿರುವ ತಮ್ಮ ಮನೆಗೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಉಪ್ಪಿನಂಗಡಿ ದಿಕ್ಕಿಗೆ ವೇಗವಾಗಿ ಬಂದ ಕಾರು ಸರ್ವಿಸ್ ರಸ್ತೆಗೆ ನುಗ್ಗಿ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಆಟೋ ರಿಕ್ಷಾ ರಸ್ತೆ ಮಧ್ಯೆ ಉರುಳಿಬಿದ್ದಿದ್ದು, ಅದರಲ್ಲಿದ್ದ ಆರು ಮಂದಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Previous Post

ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು: ಬೈಂದೂರು ಅಧಿಕಾರಿಗಳ ದಾಳಿ, 400 ಕೆಜಿ ಅಕ್ಕಿ ವಶ….!

Next Post

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಶಿಕ್ಷಕಿಯ ಪರ್ಸ್ ಕಳವು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಶಿಕ್ಷಕಿಯ ಪರ್ಸ್ ಕಳವು….!

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಶಿಕ್ಷಕಿಯ ಪರ್ಸ್ ಕಳವು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check