Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಳ್ಳಾಲದಲ್ಲಿ ಯುವಕನ ಸಂಶಯಾಸ್ಪದ ಸಾವು: ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ…!

Dhrishya News by Dhrishya News
11/03/2026
in ಕರಾವಳಿ, ಸುದ್ದಿಗಳು
0
ಉಳ್ಳಾಲದಲ್ಲಿ ಯುವಕನ ಸಂಶಯಾಸ್ಪದ ಸಾವು: ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ…!
0
SHARES
3
VIEWS
Share on FacebookShare on Twitter

ಉಳ್ಳಾಲ, ಮಾ. 11: ಕೆಲಸಕ್ಕೆ ತೆರಳಿ ಮನೆಗೆ ಮರಳದೇ ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.

ಕೊಣಾಜೆ ಗ್ರಾಮದ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಅವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ವ್ಯಕ್ತಿಯಾಗಿದ್ದಾರೆ.

ವಿವೇಕ್ ಮಂಗಳೂರಿನ ಕದ್ರಿ ಸಮೀಪದ ಮೊರ್ಟಾಸ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಅವರು ಪ್ರತಿದಿನ ಬೆಳಿಗ್ಗೆ ಸುಮಾರು 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಯ ವೇಳೆಗೆ ಮನೆಗೆ ವಾಪಸ್ಸಾಗುವುದು ರೂಢಿಯಾಗಿತ್ತು. ಮಾ. 9ರಂದು ಸಹ ಎಂದಿನಂತೆ ಕೆಲಸಕ್ಕೆ ತೆರಳಿದ್ದ ಅವರು ರಾತ್ರಿ ಸುಮಾರು 9.30ರ ವೇಳೆಗೆ ತಾಯಿಗೆ ದೂರವಾಣಿ ಮೂಲಕ ಸಂಪರ್ಕಿಸಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿ, ಮನೆಗೆ ಬರಲು ತಡವಾಗಬಹುದು, ತನ್ನಿಗಾಗಿ ಕಾಯಬೇಡಿ ಎಂದು ತಿಳಿಸಿದ್ದಾರೆ.

ಆದರೆ ರಾತ್ರಿ ತಡವಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆ ಕುಟುಂಬಸ್ಥರು ಅವರ ಮೊಬೈಲ್‌ಗೆ ಹಲವಾರು ಬಾರಿ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ. ಮರುದಿನ ಮಾ. 10ರಂದು ಸಹ ಮೊಬೈಲ್ ಸಂಪರ್ಕ ಲಭ್ಯವಾಗದೇ ಇದ್ದ ಕಾರಣ ಅವರು ಕೆಲಸ ಮಾಡುತ್ತಿದ್ದ ಕಂಪೆನಿಯನ್ನು ಸಂಪರ್ಕಿಸಿದಾಗ, ಸಂಸ್ಥೆ ಬಂದ್ ಆಗಿರುವುದಾಗಿ ತಿಳಿದುಬಂದಿತು. ಈ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇದೀಗ ಬುಧವಾರ ಬೆಳಗ್ಗೆ ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶೆಟ್ಟಿಗಾರ್ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದ ಸಮೀಪದಲ್ಲೇ ಸೋಮೇಶ್ವರ ರಥದ ಕೊಠಡಿ ಬಳಿ ಅವರ ಸ್ಕೂಟರ್ ನಿಲ್ಲಿಸಿದ್ದಲ್ಲದೆ, ಮೊಬೈಲ್ ಫೋನ್ ಮತ್ತು ಚಪ್ಪಲಿಗಳು ಅಲ್ಲೇ ಇರುವುದಾಗಿ ತಿಳಿದುಬಂದಿದೆ.

ವಿವೇಕ್ ಸುಮಾರು ಎಂಟು ತಿಂಗಳ ಹಿಂದೆ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Previous Post

ಗ್ಯಾಸ್ ಕೊರತೆ ಪರಿಣಾಮ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ…!

Next Post

ಜೀತದಾಳಾಗಿ ದುಡಿಸಿ ಹಿಂಸೆ: ಮೂವರ ವಿರುದ್ಧ ಪ್ರಕರಣ ದಾಖಲು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೀತದಾಳಾಗಿ ದುಡಿಸಿ ಹಿಂಸೆ: ಮೂವರ ವಿರುದ್ಧ ಪ್ರಕರಣ ದಾಖಲು….!

ಜೀತದಾಳಾಗಿ ದುಡಿಸಿ ಹಿಂಸೆ: ಮೂವರ ವಿರುದ್ಧ ಪ್ರಕರಣ ದಾಖಲು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News