Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!

Dhrishya News by Dhrishya News
11/03/2026
in ಕರಾವಳಿ, ಸುದ್ದಿಗಳು
0
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಂಘರ್ಷ…!
0
SHARES
2
VIEWS
Share on FacebookShare on Twitter

ಮಂಗಳೂರು, ಮಾ. 11: ರಾಜ್ಯ ಬಜೆಟ್‌ನಲ್ಲಿ ಕಾಲೇಜು ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು ಘೋಷಣೆ ಹೊರಬಿದ್ದ ಹಿನ್ನೆಲೆಯಲ್ಲಿ ಕರಾವಳಿಯ ಶೈಕ್ಷಣಿಕ ಕೇಂದ್ರವಾಗಿರುವ ಮಂಗಳೂರಿನಲ್ಲಿ ಚುನಾವಣಾ ಚಟುವಟಿಕೆಗಳು ಜೋರಾಗತೊಡಗಿವೆ. ಆದರೆ ಈ ಉತ್ಸಾಹದ ನಡುವೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಉದ್ವಿಗ್ನತೆ ಮೂಡಿ, ಕೆಲವು ಕಾಲೇಜುಗಳಲ್ಲಿ ವಾಗ್ವಾದ ಮತ್ತು ತಳ್ಳಾಟದ ಘಟನೆಗಳು ನಡೆದಿವೆ.

ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಸರ್ಕಾರ ತಾತ್ಕಾಲಿಕವಾಗಿ ಹಸಿರು ನಿಶಾನೆ ನೀಡಿದ ಹಿನ್ನೆಲೆ, ಮಂಗಳೂರಿನ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ತಮ್ಮ ಪ್ರಾಬಲ್ಯ ತೋರಲು ಮುಂದಾಗಿವೆ. ಈ ಸಂದರ್ಭದಲ್ಲಿ ಪೋಸ್ಟರ್ ಅಂಟಿಸುವುದು ಹಾಗೂ ಪ್ರಚಾರ ನಡೆಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚರ್ಚೆ ತೀವ್ರಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯ ಬಗ್ಗೆ ಘೋಷಣೆ ಮಾಡಿದ್ದರೂ, ಅದು ಇನ್ನೂ ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅದಕ್ಕೂ ಮುನ್ನವೇ ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚಳ ಕಂಡಿವೆ. ಕಾಂಗ್ರೆಸ್ ಬೆಂಬಲಿತ ಎನ್‌ಎಸ್‌ಯುಐ ಮತ್ತು ಬಿಜೆಪಿ ಬೆಂಬಲಿತ ಎಬಿವಿಪಿ ವಿದ್ಯಾರ್ಥಿಗಳ ನಡುವೆ ಉಂಟಾದ ಉದ್ವಿಗ್ನತೆಯಿಂದ ಕಾಲೇಜು ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯುಂಟುಮಾಡಿ ಕಾಲೇಜು ಆವರಣವನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗ ರಸ್ತೆ ತಡೆ ನಡೆಸಿದರು. ರಾಜಕೀಯ ಘೋಷಣೆಗಳಿಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಪ್ರಾಂಶುಪಾಲ ಗಣಪತಿ ಗೌಡ ಅವರ ವಿರುದ್ಧವೂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ವಾಗ್ವಾದ ತೀವ್ರಗೊಂಡು ಕೆಲವು ವಿದ್ಯಾರ್ಥಿಗಳ ನಡುವೆ ತಳ್ಳಾಟದ ಪರಿಸ್ಥಿತಿಯೂ ಉಂಟಾಯಿತು. ಘಟನೆಯಿಂದ ಕಾಲೇಜು ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕಾಲೇಜು ಆಡಳಿತ ಕ್ರಮ ಕೈಗೊಂಡಿದೆ. 

Previous Post

ನಿಟ್ಟೆ: ಮಹಿಳಾ ಸಮಾಜ ಮತ್ತು ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆ

Next Post

ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ…!

ಸಂಬಳಕ್ಕಾಗಿ ಕಾಯುತ್ತಿರುವ ರಾಜ್ಯದ ಪೊಲೀಸರು: ತಿಂಗಳು ಕಳೆದರೂ ಪಾವತಿ ಇಲ್ಲ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News