Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ: ಉಳ್ಳಾಲದ ವ್ಯಕ್ತಿಗೆ 20 ವರ್ಷ ಕಠಿಣ ಸಜೆ…..!

Dhrishya News by Dhrishya News
12/03/2026
in ಕರಾವಳಿ, ಸುದ್ದಿಗಳು
0
ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ: ಉಳ್ಳಾಲದ ವ್ಯಕ್ತಿಗೆ 20 ವರ್ಷ ಕಠಿಣ ಸಜೆ…..!
0
SHARES
28
VIEWS
Share on FacebookShare on Twitter

ಮಂಗಳೂರು, ಮಾ. 12: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಉಳ್ಳಾಲದ ಅಬೂಬಕರ್ (53)ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ–ಎಫ್‌ಟಿಎಸ್‌ಸಿ–2) ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದ ವಿವರ:

2025ರ ಮಾರ್ಚ್ 29ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆರೋಪಿಯು ಆಕೆಯನ್ನು ಸಮೀಪದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಲ್ಲದೆ, ಇದಕ್ಕೂ ಮೊದಲು ಮೂರು ಬಾರಿ ಇದೇ ರೀತಿಯ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ಅವರು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ, ಬಿಎನ್‌ಎಸ್ ಕಲಂ 64(1) ಹಾಗೂ ಪೋಕ್ಸೋ ಕಾಯ್ದೆಯ ಕಲಂ 6ರಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹45,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ.

ಇದಲ್ಲದೆ ಬಿಎನ್‌ಎಸ್ ಕಲಂ 351(2)ರಡಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 15 ದಿನಗಳ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಪೀಡಿತ ಬಾಲಕಿಗೆ ದಂಡದ ಮೊತ್ತವಾದ ₹50,000 ನೀಡುವುದರ ಜೊತೆಗೆ ಪ್ರತ್ಯೇಕವಾಗಿ ₹3.50 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೋ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದರು.

Previous Post

ಬೇಸಿಗೆ ಬಿಸಿಲಿಗೆ ನೈಸರ್ಗಿಕ ಪರಿಹಾರ: ಆರೋಗ್ಯಕ್ಕೆ ಅದ್ಭುತ ‘ಬಾರ್ಲಿ ನೀರು’….!

Next Post

ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆಯ ಸೂಚನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಸಿಲಿನ ತಾಪ ಏರಿಕೆ:  ಹವಾಮಾನ ಇಲಾಖೆಯ ಸೂಚನೆ….!

ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆಯ ಸೂಚನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check