Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Dhrishya News by Dhrishya News
14/03/2026
in ಆರೋಗ್ಯ
0
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!
0
SHARES
51
VIEWS
Share on FacebookShare on Twitter

ಮಾ. 14:ದೇಹವನ್ನು ವಿವಿಧ ಸೋಂಕುಗಳು ಮತ್ತು ವೈರಸ್‌ಗಳಿಂದ ರಕ್ಷಿಸಲು ರೋಗ ನಿರೋಧಕ ಶಕ್ತಿ ಪ್ರಮುಖ ಪಾತ್ರವಹಿಸುತ್ತದೆ. ಸರಿಯಾದ ಆಹಾರ ಪದ್ಧತಿ ಹಾಗೂ ಪೌಷ್ಟಿಕ ಪಾನೀಯಗಳನ್ನು ಸೇವಿಸುವ ಮೂಲಕ ದೇಹದ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ವಿಶೇಷವಾಗಿ ಹವಾಮಾನ ಬದಲಾವಣೆ ಸಮಯದಲ್ಲಿ ಶೀತ, ನೆಗಡಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ, ಕೆಲವು ಸಹಜ ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಲಾಭಕರವಾಗಿರುತ್ತದೆ.

ಇಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವ ಮೂರು ಸರಳ ಹಾಗೂ ಆರೋಗ್ಯಕರ ಪಾನೀಯಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಜೀರಿಗೆ – ಬೆಲ್ಲದ ನೀರು:

ಜೀರಿಗೆ ಮತ್ತು ಬೆಲ್ಲದ ಸಂಯೋಜನೆಯಿಂದ ತಯಾರಾಗುವ ಈ ಪಾನೀಯ ಜೀರ್ಣಕ್ರಿಯೆ ಸುಧಾರಿಸಲು ಮತ್ತು ದೇಹಕ್ಕೆ ಶಕ್ತಿ ನೀಡಲು ಸಹಕಾರಿ. ಬೆಲ್ಲದಲ್ಲಿ ಖನಿಜಾಂಶಗಳು ಹಾಗೂ ಆಂಟಿಆಕ್ಸಿಡೆಂಟ್‌ಗಳು ಇದ್ದು, ಜೀರಿಗೆ ದೇಹದ ಚೈತನ್ಯವನ್ನು ಹೆಚ್ಚಿಸುತ್ತದೆ. ಒಂದು ಗ್ಲಾಸ್ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಬಳಿಕ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಬಿಸಿ ಬಿಸಿ ಸೇವಿಸಿದರೆ ಉತ್ತಮ.

ಅರಿಶಿಣ ಹಾಲು:

ಅರಿಶಿಣದಲ್ಲಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಹಾಗೂ ಸೋಂಕು ವಿರೋಧಿ ಗುಣಗಳು ಇದ್ದು, ಇದು ಆರೋಗ್ಯಕ್ಕೆ ಬಹಳ ಉಪಕಾರಿ. ರಾತ್ರಿ ಮಲಗುವ ಮುನ್ನ ಅರಿಶಿಣ ಹಾಲು ಕುಡಿಯುವ ಅಭ್ಯಾಸ ಮಾಡಿಕೊಂಡರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಲು ನೆರವಾಗುತ್ತದೆ ಹಾಗೂ ಸೋಂಕುಗಳ ವಿರುದ್ಧ ಹೋರಾಡಲು ಸಹಕಾರಿ.

ತುಳಸಿ ಚಹಾ:

ತುಳಸಿ ಚಹಾ ದೇಹದ ಆರೋಗ್ಯಕ್ಕೆ ಉತ್ತಮವಾದ ಪಾನೀಯಗಳಲ್ಲಿ ಒಂದು. ಒಂದು ಕಪ್ ನೀರಿಗೆ 7–8 ತುಳಸಿ ಎಲೆಗಳನ್ನು ಹಾಕಿ ಕುದಿಸಿ. ಅದಕ್ಕೆ ಶುಂಠಿ, ಕರಿಮೆಣಸು ಮತ್ತು ಸ್ವಲ್ಪ ಅರಿಶಿಣ ಸೇರಿಸಿದರೆ ಇನ್ನಷ್ಟು ಆರೋಗ್ಯಕರವಾಗುತ್ತದೆ. ನಂತರ ಫಿಲ್ಟರ್ ಮಾಡಿ ಜೇನುತುಪ್ಪ ಹಾಗೂ ಸ್ವಲ್ಪ ಲಿಂಬೆರಸ ಸೇರಿಸಿ ಸೇವಿಸಬಹುದು. ವಾರಕ್ಕೆ ಎರಡು ಬಾರಿ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗುತ್ತದೆ.

Previous Post

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

Next Post

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ 'ಶಿವಾಜಿ ಸಂಗಮ' ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News