Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

Dhrishya News by Dhrishya News
16/03/2026
in ಕರಾವಳಿ, ಸುದ್ದಿಗಳು
0
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!
0
SHARES
4
VIEWS
Share on FacebookShare on Twitter

ಉಡುಪಿ, ಮಾ. 16: ಕಳೆದ ಕೆಲವು ದಿನಗಳಿಂದ ಕಾಣಿಸಿಕೊಂಡಿರುವ ಅನಿಲ ಸಿಲಿಂಡರ್ ಕೊರತೆ ಜಿಲ್ಲೆಯ ಹಲವಾರು ಹೊಟೇಲ್‌ಗಳಿಗೆ ಈಗಾಗಲೇ ಹೊಡೆತ ನೀಡಿದ್ದು, ಸಮಸ್ಯೆ ಮುಂದುವರಿದರೆ ಸೋಮವಾರ ಇನ್ನಷ್ಟು ಹೊಟೇಲ್‌ಗಳು ಬಾಗಿಲು ಮುಚ್ಚುವ ಸಾಧ್ಯತೆ ಎದುರಾಗಿದೆ. ಆದರೆ ಶಾಲೆಗಳ ಬಿಸಿಯೂಟ ಯೋಜನೆ, ಅಂಗನವಾಡಿ ಮಕ್ಕಳಿಗೆ ಸಿದ್ಧ ಆಹಾರ, ಆಸ್ಪತ್ರೆಗಳ ಕ್ಯಾಂಟೀನ್‌ ಸೇವೆಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಸರಕಾರದ ಮಾರ್ಗಸೂಚಿಯಂತೆ ಆಸ್ಪತ್ರೆಗಳು, ಶಾಲೆಗಳು, ಅಂಗನವಾಡಿಗಳು, ಹಾಸ್ಟೆಲ್‌ಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ಆದ್ಯತೆ ನೀಡುವಂತೆ ಅನಿಲ ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಸಿಲಿಂಡರ್ ಪೂರೈಕೆ ಪ್ರಕ್ರಿಯೆ ಮುಂದುವರಿದಿದ್ದು, ಶಾಲಾ ಮಕ್ಕಳ ಬಿಸಿಯೂಟ ಹಾಗೂ ಹಾಸ್ಟೆಲ್‌ಗಳ ಊಟ ವ್ಯವಸ್ಥೆಗೆ ಅಡಚಣೆ ಉಂಟಾಗುವುದಿಲ್ಲ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

ಆದರೆ ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆ ಸ್ವಲ್ಪ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಶಾಲೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಆತಂಕದ ವಾತಾವರಣವಿದೆ. ಹಿಂದಿನಂತೆ ಸುಲಭವಾಗಿ ಸಿಲಿಂಡರ್‌ ದೊರೆಯದಿದ್ದರೂ, ನಿತ್ಯದ ಬಿಸಿಯೂಟ ವ್ಯವಸ್ಥೆ ನಿರ್ವಹಿಸಲು ಬೇಕಾದಷ್ಟು ಅನಿಲ ಪೂರೈಕೆ ಲಭ್ಯವಾಗಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಜಿಲ್ಲಾಡಳಿತವು ಈಗಾಗಲೇ ಅನಿಲ ಏಜೆನ್ಸಿಗಳೊಂದಿಗೆ ಸಭೆ ನಡೆಸಿ, ಶಾಲೆ, ಅಂಗನವಾಡಿ, ಹಾಸ್ಟೆಲ್‌, ಆಸ್ಪತ್ರೆಗಳು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಸಂಸ್ಥೆಗಳಿಗೆ ಆದ್ಯತೆ ಮೇರೆಗೆ ಸಿಲಿಂಡರ್ ಪೂರೈಕೆ ಮಾಡಬೇಕೆಂದು ಸೂಚಿಸಿದೆ. ಇದಕ್ಕೆ ಅನುಗುಣವಾಗಿ ಅನಿಲ ಸರಬರಾಜು ಸಂಸ್ಥೆಗಳೂ ಸಂಬಂಧಿತ ನಿರ್ದೇಶನಗಳನ್ನು ನೀಡಿವೆ ಎಂದು ಏಜೆನ್ಸಿ ಮೂಲಗಳು ಹೇಳಿವೆ.

ಇದರಿಂದ ಸದ್ಯದ ಪರಿಸ್ಥಿತಿಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳು ಹೊಟೇಲ್‌ಗಳಿಗೆ ದೊರೆಯುವುದು ಕಷ್ಟವಾಗಿದೆ. ಲಭ್ಯವಿರುವ ಸಿಲಿಂಡರ್‌ಗಳನ್ನು ಸರ್ಕಾರ ಸೂಚಿಸಿದ ಸಂಸ್ಥೆಗಳಿಗೆ ಮೊದಲು ನೀಡಬೇಕಾದ ಕಾರಣ ಹೊಟೇಲ್‌ಗಳಿಗೆ ಪೂರೈಕೆ ಕುರಿತು ಸ್ಪಷ್ಟ ನಿರ್ದೇಶನಗಳಿಲ್ಲ ಎಂದು ಏಜೆನ್ಸಿ ಮಾಲಕರು ತಿಳಿಸಿದ್ದಾರೆ. ಪರಿಣಾಮವಾಗಿ ಹಲವಾರು ಹೊಟೇಲ್‌ಗಳು ಪರ್ಯಾಯ ಇಂಧನ ಮಾರ್ಗಗಳತ್ತ ಮುಖ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೊಟೇಲ್ ಊಟದ ಮೇಲೆ ಅವಲಂಬಿತವಾಗಿರುವ ಜನರಿಗೆ ಕೂಡ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.

Previous Post

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

Next Post

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check