Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಉನ್ನತ ಮಟ್ಟದ ತನಿಖೆಗೆ ಮಹಿಳೆಯರ ಒತ್ತಾಯ…!

Dhrishya News by Dhrishya News
17/03/2026
in ಕರಾವಳಿ, ಸುದ್ದಿಗಳು
0
ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಉನ್ನತ ಮಟ್ಟದ ತನಿಖೆಗೆ ಮಹಿಳೆಯರ ಒತ್ತಾಯ…!
0
SHARES
17
VIEWS
Share on FacebookShare on Twitter

ಮಂಗಳೂರು, ಮಾ. 17: ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಮೂವರು ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ಬೆಂಗಳೂರಿನಲ್ಲಿ ದೂರು ಸಲ್ಲಿಸಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಎರಡು ವರ್ಷಗಳ ಹಿಂದಿನ ಘಟನೆ ಆರೋಪ:

ಒಬ್ಬ ಮಹಿಳೆಯ ದೂರಿನ ಪ್ರಕಾರ, ಎರಡು ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣದಲ್ಲಿ ಅವರ ಗಂಡನನ್ನು ಬಂಧಿಸಲಾಗಿತ್ತು. ಆತನನ್ನು ಬಿಡುಗಡೆಗೊಳಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಇನ್‌ಸ್ಪೆಕ್ಟರ್ ಒತ್ತಾಯಿಸಿದ್ದರೊಂದಿಗೆ 25 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ಗಂಡನ ವಿರುದ್ಧ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಹಾಕಿದ್ದರನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾತ್ರಿ ವೇಳೆ ಮನೆ ಕಾಂಪೌಂಡ್ ಹಾರಿ ಒಳನುಗ್ಗುವುದು, ಕೈ ಹಿಡಿದು ಡ್ಯಾನ್ಸ್ ಮಾಡಲು ಒತ್ತಾಯಿಸುವುದು ಸೇರಿದಂತೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಮಯದಲ್ಲಿಯೂ ಇದೇ ರೀತಿಯ ವರ್ತನೆ ತೋರಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಪಾಸ್‌ಪೋರ್ಟ್ ಪರಿಶೀಲನೆ ಸೇರಿದಂತೆ ವಿವಿಧ ಕೆಲಸಗಳಿಗೆ ಠಾಣೆಗೆ ಬರುವ ಮಹಿಳೆಯರ ಮೇಲೆಯೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಈ ಬಗ್ಗೆ ಹಲವರು ದೂರು ನೀಡಲು ಹಿಂಜರಿದಿದ್ದಾರೆ ಎಂದು ತಿಳಿಸಲಾಗಿದೆ.

ವಿಶೇಷ ತನಿಖೆಗೆ ಒತ್ತಾಯ:

ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಮಹಿಳೆಯರು ತಿಳಿಸಿದ್ದಾರೆ. ಹೀಗಾಗಿ ಮಂಗಳೂರು ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ಅನುಮಾನವಿರುವುದರಿಂದ ವಿಶೇಷ ತನಿಖಾ ತಂಡ (SIT) ರಚಿಸಿ ಅಥವಾ ಸಿಐಡಿ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ತನಿಖೆ ನಡೆಯುವವರೆಗೆ ಸಂಬಂಧಿತ ಅಧಿಕಾರಿಯನ್ನು ಕರ್ತವ್ಯದಿಂದ ದೂರವಿಡಬೇಕೆಂದು ಸಹ ಒತ್ತಾಯಿಸಿದ್ದಾರೆ.

ಇಲಾಖಾ ತನಿಖೆ ಆರಂಭ:

ಇನ್‌ಸ್ಪೆಕ್ಟರ್ ವಿರುದ್ಧ ಬಂದಿರುವ ದೂರುಗಳ ಆಧಾರದಲ್ಲಿ ಇಲಾಖಾ ಮಟ್ಟದ ತನಿಖೆ ಆರಂಭಿಸಲಾಗಿದೆ. ಉತ್ತರ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಮಿಥುನ್ ತಿಳಿಸಿದ್ದಾರೆ.

ಮಹಿಳಾ ಆಯೋಗದ ಸೂಚನೆ:

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಮಹಿಳೆಯರ ರಕ್ಷಣೆಗೆ ಮುಂದಾಗಬೇಕಾದ ಸರಕಾರಿ ಅಧಿಕಾರಿಯ ದುರ್ವ್ಯವಹಾರ ಮತ್ತು ಕರ್ತವ್ಯ ಲೋಪವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ನಿಯಮಾನುಸಾರ ವಿಚಾರಣೆ ನಡೆಸಿ ಅಗತ್ಯ ಶಿಸ್ತು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದೆ.

Previous Post

ಹೊರ್ಮುಜ್ ಜಲಸಂಧಿ ದಾಟಿದ ಎಲ್‌ಪಿಜಿ ನೌಕೆ ‘ಶಿವಾಲಿಕ್’: ಮಂಗಳೂರಿಗೆ ಬರಲು ನಿರೀಕ್ಷೆ…!

Next Post

ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check