ಉಪ್ಪಿನಂಗಡಿ, ಮಾ. 17: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಬಳಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಬಾಲಕಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ತಣ್ಣೀರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ (33) ಮತ್ತು ಮೊಮ್ಮಗಳು ಸುಹೈರಾ ಅವರನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದಾಗ, ಎದುರು ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ.
ಅಪಘಾತದ ಪರಿಣಾಮವಾಗಿ ಸಾಜಿರಾ ಮತ್ತು ಇಸ್ಮಾಯಿಲ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಸುಹೈರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.







