Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಗ್ಯಾಸ್‌ ಸಿಲಿಂಡರ್‌ ಬುಕ್ಕಿಂಗ್ ಹೆಸರಿನಲ್ಲಿ ಸೈಬರ್‌ ವಂಚನೆ: ಒಟಿಪಿ ಕೇಳುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಲು ಜಿಲ್ಲಾ ಪೊಲೀಸ್ ಸೂಚನೆ..!

Dhrishya News by Dhrishya News
18/03/2026
in ಕರಾವಳಿ, ಸುದ್ದಿಗಳು
0
ಉಡುಪಿ :ಗ್ಯಾಸ್‌ ಸಿಲಿಂಡರ್‌ ಬುಕ್ಕಿಂಗ್ ಹೆಸರಿನಲ್ಲಿ ಸೈಬರ್‌ ವಂಚನೆ: ಒಟಿಪಿ ಕೇಳುವ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಲು ಜಿಲ್ಲಾ ಪೊಲೀಸ್ ಸೂಚನೆ..!
0
SHARES
47
VIEWS
Share on FacebookShare on Twitter

ಉಡುಪಿ, ಮಾ. 18: ವಾಣಿಜ್ಯ ಅನಿಲ ಸಿಲಿಂಡರ್‌ ಕೊರತೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಸೈಬರ್‌ ವಂಚಕರು, ‘ಗ್ಯಾಸ್‌ ಬುಕ್‌ ಮಾಡಿದರೆ ತಕ್ಷಣ ಸಿಲಿಂಡರ್‌ ಸಿಗುತ್ತದೆ’, ‘ಒಟಿಪಿ ನೀಡಿದರೆ ಮನೆಗೆ ತಲುಪುತ್ತದೆ’ ಎಂಬ ರೀತಿಯ ನಕಲಿ ಸಂದೇಶಗಳನ್ನು ಜನರ ಮೊಬೈಲ್‌ಗಳಿಗೆ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ.

ಇಂತಹ ಸಂದೇಶಗಳು ಮೊಬೈಲ್‌ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದರೆ ತಕ್ಷಣ ನಂಬದೇ, ಸೂಕ್ತವಾಗಿ ಪರಿಶೀಲಿಸಿ ಮುಂದುವರಿಯುವುದು ಅಗತ್ಯ. ಅಜಾಗರೂಕತೆ ವಂಚನೆಗೆ ಕಾರಣವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸಾಮಾನ್ಯವಾಗಿ ವಂಚಕರು ಗ್ಯಾಸ್‌ ಏಜೆನ್ಸಿ ಅಥವಾ ಕಂಪನಿಗಳ ಹೆಸರಿನಲ್ಲಿ ಕರೆ ಮಾಡಿ ಅಥವಾ ಸಂದೇಶ ರವಾನಿಸಿ ಗ್ರಾಹಕರಿಂದ ಒಟಿಪಿ ಪಡೆಯಲು ಪ್ರಯತ್ನಿಸುತ್ತಾರೆ. ತ್ವರಿತವಾಗಿ ಸಿಲಿಂಡರ್‌ ದೊರೆಯುತ್ತದೆ ಎಂಬ ನೆಪದಲ್ಲಿ ಒಟಿಪಿ ಹಂಚಿಕೊಂಡರೆ, ಕ್ಷಣಾರ್ಧದಲ್ಲಿ ಬ್ಯಾಂಕ್‌ ಖಾತೆಯಿಂದ ಹಣ ಕಳವು ಆಗುವ ಸಾಧ್ಯತೆ ಇದೆ.

ಗ್ಯಾಸ್‌ ಬುಕ್ಕಿಂಗ್‌ ಪ್ರಕ್ರಿಯೆಯಲ್ಲಿ ಅಧಿಕೃತ ಕಂಪನಿಗಳು ಗ್ರಾಹಕರಿಂದ ಒಟಿಪಿ ಕೇಳುವುದಿಲ್ಲ. ಆದ್ದರಿಂದ ಬುಕ್ಕಿಂಗ್‌ಗಾಗಿ ಅಧಿಕೃತ ಮೊಬೈಲ್‌ ಅಪ್ಲಿಕೇಶನ್‌, ವೆಬ್‌ಸೈಟ್‌ ಅಥವಾ ನೋಂದಾಯಿತ ದೂರವಾಣಿ ಸಂಖ್ಯೆಗಳನ್ನೇ ಬಳಸಬೇಕು.

ಇತ್ತೀಚೆಗೆ ವಂಚಕರು ನಕಲಿ ಲಿಂಕ್‌ಗಳು, ಅಪ್ಲಿಕೇಶನ್‌ಗಳು ಹಾಗೂ ಎಪಿಕೆ ಫೈಲ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಾರೆ. ಇವುಗಳನ್ನು ಕ್ಲಿಕ್‌ ಮಾಡುವುದು ಅಥವಾ ಡೌನ್‌ಲೋಡ್‌ ಮಾಡುವುದು ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು. ಈ ಬಗ್ಗೆ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್‌ ಇಲಾಖೆ ತಿಳಿಸಿದೆ.

ಮುನ್ನೆಚ್ಚರಿಕಾ ಕ್ರಮಗಳು:

ಅಪರಿಚಿತ ಸಂಖ್ಯೆಯಿಂದ ಬಂದ ಗ್ಯಾಸ್‌ ಸಂಬಂಧಿತ ಸಂದೇಶಗಳನ್ನು ನಂಬಬೇಡಿ

ಒಟಿಪಿ ಅಥವಾ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ

ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್‌ ಮಾಡುವುದನ್ನು ತಪ್ಪಿಸಿ

ಗ್ಯಾಸ್‌ ಕಂಪನಿ ಹೆಸರಿನಲ್ಲಿ ಬಂದ ಕರೆಗಳನ್ನು ಪರಿಶೀಲಿಸಿ ಮಾತ್ರ ನಂಬಿ

ಅಪರಿಚಿತ ಮೂಲಗಳಿಂದ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್‌ ಮಾಡಬೇಡಿ

ಬ್ಯಾಂಕ್‌ ವ್ಯವಹಾರಗಳನ್ನು ನಿಯಮಿತವಾಗಿ ಪರಿಶೀಲಿಸಿ

ಮೋಸದ ಅನುಮಾನ ಬಂದ ತಕ್ಷಣ ಬ್ಯಾಂಕ್‌ ಹಾಗೂ ಸೈಬರ್‌ ಕ್ರೈಂ ಸಹಾಯವಾಣಿಗೆ ಮಾಹಿತಿ ನೀಡಿ

ಸಾಮಾಜಿಕ ಜಾಲತಾಣಗಳ ಮಾಹಿತಿಯನ್ನು ಪರಿಶೀಲನೆ ಇಲ್ಲದೆ ನಂಬಬೇಡಿ

ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದರೆ ಇಂತಹ ಸೈಬರ್‌ ವಂಚನೆಗಳಿಂದ ದೂರವಿರಬಹುದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.

Previous Post

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

Next Post

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026

Recent News

imunify-bot-check