Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

Dhrishya News by Dhrishya News
18/03/2026
in ಕರಾವಳಿ, ಸುದ್ದಿಗಳು
0
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!
0
SHARES
6
VIEWS
Share on FacebookShare on Twitter

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ), ಮಾ. 18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸುವ ಉದ್ದೇಶದಿಂದ ಸುಬ್ರಹ್ಮಣ್ಯದ ಗಣ್ಯರು ಮಂಗಳವಾರ ಸಭೆ ಸೇರಿದರು. ವ್ಯಾಪಾರಿಗಳು, ಲಾಡ್ಜ್‌ ಮಾಲೀಕರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಾಧಿಕಾರ ರಚನೆಯಾದರೆ ಪರವಾನಗಿ ನೀಡುವ ವಿಧಾನ, ಕಟ್ಟಡ ನಿರ್ಮಾಣಕ್ಕೆ ಅನುಮತಿ ಸೇರಿದಂತೆ ಹಲವು ನಿಯಮಗಳು ಬದಲಾಗುವ ಸಾಧ್ಯತೆ ಇದ್ದು, ಕಠಿಣ ನಿಯಮಾವಳಿಗಳು ಜಾರಿಯಾಗುವ ಭೀತಿ ಇದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಈಗಾಗಲೇ ಮಾಸ್ಟರ್ ಪ್ಲ್ಯಾನ್ ಸಮಿತಿಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಹೊಸ ಪ್ರಾಧಿಕಾರ ಅಗತ್ಯವಿಲ್ಲ ಎಂದು ಹಲವರು ಅಭಿಪ್ರಾಯಪಟ್ಟರು. ಪ್ರಾಧಿಕಾರ ಜಾರಿಯಾದಲ್ಲಿ ಮುಖ್ಯಮಂತ್ರಿ ಅಥವಾ ಸಚಿವರು ಅಧ್ಯಕ್ಷರಾಗುವ ಸಾಧ್ಯತೆ ಇದ್ದು, ಐಎಎಸ್ ಮಟ್ಟದ ಅಧಿಕಾರಿಗಳು ಆಡಳಿತ ನಡೆಸಲಿದ್ದಾರೆ. ಇದರಿಂದ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಮೇಲ್ದರ್ಜೆಯ ಅಧಿಕಾರಿಗಳನ್ನು ಸಂಪರ್ಕಿಸುವ ಅವಶ್ಯಕತೆ ಎದುರಾಗಬಹುದು ಎಂದು ತಿಳಿಸಿದ್ದಾರೆ.

ಈ ವಿಷಯದ ಕುರಿತಂತೆ ಮುಂದಿನ ಹಂತದ ಹೋರಾಟ ರೂಪುರೇಷೆ ಕುರಿತು ಚರ್ಚಿಸಲು ಮಾರ್ಚ್ 19ರಂದು ಮತ್ತೊಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ಶಿವರಾಮ ರೈ, ರವೀಂದ್ರ ಕುಮಾರ್ ರುದ್ರಪಾದ, ರಾಜೇಶ್ ಎನ್.ಎಸ್., ಪವನ್ ಕುಮಾರ್ ಎಂ.ಡಿ., ಎಚ್.ಎಲ್. ವೆಂಕಟೇಶ್, ದಿನೇಶ್, ಸುಬ್ರಹ್ಮಣ್ಯ ರಾವ್, ರವೀಂದ್ರ ಸುಬ್ರಹ್ಮಣ್ಯ, ಶೇಖರ ಬಿಲದ್ವಾರ, ವೆಂಕಟೇಶ್ ಶರ್ಮ, ಭವಿಷ್ ಅಯ್ಯೆಟ್ಟಿ, ಅನಿಲ್ ಡಿಸೋಜ, ಕಾರ್ತಿಕ್ ಕಾಮತ್, ಭರತ್ ದೇವರಗದ್ದೆ, ಶೇಷಕುಮಾರ್, ದೀಪಕ್ ಹಾಗೂ ಸತೀಶ್ ಕೂಜುಗೋಡು ಉಪಸ್ಥಿತರಿದ್ದರು.

Previous Post

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

Next Post

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check