Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಧ್ಯಪ್ರಾಚ್ಯ ಯುದ್ಧ ಪರಿಣಾಮ: ಕುಡಿಯುವ ನೀರಿನ ಬಾಕ್ಸ್‌ಗೆ ದರ ಏರಿಕೆ….!

Dhrishya News by Dhrishya News
19/03/2026
in ಕರಾವಳಿ, ಸುದ್ದಿಗಳು
0
ಮಧ್ಯಪ್ರಾಚ್ಯ ಯುದ್ಧ ಪರಿಣಾಮ: ಕುಡಿಯುವ ನೀರಿನ ಬಾಕ್ಸ್‌ಗೆ  ದರ ಏರಿಕೆ….!
0
SHARES
18
VIEWS
Share on FacebookShare on Twitter

ಉಡುಪಿ, ಮಾ. 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಶುದ್ಧ ಕುಡಿಯುವ ನೀರನ್ನು ಬಾಟಲಿ ಮೂಲಕ ಪ್ಯಾಕ್ ಮಾಡಿ ಮಾರಾಟ ಮಾಡುವ ಉದ್ಯಮಕ್ಕೆ ಭಾರೀ ಸಂಕಷ್ಟ ಎದುರಾಗಿದೆ.

ಈ ಹಿನ್ನೆಲೆ, ದರ ಏರಿಕೆ ಅನಿವಾರ್ಯವೆಂದು ತೀರ್ಮಾನಿಸಿರುವ ಕರಾವಳಿ ಕರ್ನಾಟಕ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಅಸೋಸಿಯೇಷನ್, ಬ್ರಹ್ಮಾವರದಲ್ಲಿ ನಡೆದ ಸಭೆಯಲ್ಲಿ ತತ್‌ಕ್ಷಣದಿಂದ ಜಾರಿಯಾಗುವಂತೆ ಪ್ರತಿ ಬಾಕ್ಸ್‌ಗೆ ₹25 ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದೆ.

ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ದರದಲ್ಲಿ ಆಗುವ ಏರಿಳಿತಗಳನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 64ಕ್ಕೂ ಹೆಚ್ಚು ಫ್ಯಾಕ್ಟರಿ ಮಾಲಕರು ಪರಸ್ಪರ ಚರ್ಚಿಸಿ ದರ ನಿಗದಿ ಮಾಡುವುದಾಗಿ ಸಭೆಯಲ್ಲಿ ಒಪ್ಪಿಗೆ ನೀಡಿದರು.

ಕಚ್ಚಾ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದರ ಜೊತೆಗೆ, ಅವುಗಳ ಕೊರತೆಯೂ ಉಂಟಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈಗಾಗಲೇ ಕರಾವಳಿ ಭಾಗದ ಪ್ಯಾಕೇಜ್ಡ್ ಕುಡಿಯುವ ನೀರಿನ ಉದ್ಯಮಗಳು ಅಸ್ತಿತ್ವದ ಹೋರಾಟ ನಡೆಸುತ್ತಿದ್ದು, ದರ ಏರಿಕೆ ಕೈಗೊಳ್ಳದಿದ್ದರೆ ಅನೇಕ ಘಟಕಗಳು ಮುಚ್ಚುವ ಪರಿಸ್ಥಿತಿ ಎದುರಾಗಬಹುದು ಎಂದು ಉದ್ಯಮಿಗಳು ಎಚ್ಚರಿಸಿದ್ದಾರೆ.

ಹೋಟೆಲ್‌ ಕ್ಷೇತ್ರಕ್ಕೂ ಬಿಸಿ ತಟ್ಟಿದೆ:

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಜಿಲ್ಲೆಯ ಹೋಟೆಲ್ ಉದ್ಯಮಕ್ಕೂ ಗಂಭೀರ ಸಮಸ್ಯೆ ಎದುರಾಗಿದೆ. ಜಿಲ್ಲೆಯಲ್ಲಿ ಸುಮಾರು 3,000 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ 150ಕ್ಕೂ ಹೆಚ್ಚು ಹೋಟೆಲ್‌ಗಳು ಗ್ಯಾಸ್ ಲಭ್ಯತೆ ಇಲ್ಲದ ಕಾರಣ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ.

ಇನ್ನೂ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳು ಕಟ್ಟಿಗೆ ಸೇರಿದಂತೆ ಪರ್ಯಾಯ ಇಂಧನಗಳನ್ನು ಬಳಸಿಕೊಂಡು ಆಹಾರ ತಯಾರಿಸುತ್ತಿವೆ. ಗ್ಯಾಸ್ ಬಳಕೆ ಹೆಚ್ಚು ಅಗತ್ಯವಿರುವ ಕಾರಣ, ಸುಮಾರು 40 ಶೇಕಡಾ ಹೋಟೆಲ್‌ಗಳಲ್ಲಿ ದೋಸೆ ಸೇರಿದಂತೆ ಕೆಲವು ತಿನಿಸುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

Previous Post

ಸೈಬರ್‌ ಮೋಸ ಹೊಸ ತಂತ್ರ: ಗ್ಯಾಸ್‌ ಬಿಲ್‌ ಹೆಸರಿನಲ್ಲಿ ಎಪಿಕೆ ಮೂಲಕ ವಂಚನೆ….!

Next Post

ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಶಾಸಕರ ಮನವಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಶಾಸಕರ ಮನವಿ….!

ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಶಾಸಕರ ಮನವಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News