ಕುಂದಾಪುರ, ಮಾ. 19: ರಾಜ್ಯ ಮೋಟಾರು ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಿಂದ ನೀಡಲಾಗುವ ಸ್ಮಾರ್ಟ್ ಕಾರ್ಡ್‌ಗಳನ್ನು ಬಾಕಿ ಉಳಿದ ಎಲ್ಲಾ ಕಾರ್ಮಿಕರಿಗೆ ವಿತರಿಸುವಂತೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹಿಮ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆ ನಡೆದಿದ್ದರೂ, ಅಂದು ಕೆಲವೇ ಕಾರ್ಮಿಕರಿಗೆ ಮಾತ್ರ ಕಾರ್ಡ್ ದೊರೆತಿದ್ದು, ಇನ್ನೂ ಅನೇಕರು ವಂಚಿತರಾಗಿದ್ದಾರೆ. ಆದ್ದರಿಂದ ಸ್ಮಾರ್ಟ್ ಕಾರ್ಡ್ ಪಡೆಯದೇ ಉಳಿದಿರುವ ಕರ್ನಾಟಕ ಮೋಟಾರು ಸಾರಿಗೆ ಹಾಗೂ ಇತರ ಸಂಬಂಧಿತ ಕಾರ್ಮಿಕರಿಗೆ ತಕ್ಷಣವೇ ಕಾರ್ಡ್ ನೀಡುವಂತೆ ಶಾಸಕರು ಆಗ್ರಹಿಸಿದರು.







