ಉಡುಪಿ, ಮಾ.19: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಶುಕ್ರವಾರ (ಮಾ.20) ಆಚರಿಸಲಾಗುತ್ತಿರುವುದರಿಂದ ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.






