Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

Dhrishya News by Dhrishya News
20/03/2026
in ಕರಾವಳಿ, ಸುದ್ದಿಗಳು
0
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!
0
SHARES
2
VIEWS
Share on FacebookShare on Twitter

ಉಡುಪಿ, ಮಾ. 20: ಜಿಲ್ಲೆಯಾದ್ಯಂತ ಪವಿತ್ರ ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಉಡುಪಿ ನಗರ ಸೇರಿದಂತೆ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ ಮತ್ತು ಕಾರ್ಕಳ ತಾಲೂಕಿನ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿತು. ಬೆಳಗ್ಗೆ ಮುಸ್ಲಿಂ ಭಕ್ತರು ಅರ್ಹರಿಗೆ ಫಿತರ್ ಝಕಾತ್ ವಿತರಿಸಿ, ಹೊಸ ವಸ್ತ್ರ ಧರಿಸಿ ಮಸೀದಿಗಳತ್ತ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಕೆಲವೆಡೆ ಮಹಿಳೆಯರಿಗೂ ಪ್ರತ್ಯೇಕವಾಗಿ ನಮಾಝ್ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು. ನಮಾಝ್ ಬಳಿಕ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ಹಾಗೂ ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ಅವರ ನೇತೃತ್ವದಲ್ಲಿ ನಮಾಝ್ ನೆರವೇರಿತು. ಈ ಸಂದರ್ಭದಲ್ಲಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಹಬ್ಬದ ಸಂದೇಶ ನೀಡಿದರು.

ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ಅವರ ಮಾರ್ಗದರ್ಶನದಲ್ಲಿ ಈದ್ ನಮಾಝ್ ಹಾಗೂ ಖುತ್ಬಾ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಭಾಗವಹಿಸಿದ್ದರು.

ಕುಂದಾಪುರದಲ್ಲಿ ಜುಮಾ ಮಸೀದಿಯಿಂದ ಈದ್ ಮೆರವಣಿಗೆ ಆರಂಭವಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್ ನೆರವೇರಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ್ರಹ್ಮಾನ್ ನದ್ವಿ ನೇತೃತ್ವ ವಹಿಸಿದ್ದರು.

ಧರ್ಮಗುರುಗಳು ತಮ್ಮ ಉಪನ್ಯಾಸದಲ್ಲಿ ಯುವಜನತೆ ಮಾದಕ ವ್ಯಸನಗಳಿಂದ ದೂರವಿರಬೇಕು, ಅಜಾಗ್ರತೆಯಿಂದ ವಾಹನ ಚಲಾವಣೆ ತಪ್ಪಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಬೆಳೆಸುವ ಅಗತ್ಯವನ್ನೂ ಒತ್ತಿಹೇಳಿದರು.

ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾದ್ಯಂತ ಮಸೀದಿಗಳಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಕುಂದಾಪುರದಲ್ಲಿ ಸಂಭ್ರಮದ ಆಚರಣೆ

ಕುಂದಾಪುರ: ಈದುಲ್ ಫಿತ್ರ್ ಹಬ್ಬವನ್ನು ಇಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಜಾಮೀಯಾ ಮಸೀದಿಯಿಂದ ಮೆರವಣಿಗೆ ನಡೆಸಿ ನಗರ ಮಧ್ಯಭಾಗದ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು. ಜಮಾತ್ ಖತೀಬ್ ಶಾಹೀದ್ ಹುಸೇನ್ ನಮಾಝ್ ಹಾಗೂ ದುವಾ ನೆರವೇರಿಸಿದರು.

ಹಬ್ಬದ ಸಂದರ್ಭದಲ್ಲಿ ಜನರು ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ಕೋರಿಕೊಂಡು ಸಿಹಿ ಹಂಚಿಕೊಂಡರು. ಕುಂದಾಪುರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಬ್ಬ ಶಾಂತಿಯುತವಾಗಿ ನಡೆಯಿತು.

ಚಂದ್ರದರ್ಶನದ ಹಿನ್ನೆಲೆ ಕರಾವಳಿ ಭಾಗದಲ್ಲಿ ಹಬ್ಬವನ್ನು ಇಂದು ಸಂಭ್ರಮದಿಂದ ಆಚರಿಸಲಾಯಿತು.

Previous Post

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

Next Post

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News