Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

Dhrishya News by Dhrishya News
20/03/2026
in ಕರಾವಳಿ, ಸುದ್ದಿಗಳು
0
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!
0
SHARES
12
VIEWS
Share on FacebookShare on Twitter

ಉಡುಪಿ, ಮಾ. 20: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ.

ಮೂರು ದಿನಗಳ ಸಮಾಧಾನ ಮಹೋತ್ಸವ ಕಾರ್ಯಕ್ರಮವನ್ನು ಫೆಲೋಶಿಪ್ ಓಫ್ ಉಡುಪಿ ಚರ್ಚಸ್ ಇದರ ವತಿಯಿಂದ ಆಯೋಜಿಸಲು ನಿರ್ಧರಿಸಲಾಗಿದ್ದು, ಸುಮಾರು ಐದಾರು ತಿಂಗಳುಗಳಿಂದ ಇದಕ್ಕಾಗಿ ಸಂಪೂರ್ಣ ತಯಾರಿಯನ್ನು ಕೂಡ ನಡೆಸಲಾಗಿದೆ. ಇದರಲ್ಲಿ ಮುಖ್ಯ ಪ್ರವಚನಕಾರರಾಗಿ ಘನ ಮೋಹನ್ ಸಿ.ಲಾಝರಸ್ ಅವರು ಆಗಮಿಸಲಿದ್ದಾರೆ. ಅವರು ಉಡುಪಿಗೆ ಈ ಹಿಂದೆ ಕೂಡ ಎರಡು ಬಾರಿ ಪ್ರವಚನಕಾರರಾಗಿ ಆಗಮಿಸಿದ್ದಾರೆ.

ಕ್ರೈಸ್ತ ಬಾಂಧವರಿಗೆ ಪ್ರಸ್ತುತ ತಪಸ್ಸು ಕಾಲವಾಗಿದ್ದು ಈ ಸಂದರ್ಭದಲ್ಲಿ ಬಹಳಷ್ಟು ಭಕ್ತಿ ಸಂಜೀವನ ಕೂಟಗಳನ್ನು ಆಯೋಜಿಸಲಾಗುತ್ತದೆ. ಅದೇ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಅಧಿಕಾರಿಗಳಿಗೆ ಕೂಡ 20 ದಿನಗಳ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲವೊಂದು ಸಂಘಟನೆಗಳು ಬಂದು ಸಮಾಧಾನ ಮಹೋತ್ಸವ ಮಾಡಲು ಬಿಡುವುದಿಲ್ಲ ಎಂಬ ಬೆದರಿಕೆಯ ಮಾತುಗಳನ್ನು ಮಾಧ್ಯಮದ ಮೂಲಕ ನೀಡಿದ್ದರು. ಈ ಕುರಿತು ಪೊಲೀಸ್ ಇಲಾಖೆಯವರನ್ನು ಸಂಪರ್ಕಿಸಿದಾಗಿ ಸಂದೇಶ ನೀಡುವ ವ್ಯಕ್ತಿಯನ್ನು ಬದಲಾಯಿಸಲು ಪೊಲೀಸರು ಮನವಿ ಮಾಡಿದ್ದರು. ಆದರೆ ಈಗಾಗಲೇ ಪೂರ್ಣ ತಯಾರಿ ಆಗಿದ್ದು ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂಬ ನಿಟ್ಟಿನಲ್ಲಿ ಸಂಘಟಕರು ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು ವಾದ ವಿವಾದಗಳನ್ನು ಆಲಿಸಿ ಕೊನೆಗೆ ಕಾರ್ಯಕ್ರಮವನ್ನು ನಡೆಸಲು ನ್ಯಾಯಾಲಯ ಪರವಾನಿಗೆಯನ್ನು ನೀಡಿದೆ. ಈ ಮೂಲಕ ನ್ಯಾಯಾಲಯ ನಮ್ಮ ಮೂಲಭೂತ ಹಕ್ಕುಗಳನ್ನು ಎತ್ತಿ ಹಿಡಿದು ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶದಂತೆ ಈಗಾಗಲೇ ತಯಾರಿ ಕೊನೆಯಹಂತದಲ್ಲಿದ್ದು ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿದೆ. ಸಾರ್ವಜನಿಕ ಕ್ರೈಸ್ತ ಬಂಧುಗಳು ಗಾಳಿಸುದ್ದಿಗೆ ಕಿವಿಗೊಡದೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಶಾಂತ್ ಜತ್ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Previous Post

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

Next Post

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026

Recent News

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved