ಉಡುಪಿ, ಮಾ.22: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 30 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಇಂದು (ಮಾ.22) ಶಾಸಕರು ನೆರವೇರಿಸಿದರು.
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯ ಸಾಂತೂರು ಗ್ರಾಮದ ವಾದಿರಾಜ ಆಚಾರ್ಯ ಮನೆಯಿಂದ ಅಶ್ವತ್ಥಕಟ್ಟೆವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ 10 ಲಕ್ಷ ರೂ., ಪಿಲಾರು ಗ್ರಾಮದ ತೆಂಕಿಲ ಜಾರುಬೊಟ್ಟು ರಸ್ತೆ ಕಾಂಕ್ರೀಟೀಕರಣಕ್ಕೆ 10 ಲಕ್ಷ ರೂ. ಸೇರಿದಂತೆ ಒಟ್ಟು 20 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಇದೇ ವೇಳೆ ಪಿಲಾರು ಗ್ರಾಮದ ತಂಬಿದಬೆಟ್ಟು – ಜಾರಂದಾಯ ದೈವಸ್ಥಾನ ರಸ್ತೆ ಡಾಂಬರೀಕರಣ ಕಾಮಗಾರಿಗೆ 10 ಲಕ್ಷ ರೂ. ವೆಚ್ಚದಲ್ಲಿ ನಡೆದ ಕಾಮಗಾರಿಯ ಉದ್ಘಾಟನೆಯನ್ನು ಸಹ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮೋಹಿನಿ, ಮಾಜಿ ಸದಸ್ಯರಾದ ರವೀಂದ್ರ ಪ್ರಭು, ಶಿವರಾಮ್ ಭಂಡಾರಿ, ಯಶೋಧ ಹಾಗೂ ಸ್ಥಳೀಯರಾದ ಸುಧೀರ್ ರಾವ್, ವಿಶ್ವನಾಥ ಶೆಟ್ಟಿ, ಜಯರಾಮ್ ಶೆಟ್ಟಿ, ಮಿಥೇಶ್, ಹರಿದಾಸ್ ಪ್ರಭು, ಶೈಲೇಂದ್ರ ಶೆಟ್ಟಿ, ಅಶೋಕ್ ನಾಯಕ್, ಸತೀಶ್ ಆಚಾರ್ಯ, ಗಂಗಾಧರ ಶೆಟ್ಟಿ, ಭೋಜು ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಹರಿಣಾಕ್ಷ ಶೆಟ್ಟಿ, ನಾಗೇಶ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.







