Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ

Dhrishya News by Dhrishya News
23/03/2026
in ಮುಖಪುಟ
0
ಮಣಿಪಾಲದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ CME ಕಾರ್ಯಕ್ರಮ
0
SHARES
13
VIEWS
Share on FacebookShare on Twitter

ಮಣಿಪಾಲ, ಮಾರ್ಚ್ 23: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಹಾಗೂ ಕಸ್ತೂರ್ಬಾ ಆಸ್ಪತ್ರೆಗಳ ಕ್ರಿಟಿಕಲ್ ಕೇರ್ ಮತ್ತು ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಅಂಗಾಂಗ ದಾನ ಜಾಗೃತಿ ಕುರಿತು ಎರಡು ದಿನಗಳ ನಿರಂತರ ವೈದ್ಯಕೀಯ ಶಿಕ್ಷಣ (CME) ಕಾರ್ಯಕ್ರಮವನ್ನು ಮಾರ್ಚ್ 18 ಮತ್ತು 19 ರಂದು ಆಯೋಜಿಸಲಾಯಿತು.

ಮೆದುಳಿನ ಮರಣದ ನಂತರ (DBD) ಹಾಗೂ ರಕ್ತಪರಿಚಲನೆಯ ಮರಣದ ನಂತರ (DCD) ನಡೆಯುವ ಅಂಗಾಂಗ ದಾನದ ಕುರಿತು ಅರಿವು ಹೆಚ್ಚಿಸುವುದು ಮತ್ತು ಆರೋಗ್ಯ ವೃತ್ತಿಪರರ ಸಾಮರ್ಥ್ಯ ವೃದ್ಧಿ ಮಾಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.
ಮಾರ್ಚ್ 18ರಂದು ನಡೆದ ಅಧಿವೇಶನಗಳಲ್ಲಿ ಸುಮಾರು 150 ನರ್ಸಿಂಗ್ ಸಿಬ್ಬಂದಿ ಭಾಗವಹಿಸಿದರೆ, ಮಾರ್ಚ್ 19ರಂದು 250 MBBS ವಿದ್ಯಾರ್ಥಿಗಳು ಹಾಗೂ ವಿವಿಧ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ವಿಭಾಗಗಳ ಸುಮಾರು 100 ಅಧ್ಯಾಪಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ಅಂಗಾಂಗ ಹಂಚಿಕೆ ಮತ್ತು ಕಸಿ ವಿಭಾಗದ ರಾಷ್ಟ್ರೀಯ ಮುಖ್ಯಸ್ಥರಾದ ಡಾ.(ಕರ್ನಲ್) ಅವ್ನಿಶ್ ಸೇಠ್ ಭಾಗವಹಿಸಿದರು.

ಗೌರವ ಅತಿಥಿಗಳಾಗಿ ಮೋಹನ್ ಫೌಂಡೇಶನ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಪಲ್ಲವಿ ಕುಮಾರ್ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂಡಿ ವೆಂಕಟೇಶ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಂಗಾಂಗ ದಾನದ ಮಹತ್ವವನ್ನು ಅವರು ವಿವರಿಸಿ, ಅಂಗಾಂಗ ಕಸಿ ಕಾರ್ಯಕ್ರಮಗಳಿಗೆ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿಗೆ ನೆರವಾಗುವಂತೆ ಮಾಹೆ ಮಣಿಪಾಲದಲ್ಲಿ ಅತ್ಯಾಧುನಿಕ ಸಿಮ್ಯುಲೇಶನ್ ಸೌಲಭ್ಯ ಸ್ಥಾಪಿಸುವ ಯೋಜನೆ ಇರುವುದಾಗಿ ತಿಳಿಸಿದರು.

ಆರೋಗ್ಯ ವಿಜ್ಞಾನಗಳ ಸಹ ಉಪಕುಲಪತಿ ಡಾ. ಶರತ್ ಕುಮಾರ್ ರಾವ್ ಸಂಸ್ಥೆಯ ನೈತಿಕ ಹಾಗೂ ಪರಿಣಾಮಕಾರಿ ಅಂಗಾಂಗ ಕಸಿ ಕಾರ್ಯಕ್ರಮಗಳ ಬದ್ಧತೆಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮಕ್ಕೆ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅನಿಲ್ ಕೆ. ಭಟ್, ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯಾಚರಣಾ ಅಧಿಕಾರಿ ಡಾ. ಸುಧಾಕರ್ ಕಂಟಿಪುಡಿ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಬೆಂಬಲ ನೀಡಿದರು.

ಅಧಿವೇಶನಗಳಲ್ಲಿ ತಜ್ಞರ ಉಪನ್ಯಾಸಗಳು, ಸಂವಾದಾತ್ಮಕ ಚರ್ಚೆಗಳು ಹಾಗೂ ಅಂಗಾಂಗ ದಾನದ ವೈದ್ಯಕೀಯ, ನೈತಿಕ ಮತ್ತು ಪ್ರಾಯೋಗಿಕ ಅಂಶಗಳ ಕುರಿತು ವಿಶ್ಲೇಷಣೆ ನಡೆಯಿತು. ಕಾರ್ಯಕ್ರಮದ ವೇಳೆ ಸುಮಾರು 270 ಮಂದಿ ಅಂಗಾಂಗ ದಾನಕ್ಕೆ ಬೆಂಬಲ ಸೂಚಿಸಿ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ತಜ್ಞರು ಮತ್ತು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅಂಗಾಂಗ ದಾನ ಕುರಿತು ಸಮಾಜದಲ್ಲಿ ಹೆಚ್ಚುತ್ತಿರುವ ಜಾಗೃತಿಯನ್ನು ಪ್ರತಿಬಿಂಬಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Previous Post

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

Next Post

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ರಥೋತ್ಸವ ಮತ್ತು ದೈವಗಳ ನೇಮೋತ್ಸವ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News