ಕಾರ್ಕಳ: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಮಹಾ ರಥೋತ್ಸವ ಹಾಗೂ ದೈವಗಳ ನೇಮೋತ್ಸವ ಮಾರ್ಚ್ 19ರಿಂದ ಆರಂಭಗೊಂಡು ಸೋಮವಾರ ಮಾರ್ಚ್ 23ರವರೆಗೆ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನಡೆಯಿತು.
ಉತ್ಸವದ ಅಂಗವಾಗಿ ಉತ್ಸವ ಬಲಿ, ರಥೋತ್ಸವ, ಕಲಶಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿಸಲಾಯಿತು. ದೇವಸ್ಥಾನದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆಯೂ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕರಾದ ಶ್ರೀ ಹರಿಕೃಷ್ಣ ಭಟ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ, ಗುತ್ತು ಬರ್ಕೆ ಗ್ರಾಮದ ಗ್ರಾಮಸ್ಥರು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಪ್ರಭಾಕರ್ ಬಂಗೇರ ಹಾಗೂ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತಾದಿಗಳು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ನಡೆಯಿತು.
ವರದಿ: ಅರುಣ್ ಭಟ್, ಕಾರ್ಕಳ







