Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

Dhrishya News by Dhrishya News
24/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
0
SHARES
10
VIEWS
Share on FacebookShare on Twitter

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕ್ರಿಶ್ಚಿಯನ್ ಸೇರಿದಂತೆ ಇತರ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಕುರಿತು ಇನ್ನಷ್ಟು ವಿವರ ಇಲ್ಲಿದೆ.

ಮಂಗಳವಾರ ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಅನುಸರಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ. ಹೀಗಾಗಿ, ಅಂತಹವರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಪ್ರಕರಣವು ಆಂಧ್ರಪ್ರದೇಶದ ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಹಿನ್ನೆಲೆಯಲ್ಲಿ ವಿಚಾರಣೆಗೆ ಬಂದಿತ್ತು. ಜಾತಿ ತಾರತಮ್ಯ ಮತ್ತು ನಿಂದನೆ ಎದುರಿಸಿದ್ದಾಗಿ ಆರೋಪಿಸಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ನೀಡಿದ್ದರು.

ಆದರೆ ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರು ಪರಿಶಿಷ್ಟ ಜಾತಿಯ ಸ್ಥಾನಮಾನ ಕಳೆದುಕೊಂಡಿದ್ದಾರೆ ಎಂದು ಹೇಳಿ ಆಂಧ್ರಪ್ರದೇಶ ಹೈಕೋರ್ಟ್ ಎಫ್‌ಐಆರ್ ರದ್ದುಗೊಳಿಸಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಆನಂದ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಯನ್ನು ವಿಚಾರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಸಮರ್ಥಿಸಿ ಮಹತ್ವದ ಆದೇಶ ನೀಡಿದೆ.

ಹೀಗಾಗಿ ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ಅನ್ವಯಿಸುವುದಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನೇತ್ರ ಮೈಕ್ರೋಸರ್ಜಿಕಲ್ ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆ..!

Next Post

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check