Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

Dhrishya News by Dhrishya News
25/03/2026
in ಮುಖಪುಟ
0
ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!
0
SHARES
28
VIEWS
Share on FacebookShare on Twitter

ಕಾರ್ಕಳ | ಮಾರ್ಚ್ 25: 2027ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಾರ್ಕಳದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮೊದಲ ಹಂತದಲ್ಲಿ ₹1.59 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಕುರಿತು 24-03-2026 ರಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮಹಾಮಸ್ತಕಾಭಿಷೇಕದ ಸಿದ್ಧತೆಗಾಗಿ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ.

ಈ ಅನುದಾನವನ್ನು ರಸ್ತೆ, ಕುಡಿಯುವ ನೀರು, ಒಳಚರಂಡಿ ಮತ್ತು ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. 2026-27ನೇ ಸಾಲಿನಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರದ ಆದೇಶದ ಪ್ರಕಾರ ₹159 ಲಕ್ಷ (₹1.59 ಕೋಟಿ) ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಸ್ಥಳೀಯ ಸಂಸ್ಥೆಗಳ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಕಾಮಗಾರಿಗಳ ಗುಣಮಟ್ಟ ಕಾಪಾಡುವಂತೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶಿಸಲಾಗಿದೆ.

ಸಂಬಂಧಿತ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸರ್ಕಾರ ನಿರ್ದೇಶಿಸಿದೆ.

(ಮೂಲ: ಕರ್ನಾಟಕ ಸರ್ಕಾರ ಆದೇಶ (ದಿನಾಂಕ: 24-03-2026)

ಉದಯ ಶೆಟ್ಟಿ ಮುನಿಯಾಲು ರಾಜ್ಯ ಸರ್ಕಾರಕ್ಕೆ ಧನ್ಯವಾದ

ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಫೆಬ್ರವರಿ 25 ನೇ ತಾರೀಕಿನಂದು ಕಾರ್ಕಳಕ್ಕೆ ಆಗಮಿಸಿದ್ದು ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಎಮ್. ವೀರಪ್ಪ ಮೊಯಿಲಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ನೀಡಿದ್ದರು.

ಈ ಸಂದರ್ಭದಲ್ಲಿ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುದಾನ ನೀಡುವ ಭರವಸೆಯನ್ನು ನೀಡಿದ್ದರು, ಅದರಂತೆ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಲ್ಪ ಸಂಖ್ಯಾತ ಇಲಾಖೆಯ ಮೂಲಕ 1.59 ಕೋಟಿ ರೂಪಾಯಿಗಳ ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಅನುದಾನವನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಕಳ ಜನತೆಯ ಪರವಾಗಿ ಉದಯ ಶೆಟ್ಟಿ ಮುನಿಯಾಲು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ವರದಿ ಅರುಣ್ ಭಟ್ ಕಾರ್ಕಳ

Previous Post

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

Next Post

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ….!

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News