ಉಡುಪಿ; ನಗರದ ಹೊರವಲಯದ ಶಾಂತಿನಗರ ಎಂಬಲ್ಲಿ ವಲಸೆ ಕಾರ್ಮಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಶವ ತೆರವು ಕಾರ್ಯಚರಣೆ ಹಾಗೂ ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು. ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎಸ್ ಐ ನಾರಾಯಣ ,ಜಾಸ್ವ ,ಕಾನೂನು ಪ್ರಕ್ರಿಯೆ ನಡೆಸಿದರು.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನು, ಬಟ್ಟೆಯನ್ನು ನೇಣುಕುಣಿಕೆಯಾಗಿಸಿ, ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೇಲೆ ಹತ್ತಲು ಗ್ಯಾಸ್ ಸಿಲಿಂಡರ್ ಬಳಿಸಿಕೊಂಡಿದ್ದಾನೆ.
ಮೃತ ಯುವಕ ಸಂತೋಷ್ ಪರಶುರಾಮ, (24ವ) ಹುನುಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.







