Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!

Dhrishya News by Dhrishya News
02/04/2026
in ರಾಜ್ಯ/ ರಾಷ್ಟ್ರೀಯ
0
ಡಿಎಲ್ ಮುಗಿದರೂ 30 ದಿನ ಮಾನ್ಯತೆ: ಹೊಸ ನಿಯಮ..!
0
SHARES
19
VIEWS
Share on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಯಲ್ಲಿ ಮಹತ್ವದ ತಿದ್ದುಪಡಿ ಮಾಡಿ ಚಾಲನಾ ಪರವಾನಗಿ (DL) ಅವಧಿ ಮುಗಿದ ನಂತರವೂ ಮುಂದಿನ 30 ದಿನಗಳವರೆಗೆ ಅದರ ಮಾನ್ಯತೆಯನ್ನು ಮುಂದುವರಿಸಲು ಅವಕಾಶ ನೀಡಿದೆ. ಈ ಬದಲಾವಣೆಯಿಂದ ವಾಹನ ಸವಾರರಿಗೆ ವಿಶೇಷವಾಗಿ ವಿಮೆ ಕ್ಲೇಮ್ ಪ್ರಕ್ರಿಯೆಯಲ್ಲಿ ಹೆಚ್ಚಿನ ಅನುಕೂಲವಾಗಲಿದೆ.

ಈ ಹಿಂದೆ 2019ರ ತಿದ್ದುಪಡಿಯಲ್ಲಿ ರದ್ದುಗೊಂಡಿದ್ದ 30 ದಿನಗಳ ಗ್ರೇಸ್ ಅವಧಿಯನ್ನು ಇದೀಗ ಮತ್ತೆ ಜಾರಿಗೆ ತರಲಾಗಿದೆ. ಇದರ ಪ್ರಕಾರ, ಡಿಎಲ್ ಅವಧಿ ಮುಗಿದ ಮೊದಲ 30 ದಿನಗಳೊಳಗೆ ಅಪಘಾತ ಸಂಭವಿಸಿದರೂ ವಿಮೆ ಕ್ಲೇಮ್ ಮಾಡಲು ಅವಕಾಶ ಸಿಗುತ್ತದೆ.

ಇನ್ನೊಂದು ಮಹತ್ವದ ಬದಲಾವಣೆಯಂತೆ, ಡಿಎಲ್ ನವೀಕರಣವು ಎಕ್ಸ್‌ಪೈರಿ ದಿನಾಂಕದಿಂದಲ್ಲ, ಬದಲಿಗೆ ಅರ್ಜಿ ಸಲ್ಲಿಸಿದ ದಿನಾಂಕದಿಂದಲೇ ಜಾರಿಗೆ ಬರಲಿದೆ. ಇದರಿಂದ ಸವಾರರಿಗೆ ನವೀಕರಣ ಪ್ರಕ್ರಿಯೆಯಲ್ಲಿ ಸ್ಪಷ್ಟತೆ ದೊರೆಯಲಿದೆ.

ಆರ್‌ಟಿಒ ಸೇವೆಗಳಲ್ಲೂ ಸಡಿಲಿಕೆ ನೀಡಲಾಗಿದ್ದು, ಈಗ ಸವಾರರು ತಮ್ಮ ಪ್ರದೇಶಕ್ಕೆ ಸೀಮಿತವಾಗದೆ ರಾಜ್ಯದ ಯಾವುದೇ ಆರ್‌ಟಿಒ ಕಚೇರಿಯಲ್ಲಿ ವಾಹನ ನೋಂದಣಿ ಅಥವಾ ಚಾಲನಾ ಪರವಾನಗಿ ಸಂಬಂಧಿತ ಸೇವೆಗಳನ್ನು ಪಡೆಯಬಹುದು.

ವಾಹನ ಮಾಲೀಕತ್ವ ವರ್ಗಾವಣೆಯ ಸಂದರ್ಭದಲ್ಲಿ ವಿಮಾ ಸಂಸ್ಥೆಗೆ ಮಾಹಿತಿ ನೀಡುವ ಅವಧಿಯನ್ನು 14 ದಿನಗಳಿಂದ 30 ದಿನಗಳಿಗೆ ವಿಸ್ತರಿಸಲಾಗಿದೆ.

ಇದೇ ವೇಳೆ, ಸಂಚಾರಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಗಳನ್ನೂ ಜಾರಿಗೊಳಿಸಲಾಗಿದೆ. ವಾಹನಗಳಿಂದ ಕರ್ಕಶ ಶಬ್ದ ಉಂಟುಮಾಡಿದರೆ ಎರಡನೇ ಬಾರಿ ₹10,000 ದಂಡ ವಿಧಿಸಲಾಗುತ್ತದೆ. ರಸ್ತೆ ಸುರಕ್ಷತೆಗೆ ಧಕ್ಕೆ ಅಥವಾ ವಾಯು ಮಾಲಿನ್ಯ ಉಂಟುಮಾಡಿದರೆ ಮೊದಲ ಬಾರಿ ₹10,000 ದಂಡ ಹಾಗೂ 3 ತಿಂಗಳ ಪರವಾನಗಿ ಅಮಾನತು, ಮರು ಉಲ್ಲಂಘನೆಗೆ 6 ತಿಂಗಳ ಜೈಲು ಶಿಕ್ಷೆ ಅಥವಾ ದಂಡ ವಿಧಿಸುವ ಅವಕಾಶ ಇದೆ.

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದರೆ 6 ತಿಂಗಳಿಂದ 1 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹5,000 ರಿಂದ ₹10,000 ವರೆಗೆ ದಂಡ ವಿಧಿಸಲಾಗುತ್ತದೆ.

ಅಧಿಕಾರಿಗಳ ಪ್ರಕಾರ, 30 ದಿನಗಳ ಗ್ರೇಸ್ ಅವಧಿ ಸೌಲಭ್ಯ ಇದ್ದರೂ, ನಿಗದಿತ ಅವಧಿಯಲ್ಲಿ ವಿಮೆ ನವೀಕರಣ ಮಾಡದಿದ್ದರೆ ವಾಹನವನ್ನು ಪರಿಶೀಲಿಸಿದ ನಂತರವೇ ಹೊಸ ವಿಮೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Previous Post

ಚಿನ್ನದ ದರದಲ್ಲಿ ಇಳಿಕೆ: ಇಂದಿನ ಹೊಸ ರೇಟ್..!

Next Post

ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News