ಬೆಂಗಳೂರು: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ನಡೆಯುತ್ತಿದ್ದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣವನ್ನು ರದ್ದುಪಡಿಸುವಂತೆ ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಅಭಿಯೋಜಕಿ ಅಸ್ಮಾ ಕೌಸರ್, ಸಮೀರ್ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವಾದ ಮಂಡಿಸಿದರು.
ಎರಡೂ ಪಕ್ಷಗಳ ವಾದ ಆಲಿಸಿದ ನ್ಯಾಯಾಲಯ, ತನಿಖೆಗೆ ತಾತ್ಕಾಲಿಕ ತಡೆ ನೀಡಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.







