ಬೆಂಗಳೂರು, ಏಪ್ರಿಲ್ 03: ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದರು. ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.