Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

ಮಹಿಳಾ ಶಕ್ತಿಯಿಂದ ಯಕ್ಷಗಾನ ಇಂದು ನಿಜಾರ್ಥದಲ್ಲಿ ವಿಶ್ವಗಾನ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಅಭಿಮತ

Dhrishya News by Dhrishya News
04/04/2026
in ಸುದ್ದಿಗಳು
0
ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

ಕಾರ್ಯಕ್ರಮದ ಉದ್ಘಾಟನೆ

0
SHARES
4
VIEWS
Share on FacebookShare on Twitter

ಉಡುಪಿ: ಇಂದು ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಯಾವುದೇ ವಯೋಮಿತಿ, ಕಟ್ಟುಪಾಡುಗಳಿಲ್ಲದೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ತರಬೇತಿ ಪಡೆಯುತ್ತಿರುವುದು ಕರಾವಳಿಯಲ್ಲಿ ಸಾಂಸ್ಕೃತಿಕ ಕ್ರಾಂತಿಯನ್ನೇ ಹುಟ್ಟುಹಾಕಿದೆ. ನಿಜಾರ್ಥದಲ್ಲಿ ಯಕ್ಷಗಾನ ಇಂದು ವಿಶ್ವಗಾನವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾಕ್ಟರ್ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. 

ಅವರು ಶುಕ್ರವಾರ ಸುರತ್ಕಲಿನ ಯಕ್ಷಗಾನ ತರಬೇತಿ ಕೇಂದ್ರ ಯಕ್ಷಪೂರ್ಣಿಮಾ ಇದರ ಎರಡನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ನಡೆದ ಯಕ್ಷಗಾನ ಪ್ರದರ್ಶನ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. 

ಮಹಿಳೆಯರು ಇಂದು ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೊಡುಗೆಯನ್ನು ನೀಡುತ್ತಿದ್ದಾರೆ. ಗಂಡು ಕಲೆ ಎಂದೇ ಖ್ಯಾತವಾದ ಯಕ್ಷಗಾನವನ್ನು ಕಲಿತು ಅದನ್ನು ಪ್ರದರ್ಶಿಸಿ ಯಕ್ಷಗಾನ ರಂಗಕ್ಕೆ ಹೊಸ ಆಯಾಮವನ್ನು ನೀಡಿದ್ದಾರೆ . ಕಲೆಯ ಬೆಳವಣಿಗೆಯ ದೃಷ್ಟಿಯಿಂದ ಇದೊಂದು ಉತ್ತಮ ಬೆಳವಣಿಗೆಯಾಗಿದೆ. ಹೆಣ್ಣೊಂದು ಕಲಿತರೆ ಶಾಲೆ ಎಂದು ತೆರೆದಂತೆ ಎಂಬ ಮಾತಿನಂತೆ ಯಕ್ಷಗಾನವನ್ನು ಕಲಿತ ಮಹಿಳೆ ಈ ಕಲೆಯ ಬೆಳವಣಿಗೆಗೆ ಕಾರಣವಾಗ ಬಲ್ಲಳು ಎಂಬುದಕ್ಕೆ ಯಕ್ಷ ಪೂರ್ಣಿಮಾ ಎಂಬ ಯಕ್ಷಗಾನ ತರಬೇತಿ ಕೇಂದ್ರವನ್ನು ಆರಂಭಿಸಿ ಹೆಣ್ಮಕ್ಕಳಿಗೆ ಯಕ್ಷಗಾನವನ್ನು ಕಲಿಸುತ್ತಿರುವ ಪೂರ್ಣಿಮಾ ಯತೀಶ್ ರೈ ಅವರೇ ಸಾಕ್ಷಿ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲಾ ಪೋಷಕರಾದ ಶಕುಂತಲಾ ರಮಾನಂದ ಭಟ್ ಇಡ್ಯಾ ಮಾತನಾಡಿ, ಪೂರ್ಣಿಮಾ ಸತೀಶ್ ರೈ ಅವರು ಬಹಳ ಶ್ರದ್ಧೆಯಿಂದ ಯಕ್ಷಗಾನವನ್ನು ಕಲಿತು ಉತ್ತಮ ಕಲಾವಿದೆಯಾಗಿ ಇದೀಗ ಯಕ್ಷಗಾನ ಕಲೆಯನ್ನು ಇತರರಿಗೆ ದಾಟಿಸುವ ಕೆಲಸವನ್ನು ಮಾಡುತ್ತಿರುವುದು ಅಭಿನಂದನೀಯ ಎಂದರು. 

ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡೆಮಿ ಸದಸ್ಯ ರಾಜೇಶ್ ಕುಳಾಯಿ , ಯಕ್ಷ ಗುರು ಶಂಕರ ನಾರಾಯಣ ಮೈ ರ್ಪಾಡಿ, ಉದ್ಯಮಿ ಧರ್ಮೇಂದ್ರ ಗಣೇಶಪುರ, ಗೋವಿಂದ ದಾಸ್ ಕಾಲೇಜ್ ಸುರತ್ಕಲ್ ಇಲ್ಲಿನ ಆಡಳಿತ ನಿರ್ದೇಶಕ ರಮೇಶ್ ಭಟ್ ಎಸ್.ಜಿ., ಪ್ರಾಂಶುಪಾಲ ಪ್ರೊಫೆಸರ್ ಹರೀಶ್ ಆಚಾರ್ಯ, ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಬಾಳ ಕಾಟಿಪಳ್ಳ ಇದರ ವ್ಯವಸ್ಥಾಪಕ ಮಾದವ ಶೆಟ್ಟಿ ಬಾಳ, ಮಂಗಳೂರು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡಾಕ್ಟರ್ ಸಂದೇಶ್ ರಾವ್, ಉದ್ಯಮಿ ಯತೀಶ್ ರೈ ಚೆಲ್ಯಡ್ಕ, ಕಲಾಪೋಷಕರಾದ ಗಂಗಾಧರ ಪೂಜಾರಿ , ಸಹನಾ ರಾಜೇಶ್ ರೈ, ಯಕ್ಷ ಪೂರ್ಣಿಮಾದ ನಿರ್ದೇಶಕಿ ಪೂರ್ಣಿಮಾ ಯತೀಶ್ ರೈ ಉಪಸ್ಥಿತರಿದ್ದರು. 

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಕೇಂದ್ರದ ಮಕ್ಕಳಿಂದ ಪಾಂಚಜನ್ಯ ಯಕ್ಷಗಾನ ಪ್ರದರ್ಶನ ನಡೆಯಿತು. 

ಸಭಾ ಕಾರ್ಯಕ್ರಮದ ನಂತರ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಮೇದಿನಿ ನಿರ್ಮಾಣ, ಮಹಿಶ ಮರ್ದಿನಿ ಯಕ್ಷಗಾನ ಪ್ರದರ್ಶನ ಪ್ರಸ್ತುತಿಗೊಂಡಿತು. 

ಕಾರ್ಯಕ್ರಮದಲ್ಲಿ ಯಕ್ಷ ಪೂರ್ಣಿಮದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರಾವ್ಯ ಕುಲಾಲ್ ಅವರನ್ನು ಅಭಿನಂದಿಸಲಾಯಿತು. ಕಲಾ ಪೋಷಕರಾದ ವೆಂಕಟೇಶ ಬೋಳಿಯಾಳ ಹಾಗೂ ಡಾ. ಅನಂತಮೂರ್ತಿ ಇವರನ್ನು ಸನ್ಮಾನಿಸಲಾಯಿತು.

ಡಾ. ಅನಂತಮೂರ್ತಿ ಸ್ವಾಗತಿಸಿದರು. ಕಾರ್ಯದರ್ಶಿ ಕವಿತಾ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರೂಪಿಸಿದರು. 

ಕಾರ್ಯಕ್ರಮದ ಉದ್ಘಾಟನೆ
Previous Post

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

Next Post

ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

04/04/2026
ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

04/04/2026
ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

04/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಟಿಪ್ಪರ್ ಹಿಂಬದಿ ಡಿಕ್ಕಿ: ಕಾರ್ಮಿಕ ಗಂಭೀರ ಗಾಯ..!!

04/04/2026

Recent News

ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

ಭಜನಾ ಗುರು ಪ್ರಕಾಶ್ ಕುಲಾಲ್ ಕುಟುಂಬಕ್ಕೆ ₹1 ಲಕ್ಷ ನೆರವು ನೀಡಿದ ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ..!

04/04/2026
ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

04/04/2026
ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ..!

04/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಟಿಪ್ಪರ್ ಹಿಂಬದಿ ಡಿಕ್ಕಿ: ಕಾರ್ಮಿಕ ಗಂಭೀರ ಗಾಯ..!!

04/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved