Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಂಸ್ಕೃತಿಕ ಹಬ್ಬಕ್ಕೆ ಸಜ್ಜಾದ ಮಾಹೆ ಮಣಿಪಾಲ್: ಏಪ್ರಿಲ್ 6ರಿಂದ ‘ಉತ್ಸವ್‌ 2026’ ಆರಂಭ

Dhrishya News by Dhrishya News
05/04/2026
in ಸುದ್ದಿಗಳು
0
ಸಾಂಸ್ಕೃತಿಕ ಹಬ್ಬಕ್ಕೆ ಸಜ್ಜಾದ ಮಾಹೆ ಮಣಿಪಾಲ್: ಏಪ್ರಿಲ್ 6ರಿಂದ ‘ಉತ್ಸವ್‌ 2026’ ಆರಂಭ
0
SHARES
11
VIEWS
Share on FacebookShare on Twitter

ಮಣಿಪಾಲ್‌, ಏಪ್ರಿಲ್‌ 05, 2026: ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಬಹುನಿರೀಕ್ಷಿತ ವಾರ್ಷಿಕ ಅಂತರ್-ಕಾಲೇಜು ಸಾಂಸ್ಕೃತಿಕ ಹಬ್ಬ ‘ಉತ್ಸವ್ 2026’ ಇದೇ ಏಪ್ರಿಲ್ 6 ರಿಂದ ಏಪ್ರಿಲ್ 10ರವರೆಗೆ ನಡೆಯಲಿದೆ.

ಏಪ್ರಿಲ್ 7ರ ಸಂಜೆ 6:30ಕ್ಕೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಉದ್ಘಾಟನ ಸಮಾರಂಭ ನಡೆಲಿದೆ. ಮಾಹೆ ಟ್ರಸ್ಟ್‌ನ ಟ್ರಸ್ಟಿ ಶ್ರೀಮತಿ ವಸಂತಿ ಆರ್. ಪೈ, ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮತ್ತು ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಅವರು ಈ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಇನ್ನು ಏಪ್ರಿಲ್‌ 6ರಂದು ಮಾಹೆ ಸಿಬ್ಬಂದಿಗಾಗಿ ‘ಉತ್ಸವ್ 2026’ ಭಾಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

‘ಉತ್ಸವ್‌ 2026’ ಒಂದು ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದ್ದು, ವಿವಿಧ ವಿಭಾಗಗಳ ವಿದ್ಯಾರ್ಥಿಗಳ ನಡುವೆ ಕಲಾತ್ಮಕ ತೊಡಗಿಸಿಕೊಳ್ಳುವಿಕೆ ಮತ್ತು ಅಂತರಶಿಸ್ತೀಯ ಸಂವಹನವನ್ನು ಉತ್ತೇಜಿಸುತ್ತದೆ. ಐದು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ಸಂಗೀತ, ನೃತ್ಯ, ನಾಟಕ, ಸಾಹಿತ್ಯಿಕ ಸ್ಪರ್ಧೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಲಿದೆ. ಮಾಹೆಯ ಎಲ್ಲಾ ಕ್ಯಾಂಪಸ್‌ಗಳ ವಿದ್ಯಾರ್ಥಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ʼಉತ್ಸವ್‌ 2026ʼ ಯುವ ಉತ್ಸಾಹ ಮತ್ತು ಕಲಾತ್ಮಕತೆಯ ಸಂಗಮವಾಗಲಿದೆ.

Previous Post

ಗುರುಪುರ ಕಂಬಳಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರ ಭೇಟಿ…!

Next Post

ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ, ಆಸ್ಪತ್ರೆ ಗೆ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ, ಆಸ್ಪತ್ರೆ ಗೆ ದಾಖಲು..!

ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ, ಆಸ್ಪತ್ರೆ ಗೆ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News