Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆ ಮತ್ತು ಮರ್ಕ್ ನಡುವೆ ಒಪ್ಪಂದ: ಆರೋಗ್ಯ ಸಂಶೋಧನಾ ಕ್ಷೇತ್ರದಲ್ಲಿ ಪ್ರತಿಭೆಗಳ ಸಜ್ಜುಗೊಳಿಸಲು ‘ಕ್ಯಾಟಲಿಸ್ಟ್ ಪ್ರೋಗ್ರಾಂʼಗೆ ಚಾಲನೆ..!!

Dhrishya News by Dhrishya News
09/04/2026
in ಸುದ್ದಿಗಳು
0
ಮಾಹೆ ಮತ್ತು ಮರ್ಕ್ ನಡುವೆ ಒಪ್ಪಂದ: ಆರೋಗ್ಯ ಸಂಶೋಧನಾ ಕ್ಷೇತ್ರದಲ್ಲಿ ಪ್ರತಿಭೆಗಳ ಸಜ್ಜುಗೊಳಿಸಲು ‘ಕ್ಯಾಟಲಿಸ್ಟ್ ಪ್ರೋಗ್ರಾಂʼಗೆ ಚಾಲನೆ..!!
0
SHARES
5
VIEWS
Share on FacebookShare on Twitter

ಮಣಿಪಾಲ್, ಏಪ್ರಿಲ್ 09, 2026: ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದ ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕಂಪನಿಯಾದ ‘ಮರ್ಕ್’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಆರೋಗ್ಯ ವಿಜ್ಞಾನದ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಉದ್ಯಮ ಮತ್ತು ಶೈಕ್ಷಣಿಕ ವಲಯದ ನಡುವಿನ ಸಹಯೋಗವನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ.

ಈ ಸಹಯೋಗದ ಅಂಗವಾಗಿ ಮರ್ಕ್ ಹೆಲ್ತ್‌ಕೇರ್‌ನ ಪ್ರಮುಖ ಕಾರ್ಯಕ್ರಮವಾದ ‘ಕ್ಯಾಟಲಿಸ್ಟ್ ಪ್ರೋಗ್ರಾಂ’ ಅನ್ನು ಮಾಹೆಯಲ್ಲಿ ಪ್ರಾರಂಭಿಸಿದೆ. ಈ ಮೂರು ತಿಂಗಳ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಜ್ಞರ ಮೂಲಕ ಪ್ರಾಯೋಗಿಕ ಅನುಭವ, ವಿಷಯ ಜ್ಞಾನ ಮತ್ತು ಉದ್ಯಮದ ನೇರ ಅನುಭವವನ್ನು ನೀಡಲಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ ಮತ್ತು ಅಭಿವೃದ್ಧಿ ವಲಯದಲ್ಲಿ ವೃತ್ತಿ ಮಾಡಲು ನೆರವಾಗಲಿದೆ.

ಈ ಬಗ್ಗೆ ಮಾತನಾಡಿದ ಮಾಹೆಯ ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ. ಶರತ್ ಕೆ. ರಾವ್ ಅವರು, ‘ಮರ್ಕ್ ಜೊತೆಗಿನ ಈ ಒಪ್ಪಂದವು ಭವಿಷ್ಯದ ಪ್ರತಿಭೆಗಳನ್ನು ರೂಪಿಸುವ ಮಾಹೆಯ ಗುರಿಗೆ ಪೂರಕವಾಗಿದೆ. ಉದ್ಯಮ ಮತ್ತು ಶಿಕ್ಷಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ, ನಮ್ಮ ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದ ನೈಜ ಸಮಸ್ಯೆಗಳು ಮತ್ತು ಆಧುನಿಕ ತಂತ್ರಜ್ಞಾನಗಳ ಬಗ್ಗೆ ಕಲಿಯಲು ಸಾಧ್ಯವಾಗುತ್ತದೆ. ‘ಕ್ಯಾಟಲಿಸ್ಟ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ ಎಂದು ತಿಳಿಸಿದರು.

ಮರ್ಕ್ ಹೆಲ್ತ್‌ಕೇರ್ ಆರ್ ಅಂಡ್ ಡಿ ಇಂಡಿಯಾದ ಮುಖ್ಯಸ್ಥೆ ಸುನೀಲಾ ಥಟ್ಟೆ ಅವರು ಮಾತನಾಡಿ, ‘ಶೈಕ್ಷಣಿಕ ಜ್ಞಾನವು ವೃತ್ತಿಗೆ ಪೂರಕವಾಗಿರಬೇಕು ಮತ್ತು ವಿದ್ಯಾರ್ಥಿಗಳು ಅದಕ್ಕೆ ಸಿದ್ಧರಾಗಿರಬೇಕು ಸಿದ್ಧರಾಗಬೇಕು ಎಂಬುದು ಮರ್ಕ್ ಸಂಸ್ಥೆಯ ಆಶಯ. ಮಾಹೆಯ ಜತೆ ಈ ಒಪ್ಪಂದಕ್ಕೆ ಕೈಗೊಂಡಿರುವುದು ಸಂತಸದ ವಿಷಯʼ ಎಂದು ಮರ್ಕ್ ಹೆಲ್ತ್‌ಕೇರ್ ಆರ್‌ ಅಂಡ್‌ ಡಿ ಇಂಡಿಯಾ ಮುಖ್ಯಸ್ಥೆ ಸುನೀಲಾ ಥಟ್ಟೆ ಹೇಳಿದರು.

ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಮಾಹೆಯ ಕುಲಸಚಿವ ಡಾ. ಪಿ. ಗಿರಿಧರ್ ಕಿಣಿ, ಕಾರ್ಪೊರೇಟ್ ಸಂಬಂಧಗಳ ವಿಭಾಗದ ನಿರ್ದೇಶಕ ಡಾ. ಹರೀಶ್ ಕುಮಾರ್, ಮಣಿಪಾಲ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಕಾಲೇಜಿನ ಪ್ರಿನ್ಸಿಪಾಲ್‌ ಡಾ. ಶ್ರೀನಿವಾಸ್ ಮುತಾಲಿಕ್ ಹಾಗೂ ಮರ್ಕ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಒಪ್ಪಂದದ ಮೂಲಕ ಮಾಹೆಯು ತನ್ನ ಅಂತರಾಷ್ಟ್ರೀಯ ಸಹಭಾಗಿತ್ವವನ್ನು ಹೆಚ್ಚಿಸಿಕೊಂಡಿದೆ, ಇದು ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಲ್ಲಿ ಮಾಹೆಯು ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ವಿದ್ಯಾರ್ಥಿಗಳಿಗೆ ಕೇವಲ ಪಠ್ಯವಲ್ಲದೆ, ನೇರ ಅನುಭವದ ಶಿಕ್ಷಣ ಮತ್ತು ಉದ್ಯಮದ ಜ್ಞಾನವನ್ನು ನೀಡುವ ಮಾಹೆಯ ಗುರಿಗೆ ಈ ಯೋಜನೆ ಪೂರಕವಾಗಿದೆ.

ಈ ‘ಕ್ಯಾಟಲಿಸ್ಟ್’ ಕಾರ್ಯಕ್ರಮದಿಂದಾಗಿ ಮಾಹೆಯ ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದ ಸಂಶೋಧನಾ ವೃತ್ತಿಯ ಕುರಿತು ಹೆಚ್ಚಿನ ಜ್ಞಾನ ಪಡೆಯಲಿದ್ದಾರೆ. ಅಷ್ಟೇ ಅಲ್ಲದೆ, ಇದು ಶಿಕ್ಷಣ ಸಂಸ್ಥೆ ಮತ್ತು ಉದ್ಯಮದ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

Next Post

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟ – ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ, ಪೂರಕ ಪರೀಕ್ಷೆಗಳ ಅವಕಾಶ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟ – ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ, ಪೂರಕ ಪರೀಕ್ಷೆಗಳ ಅವಕಾಶ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News