ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ 27 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ಸಾವನ್ನಪ್ಪಿದ್ದಾರೆ.
ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ, ಚಾಲಕನಿಗೆ ಮಂಪರು ಆವರಿಸಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಕ್ಷಿಪ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಮೂವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕೈಕ ಪುತ್ರಿಯಾಗಿದ್ದ ಕ್ಷಿಪ್ರಾ ನಿಧನದಿಂದ ಕುಟುಂಬ ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.







