Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 14 ಮಂಗಳವಾರ)

Dhrishya News by Dhrishya News
14/04/2026
in ಸುದ್ದಿಗಳು
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 14 ಮಂಗಳವಾರ)
0
SHARES
64
VIEWS
Share on FacebookShare on Twitter

ಉಡುಪಿ: ಏಪ್ರಿಲ್ 14:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.


  • 01,🐏ಮೇಷರಾಶಿ🐏

📃,ನಿಮ್ಮಲ್ಲಿ ಇಂದು ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ನಿಮ್ಮ ಸ್ವಂತ ನಿರ್ಧಾರಗಳಲ್ಲಿ ನಂಬಿಕೆ ಇಡಿ. ಇದು ನಿಮ್ಮ ವೃತ್ತಿಜೀವನವನ್ನು ಮುನ್ನಡೆಸುತ್ತದೆ,

ಗಮನಿಸಿ:- ಇಂದುನಿಮಗೆ ಆರ್ಥಿಕವಾಗಿಯೂ ಪ್ರಯೋಜನವನ್ನು ನೀಡುತ್ತದೆ,

ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಪೂಜಿಸಿ,


  • 02,🐂ವೃಷಭರಾಶಿ🐂

📃,ಕುಟುಂಬದಲ್ಲಿ ಇಂದು ಕಲಹಗಳು ಹಾಗುವ ಸಾಧ್ಯತೆಗಳು ಇವೆ, ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು, ಮತ್ತು ಎಲ್ಲರೂ ಒಪ್ಪುವರು. ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿದ್ದರೂ ಸಹ, ನಿಮ್ಮ ಹೊಟ್ಟೆಯು ಇಂದು ನಿಮ್ಮ ದುರ್ಬಲ ತಾಣವಾಗಿದೆ,

ಗಮನಿಸಿ:-ನೀವು ಮದ್ಯಪಾನ ಮಾಡಲು ಅಥವಾ ಕೊಬ್ಬಿನ ಆಹಾರವನ್ನು ಸೇವಿಸಲು ನಿರ್ಧರಿಸಿದರೆ, ಮಿತವಾಗಿರಿ,

ಪರಿಹಾರ:-ಶ್ರೀ ವಿಷ್ಣು ಸಂಬಂಧಿಂತ ದೇವಸ್ಥಾನಕ್ಕೆ ಹೋಗಿ ಬನ್ನಿ,


  • 03,👥ಮಿಥುನ ರಾಶಿ👥

📃,ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಂದು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ. ಕೆಲಸದಲ್ಲಿ ನಿರತರಾಗಿರುವ ಜನರು ಇಂದು ತಮ್ಮ ಸಹೋದ್ಯೋಗಿಗಳೊಂದಿಗೆ ಇರಬೇಕಾಗುತ್ತದೆ, ನೀವು ಇಂದು ಯಾರಿಗಾದರೂ ಹಣವನ್ನು ಸಾಲ ನೀಡಬೇಕಾಗಬಹುದು,

ಗಮನಿಸಿ:- ಇಂದು ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ,

ಪರಿಹಾರ:-ಈ ದಿನ ಶ್ರೀ ಮಂಜುನಾಥ ಸ್ವಾಮಿಯನ್ನು ಪೂಜಿಸಿ,


  • 04,🦀ಕಟಕ ರಾಶಿ🦀

📃,ಬಹುದಿನದ ನಿರೀಕ್ಷೆ ಕನಸು ಇಂದು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ, ಉನ್ನತ ಅಧಿಕಾರವನ್ನು ಹೊಂದುವ ನಿಮ್ಮ ಆಸೆಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಇನ್ನು ಒಳಿತಾಗುವುದು. ಸಾಲ ನೀಡಲು ಇದು ಉತ್ತಮ ಸಮಯವಲ್ಲ. ಕೆಲಸದ ಸ್ಥಳದಲ್ಲಿ ವಿಷಯಗಳು ಸುಧಾರಿಸುತ್ತಿವೆ, ತಾಳ್ಮೆಯಿಂದಿರಿ,

ಗಮನಿಸಿ:-ನೀವು ಸ್ವಲ್ಪ ಸಮಯದಿಂದ ನೋಡುತ್ತಿರುವ ವಿಚಾರಗಳನ್ನು ಕೇಳಲು ಅಥವಾ ಅಭಿವೃದ್ಧಿಗೊಳಿಸಲು ಇದು ಉತ್ತಮ ಸಮಯವಾಗಿದೆ,

ಪರಿಹಾರ:-ಇಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ,


  • 05,🦁ಸಿಂಹ ರಾಶಿ🦁

📃,ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನೀವು ನಿಮ್ಮಂತೆ ಅನಿರ್ದಿಷ್ಟರಾಗಿರಬಾರದು. ಈ ಕ್ಷಣದಲ್ಲಿ ಯಾವುದು ಸರಿ ಎನಿಸುತ್ತದೆಯೋ ಅದರೊಂದಿಗೆ ನಿಮ್ಮ ಅವಕಾಶಗಳನ್ನು ಪಡೆದುಕೊಳ್ಳಿ,

ಗಮನಿಸಿ:- ನಿಮ್ಮ ಬಗ್ಗೆ ಇತರರು ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತಿಸಬೇಡಿ,

ಪರಿಹಾರ:-ಶಿವರಾದನೆಯನ್ನು ಮಾಡಿ ಶುಭವಾಗುವುದು,


  • 06,👩‍🦳ಕನ್ಯಾ ರಾಶಿ👩‍🦳

📃,ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ. ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಭಾವನಾತ್ಮಕ ಬೆಂಬಲಕ್ಕಾಗಿ ನಿಮ್ಮ ಸ್ನೇಹಿತರನ್ನು ಕೇಳಲು ಭಯಪಡಬೇಡಿ,

ಗಮನಿಸಿ:-ನಿಮ್ಮ ಸ್ನೇಹಿತರ ಸಂಬಂಧ ಚೆನ್ನಾಗಿರುತ್ತದೆ, 

ಪರಿಹಾರ:-ಶ್ರೀ ಹನುಮಾನ್ ಚಾಲೀಸಾ ಪಠಿಸಿ ಶುಭವಾಗುವುದು,


  • 07,⚖️ತುಲಾ ರಾಶಿ⚖️

📃,ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ, ಜನರು ಸಮಸ್ಯೆಗಳೊಡನೆ ನಿಮ್ಮನ್ನು ಸಮೀಪಿಸಿದರೆ ಅವರನ್ನು ನಿರ್ಲಕ್ಷಿಸಿ. ಇಂದು ನೀವು ನಿಮ್ಮ ಕನಸುಗಳ ಕೆಲಸವನ್ನು ಮಾಡಬಹುದು,

ಗಮನಿಸಿ:- ಇಂದು ನೀವು ಸಾಮಾನ್ಯಕ್ಕಿಂತ ಸ್ವಲ್ಪ ಮುಂಚಿತವಾಗಿ ಮಲಗಲು ಪ್ರಯತ್ನಿಸಿ,

ಪರಿಹಾರ:-ಶ್ರೀ ಕಾಲಭೈರವ ಸ್ವಾಮಿಯನ್ನು ಪೂಜಿಸಿ,


  • 08,🦂ವೃಶ್ಚಿಕ ರಾಶಿ🦂

📃,ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ದ್ವೇಷಿಸಿದರೂ ನೀವು ಅವರಿಗೆ ಪ್ರೀತಿ ತೋರಿಸಬೇಕು,

ಗಮನಿಸಿ:- ನಿಮ್ಮ ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ,

ಪರಿಹಾರ:-ನಿಮ್ಮಕುಲದೇವರನ್ನು ಸ್ಮರಿಸಿಕೊಳ್ಳಿರಿ,


  • 09,🏹ಧನುಸ್ಸು ರಾಶಿ🏹

📃,ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಚಾಲನೆ ಮಾಡುವಾಗ ಜಾಗರೂಕರಾಗಿರಿ,

ಗಮನಿಸಿ:-ರಾತ್ರಿಯಲ್ಲಿ ಪ್ರಯಾಣಿಸುವುದನ್ನು ಮತ್ತು ದೂರದ ಪ್ರಯಾಣವನ್ನು ತಪ್ಪಿಸಿ,

ಪರಿಹಾರ:-ಶ್ರೀ ಆಂಜನೇಯ ಸ್ವಾಮಿಯನ್ನು ಸ್ಮರಿಸಿ,


  • 10,🐊ಮಕರ ರಾಶಿ🐊

📃,ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ. ಇಂದು ನೀವು ನಿಮ್ಮ ಜೀವನ ಸಂಗಾತಿಯೊಂದಿಗೆ ಯಾವುದಾದರು ಕೆಲವು ಅಮೂಲ್ಯ ವಸ್ತುವನ್ನು ಖರೀದಿಸಬಹುದು, ನಿಮ್ಮ ಆರೋಗ್ಯದ ಸ್ಥಿತಿಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ,

ಗಮನಿಸಿ:- ಇಂದು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ,

ಪರಿಹಾರ:-ದೇವಸ್ಥಾನಕ್ಕೆ ಎಳ್ಳೆಣ್ಣೆ ದಾನ ಮಾಡಿ,


  • 11,⚱️ಕುಂಭ ರಾಶಿ⚱️

📃,ಯಾವುದೇ ಆರ್ಥಿಕ ಲಾಭವನ್ನು ನಿರೀಕ್ಷಿಸಲಾಗುವುದಿಲ್ಲ. ನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್‌ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ,

ಗಮನಿಸಿ:- ಇಂದು ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ,

ಪರಿಹಾರ:- ಮಾತೇ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,


  • 12,🐬ಮೀನ ರಾಶಿ🐬

📃,ಇಂದು ಈ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತೀರಿ.ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ,

ಗಮನಿಸಿ:- ಇಂದು ನಿಮ್ಮ ಸ್ವಯಂ ಭರವಸೆಯನ್ನು ಅಭ್ಯಾಸ ಮಾಡಿ ಮತ್ತು ನಿಮ್ಮ ಸ್ವಾಭಿಮಾನವನ್ನು ತಿಳಿದುಕೊಳ್ಳಿ,

ಪರಿಹಾರ:-ಗಣಪತಿಗೆ ಗರಿಕೆ ನೀಡಿ ಒಳಿತುಂಟಾಗುತ್ತದೆ 


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

 

ಮೂಲ : ಜೋತಿಷ್ಯರು ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಟಾಟಾ ಮೋಟಾರ್ಸ್‌ನಿಂದ ಪ್ರೈಮಾ E.55S ಇ-ಟ್ರಕ್ ವಿತರಣೆ; 250 ಹೊಸ ಆರ್ಡರ್ ಘೋಷಣೆ

Next Post

ಡಾ. ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಡಾ. ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026