Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

Dhrishya News by Dhrishya News
29/04/2026
in ಸುದ್ದಿಗಳು
0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!
0
SHARES
13
VIEWS
Share on FacebookShare on Twitter

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಟೆನ್ವಿಕ್ ಸ್ಪೋರ್ಟ್ಸ್ ಸಂಸ್ಥೆಗಳ ಸಹಯೋಗದಲ್ಲಿ ನೂತನ ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಮೊದಲ ಹಂತಕ್ಕೆ ಚಾಲನೆ ನೀಡಲಾಗಿದೆ.

ಈ ಸಹಭಾಗಿತ್ವದ ಮೂಲಕ ದೇಶದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅಂತರರಾಷ್ಟ್ರೀಯ ಮಟ್ಟದ ತರಬೇತಿಯ ಜೊತೆಗೆ ಶೈಕ್ಷಣಿಕ ಭದ್ರತೆಯನ್ನೂ ಒದಗಿಸುವ ಉದ್ದೇಶ ಹೊಂದಲಾಗಿದೆ.

ಸಹಯೋಗದ ಭಾಗವಾಗಿ ಕ್ರೀಡಾ ವ್ಯವಹಾರ, ಡೇಟಾ ಅನಾಲಿಟಿಕ್ಸ್, ಹಾಗೂ ಕ್ರೀಡೆಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಮಷೀನ್ ಲರ್ನಿಂಗ್ ಕುರಿತ ವಿಶೇಷ ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ‘ಮಾಹೆ ಪ್ಲಸ್’ ಪೋರ್ಟಲ್‌ನಲ್ಲಿ ಆನ್‌ಲೈನ್‌, ನೇರ ಹಾಗೂ ಹೈಬ್ರಿಡ್ ಮಾದರಿಯಲ್ಲಿ ಈ ಅಲ್ಪಾವಧಿ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಲಭ್ಯವಿರಲಿವೆ.

ಮುಂಬರುವ ದಿನಗಳಲ್ಲಿ ಕ್ರೀಡಾ ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಕ್ರೀಡಾ ಮಾಧ್ಯಮ ಕ್ಷೇತ್ರಗಳಲ್ಲೂ ಹೆಚ್ಚಿನ ಕೋರ್ಸ್‌ಗಳನ್ನು ಆರಂಭಿಸುವ ಯೋಜನೆ ರೂಪಿಸಲಾಗಿದೆ.

ಇದಕ್ಕೆ ಪೂರಕವಾಗಿ ಮಣಿಪಾಲ ಮತ್ತು ಬೆಂಗಳೂರಿನ ಮಾಹೆ ಕ್ಯಾಂಪಸ್‌ಗಳಲ್ಲಿ ‘ಹೈ-ಪರ್ಫಾರ್ಮೆನ್ಸ್ ಸೆಂಟರ್’ಗಳನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ತರಬೇತಿ, ಕ್ರೀಡಾ ವಿಜ್ಞಾನ ನೆರವು ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಆರಂಭಿಕ ಹಂತದಲ್ಲಿ ನಾಲ್ಕು ಕ್ರೀಡೆಗಳಿಗೆ ಸಂಬಂಧಿಸಿದ ತರಬೇತಿ ನೀಡಲಾಗುತ್ತಿದ್ದು, ನಂತರ ಸುಮಾರು ಹನ್ನೆರಡು ಕ್ರೀಡೆಗಳಿಗೆ ವಿಸ್ತರಣೆ ಮಾಡುವ ಯೋಜನೆ ಇದೆ.
ಕ್ರೀಡಾ ಕ್ಷೇತ್ರದ ತಜ್ಞರಾದ ವಿನಯ್ ಬದಾಮಿ, ಅಪರ್ಣಾ ಪೋಪಟ್, ದೀಪ್ತಿ ಬೋಪಯ್ಯ, ಹೇಮಂತ್ ಬುಚ್, ಸಿದ್ದಾರ್ಥ್ ರಾಮನ್ ಮತ್ತು ಸಿಕೆಎಂ ಧನಂಜಯ್ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.
ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ, “ಟೆನ್ವಿಕ್ ಜೊತೆಗಿನ ಈ ಸಹಯೋಗವು ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಹೊಸ ಶ್ರೇಷ್ಠತೆಯ ಆರಂಭವಾಗಿದೆ” ಎಂದರು.

ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ. ಡಿ. ವೆಂಕಟೇಶ್ ಮಾತನಾಡಿ, “ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ತರಬೇತಿಯ ಜೊತೆಗೆ ಶೈಕ್ಷಣಿಕ ಭದ್ರತೆಯನ್ನೂ ಒದಗಿಸುವ ಯೋಜನೆ ಇದಾಗಿದೆ” ಎಂದು ಹೇಳಿದರು

ಟೆನ್ವಿಕ್ ಸ್ಪೋರ್ಟ್ಸ್ ಸಹ-ಸಂಸ್ಥಾಪಕ ಅನಿಲ್ ಕುಂಬ್ಳೆ, “ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ನುರಿತ ವೃತ್ತಿಪರರ ಕೊರತೆಯನ್ನು ಈ ಯೋಜನೆ ನೀಗಿಸಲಿದೆ” ಎಂದು ಅಭಿಪ್ರಾಯಪಟ್ಟರು.

ಈ ಸಹಯೋಗದ ಮೂಲಕ ಮುಂದಿನ ಪೀಳಿಗೆಯ ಕ್ರೀಡಾ ವೃತ್ತಿಪರರನ್ನು ರೂಪಿಸುವುದರ ಜೊತೆಗೆ ಭಾರತವನ್ನು ಜಾಗತಿಕ ಕ್ರೀಡಾ ಶಕ್ತಿಯಾಗಿ ಬೆಳೆಸುವ ಗುರಿ ಹೊಂದಲಾಗಿದೆ.

Previous Post

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved