Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

Dhrishya News by Dhrishya News
01/05/2026
in ಮುಖಪುಟ
0
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  
0
SHARES
122
VIEWS
Share on FacebookShare on Twitter

ಮಣಿಪಾಲ್‌, ಮೇ 1, 2026: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 8ನೇ ಕುಲಪತಿಯಾಗಿ ಡಾ. ಶರತ್ ಕೆ. ರಾವ್ ಅವರು ಮೇ 1ರ ಶುಕ್ರವಾರದಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಸಂಸ್ಥೆಯ ನಾಯಕತ್ವದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಯಿತು.

ಪ್ರಖ್ಯಾತ ಮೂಳೆತಜ್ಞರು ಹಾಗೂ ಶೈಕ್ಷಣಿಕ ಆಡಳಿತಗಾರರಾಗಿರುವ ಡಾ. ಶರತ್ ರಾವ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಸುದೀರ್ಘ ಅನುಭವ ಹೊಂದಿದ್ದಾರೆ. ಮಾರ್ಚ್ ತಿಂಗಳಲ್ಲೇ ಇವರ ನೇಮಕಾತಿ ಘೋಷಿಸಲಾಗಿತ್ತು. ಮಾಹೆಯ ಶೈಕ್ಷಣಿಕ ಗುಣಮಟ್ಟವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಇವರ ನಾಯಕತ್ವವು ಮಹತ್ವದ್ದಾಗಿದೆ.

ವೈದ್ಯಕೀಯ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಸಂಸ್ಥೆಯು 2025ರ ಜುಲೈ 8ರಂದು ಡಾ. ರಾವ್ ಅವರಿಗೆ ಪ್ರತಿಷ್ಠಿತ ‘ಗೌರವ ಫೆಲೋಶಿಪ್’ (ಎಫ್‌ಆರ್‌ಸಿಪಿ) ನೀಡಿ ಗೌರವಿಸಿದೆ.

ಮೈಸೂರು ವಿಶ್ವವಿದ್ಯಾಲಯದಿಂದ ಎಂಬಿಬಿಎಸ್, ಮಂಗಳೂರು ವಿಶ್ವವಿದ್ಯಾಲಯದಿಂದ ಡಿ.ಆರ್ಥೋ ಮತ್ತು ಎಂ.ಎಸ್ ಪದವಿಗಳನ್ನು ಪಡೆದ ಇವರು, 1988ರಲ್ಲಿ ಕೆಎಂಸಿ ಮಣಿಪಾಲದಲ್ಲಿ ಸಹಾಯಕ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದರು.

ಕೆಎಂಸಿ ಮಂಗಳೂರಿನ ಹಳೆಯ ವಿದ್ಯಾರ್ಥಿಯಾಗಿರುವ ಇವರು ನಾಲ್ಕು ದಶಕಗಳ ಕಾಲ ಸಂಸ್ಥೆಯ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಎಂಸಿ ಮಣಿಪಾಲದ ಮೂಳೆಚಿಕಿತ್ಸೆ ವಿಭಾಗ ಮುಖ್ಯಸ್ಥರಾಗಿ (2009-2014), ಅಸೋಸಿಯೇಟ್ ಡೀನ್ (2015-2019) ಹಾಗೂ ಡೀನ್ (2019-2023) ಆಗಿ ಕಾರ್ಯನಿರ್ವಹಿಸಿದ್ದಾರೆ. 2023ರಿಂದ 2026ರವರೆಗೆ ಮಾಹೆಯ ಸಹ-ಕುಲಪತಿ (ಆರೋಗ್ಯ ವಿಜ್ಞಾನ) ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಸಹ-ಕುಲಪತಿಯಾಗಿದ್ದ ಅವಧಿಯಲ್ಲಿ ಡಾ. ರಾವ್ ಅವರು ಶೈಕ್ಷಣಿಕ ಆಡಳಿತವನ್ನು ಬಲಪಡಿಸುವುದು, ಸಂಶೋಧನೆಗೆ ಉತ್ತೇಜನ ನೀಡುವುದು ಮತ್ತು ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಕುಲಪತಿಯಾಗಿ ಅವರ ನೇಮಕವು ಮಾಹೆಯ ಶೈಕ್ಷಣಿಕ ಶ್ರೇಷ್ಠತೆ ಮತ್ತು ಜಾಗತಿಕ ಮಟ್ಟದ ಮನ್ನಣೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ವೈದ್ಯಕೀಯ ವಲಯದಲ್ಲಿ ಅಪಾರ ಗೌರವಕ್ಕೆ ಪಾತ್ರರಾಗಿರುವ ಡಾ. ರಾವ್ ಅವರು ಸಂಕೀರ್ಣ ಟ್ರೋಮಾ, ಕೀಲು ಮರುಜೋಡಣೆ ಮತ್ತು ಮೊಣಕಾಲು ಆರ್ಥ್ರೋಸ್ಕೋಪಿ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿದ್ದಾರೆ. ಇವರು ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಹಾಗೂ ದಕ್ಷಿಣ ಭಾರತದ ಆರ್ಥೋಪೆಡಿಕ್ ಅಸೋಸಿಯೇಷನ್ (OASIS) ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಅಲ್ಲದೆ, ಎಒ ಟ್ರೋಮಾ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರತಿಷ್ಠಿತ ವೈದ್ಯಕೀಯ ಜರ್ನಲ್‌ಗಳಲ್ಲಿ ಇವರ 100ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ಪ್ರಕಟವಾಗಿವೆ. ಯುರೋಪ್, ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆಗಳಲ್ಲಿ ಉಪನ್ಯಾಸ ಮತ್ತು ಕಾರ್ಯಾಗಾರಗಳನ್ನು ನಡೆಸಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು ಮೂಳೆಚಿಕಿತ್ಸಾ ಕ್ಷೇತ್ರದಲ್ಲಿ ಜಾಗತಿಕ ಸಹಯೋಗವನ್ನು ಬಲಪಡಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಡಾ| ಶರತ್ ರಾವ್ ಅವರ ನೇಮಕ ಕುರಿತು ಮಾಹೆ ಟ್ರಸ್ಟ್‌ನ ಅಧ್ಯಕ್ಷ ಡಾ. ರಂಜನ್ ಆರ್. ಪೈ ಅವರು, ‘ಮಾಹೆಯ ಬಗ್ಗೆ ಡಾ. ಶರತ್‌ ಕೆ. ರಾವ್‌ ಅವರಿಗಿರುವ ಆಳವಾದ ಅರಿವು, ಎಲ್ಲರನ್ನು ಒಳಗೊಂಡ ನಾಯಕತ್ವ ಹಾಗೂ ಶ್ರೇಷ್ಠತೆ ಸಾಧಿಸುವಲ್ಲಿ ಅವರಿಗಿರುವ ಬದ್ಧತೆಯು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಾಗಿ ಜಾಗತಿಕ ಮಟ್ಟದಲ್ಲಿ ಗೌರವ ಹೊಂದಿರುವ ಮಾಹೆಯ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸಲಿದೆ ಎಂಬ ವಿಶ್ವಾಸ ನನಗಿದೆʼ ಎಂದು ತಿಳಿಸಿದರು.

ಮಾಹೆಯ ಸಹ ಕುಲಾಧಿಪತಿ ಡಾ. ಹೆಚ್.ಎಸ್. ಬಲ್ಲಾಳ್ ಅವರು, ‘ಡಾ. ಶರತ್ ಕೆ. ರಾವ್ ಅವರ ನೇಮಕಾತಿಯು ಮಾಹೆಯ ಶೈಕ್ಷಣಿಕ ನಾಯಕತ್ವ ಮತ್ತು ಮೌಲ್ಯಗಳಿಗೆ ನೀಡುವ ಪ್ರಾಮುಖ್ಯವನ್ನು ಪ್ರತಿಬಿಂಬಿಸುತ್ತದೆ. ಸಂಸ್ಥೆಯ ಕುರಿತು ಅವರಿಗಿರುವ ಆಳವಾದ ತಿಳುವಳಿಕೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಅದ್ವಿತೀಯ ಕೊಡುಗೆಯು, ಮಾಹೆಯನ್ನು ಜಾಗತಿಕ ಮಟ್ಟದ ಮುಂಚೂಣಿ ವಿಶ್ವವಿದ್ಯಾಲಯವನ್ನಾಗಿ ಬಲಪಡಿಸಲು ಸಹಕಾರಿಯಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ನೂತನ ಜವಾಬ್ದಾರಿ ಸ್ವೀಕರಿಸಿ ಮಾತನಾಡಿದ ಡಾ. ಕೆ. ಶರತ್ ರಾವ್ ಅವರು, ʼವೈಯಕ್ತಿಕ ಮತ್ತು ವೃತ್ತಿಜೀವನದ ಅವಿಭಾಜ್ಯ ಅಂಗವಾಗಿರುವ ಮಾಹೆಯನ್ನು ಮುನ್ನಡೆಸುವ ಜವಾಬ್ದಾರಿ ದೊರೆತಿರುವುದು ಹೆಮ್ಮೆಯ ವಿಷಯ. ಹಿಂದಿನವರು ಹಾಕಿರುವ ಬಲಿಷ್ಠ ಬುನಾದಿಯ ಮೇಲೆ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಗುರಿ ಇದೆ. ಎಲ್ಲರ ಸಹಕಾರದೊಂದಿಗೆ ಶಿಕ್ಷಣ, ಸಂಶೋಧನೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಮಾಹೆಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಬದ್ಧನಾಗಿದ್ದೇನೆ. ಸಾಮಾಜಿಕ ಕಳಕಳಿ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದೇ ನನ್ನ ಮುಖ್ಯ ಉದ್ದೇಶ’ ಎಂದರು.

ಜುಲೈ 1, 2020ರಂದು ಮಾಹೆಯ 7ನೇ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಲೆಫ್ಟಿನೆಂಟ್ ಜನರಲ್ (ಡಾ.) ಎಂ. ಡಿ. ವೆಂಕಟೇಶ್ ಅವರು ತಮ್ಮ ಅಧಿಕಾರವಧಿಯ ಬಗ್ಗೆ ಮಾತನಾಡಿ, ‘ಮಾಹೆಯು ಮಹತ್ವದ ಬೆಳವಣಿಗೆ ಮತ್ತು ರೂಪಾಂತರದ ಕಾಲಘಟ್ಟದಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ ಮತ್ತು ಜಾಗತಿಕ ಮಟ್ಟದಲ್ಲಿ ಸಂಸ್ಥೆಯನ್ನು ವಿಸ್ತರಿಸುವಲ್ಲಿ ಸಾಧಿಸಿರುವ ಪ್ರಗತಿಯ ಬಗ್ಗೆ ನನಗೆ ಹೆಮ್ಮೆಯಿದೆ. ಡಾ. ರಾವ್ ಅವರು ಈ ಸಂಸ್ಥೆಯ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿʼ ಎಂದು ಹಾರೈಸಿದರು.

ಡಾ. ಶರತ್ ರಾವ್ ಅವರ ನೇಮಕದೊಂದಿಗೆ ಮಾಹೆಯು ಹೊಸ ಮನ್ವಂತರಕ್ಕೆ ಕಾಲಿಟ್ಟಿದೆ. ಶಿಕ್ಷಣ, ಸಂಶೋಧನೆ, ಆರೋಗ್ಯ ಸೇವೆ ಮತ್ತು ಸಾಮಾಜಿಕ ತೊಡಗಿಸಿಕೊಳ್ಳುವಿಕೆಯಲ್ಲಿ ತನ್ನದೇ ಆದ ಶ್ರೇಷ್ಠ ಪರಂಪರೆಯನ್ನು ಹೊಂದಿರುವ ಈ ಸಂಸ್ಥೆಯು, ನೂತನ ನಾಯಕತ್ವದಲ್ಲಿ ತನ್ನ ಗುಣಮಟ್ಟವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಬದ್ಧವಾಗಿದೆ. ಈ ಬದಲಾವಣೆಯು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಹೆಯ ಘನತೆಯನ್ನು ಮತ್ತಷ್ಟು ಬಲಪಡಿಸಲು ಸನ್ನದ್ಧವಾಗಿದೆ.

Previous Post

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

Next Post

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News