Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

Dhrishya News by Dhrishya News
02/05/2026
in ಸುದ್ದಿಗಳು
0
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ
0
SHARES
4
VIEWS
Share on FacebookShare on Twitter

ಉಡುಪಿ : ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ, ರಂಗಕಲೆಗಳಿoದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.

ಅವರು ಗುರುವಾರ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಸಂಸ್ಥೆಯ ಸಂಸ್ಥಾಪಕ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಎರಡು ದಿನಗಳ ಕಾಲ ಹಮ್ಮಿಕೊಂಡ ‘ರಂಗಭೂಮಿ ಆನಂದೋತ್ಸವ 2026 ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಂಗಭೂಮಿ ಉಡುಪಿ ಸಂಸ್ಥೆಯನ್ನು ಹುಟ್ಟುಹಾಕಿ, ಅದರ ಅಧ್ಯಕ್ಷನಾಗಿ, ಕಲಾವಿದನಾಗಿ ಬೆಳೆಸಿದ ದಿ. ಕುತ್ಪಾಡಿ ಆನಂದ ಗಾಣಿಗ ಅವರ ಶ್ರಮ ಇಂದು ಫಲ ನೀಡಿದೆ. ಈ ಸಂಸ್ಥೆ ಅನೇಕ ಕಲಾವಿದರು, ಪ್ರತಿಭೆಗಳಿಗೆ ವೇದಿಕೆಯಾಗಿ ನಾಡಿಗೆ ಪರಿಚಯಿಸಿದೆ. ಆನಂದ ಗಾಣಿಗರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಸಾಮಾಜಿಕ ಉತ್ತಮ ಸಂದೇಶವನ್ನು ನೀಡುವ ಅರ್ಥಪೂರ್ಣ ನಾಟಕಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಸದಾ ಇರುತ್ತದೆ. ಸಮಾಜದ ಅಂಕುಡೊoಕನ್ನು ತಿದ್ದುವ ಈ ನಾಟಕೋತ್ಸವಗಳು ಇಂದಿನ ಆಧುನಿಕ ಕಾಲಘಟ್ಟದಲ್ಲಿ ಹೆಚ್ಚಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ರಂಗಭೂಮಿ ಉಡುಪಿ ತನ್ನ 60 ವರ್ಷಗಳ ಇತಿಹಾಸದಲ್ಲಿ ಅನೇಕ ಕೊಡುಗೆಗಳನ್ನು ಸಮಾಜಕ್ಕೆ ನೀಡಿದೆ. ಈ ಸಂಸ್ಥೆಯನ್ನು ಮುನ್ನಡೆಸಿದ ದಿ. ಆನಂದ ಗಾಣಿಗರ ಶ್ರಮ, ಮಾತು ನಮ್ಮ ಮುಂದಿದೆ. ಮಕ್ಕಳಿಗೆ ರಂಗಶಿಕ್ಷಣ ನೀಡಿ ಭವಿಷ್ಯದ ಕಲಾವಿದರನ್ನು ಹುಟ್ಟುಹಾಕುವ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಸಂಘಸoಸ್ಥೆಗಳು, ರಂಗಾಸಕ್ತ ಮನಸ್ಸುಗಳು ರಂಗಭೂಮಿಯನ್ನು ಉಳಿಸಿ ಬೆಳೆಸಲು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಬ್ಯಾಂಕಿನ ಪ್ರತಿನಿಧಿ ಸುಬ್ರಹ್ಮಣ್ಯ, ರಂಗಭೂಮಿ ಉಡುಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು, ಎನ್. ಆರ್. ಬಲ್ಲಾಳ್ ಉಪಸ್ಥಿತರಿದ್ದರು.

ಜಿ.ಪಿ.ಪ್ರಭಾಕರ್ ತುಮರಿ ಕಾರ್ಯಕ್ರಮ ನಿರೂಪಿಸಿದರು. ರಂಗಭೂಮಿಯ ರಂಗಶಿಕ್ಷಣ ನಿರ್ದೇಶಕ ವಿದ್ಯಾವಂತ ಆಚಾರ್ಯ ಸ್ವಾಗತಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಶ್ರೀಪಾದ ಹೆಗಡೆ ನಿರ್ದೇಶನದ ‘ಸಂವೇದನೆ ‘ ನಾಟಕ ಪ್ರದರ್ಶನಗೊಂಡಿತು.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

Next Post

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News