ಕಾರ್ಕಳ: ಅಡುಗೆ ಅನಿಲ ದರ ಏರಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ಹಾಗೂ ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆ ಮೇ 6ರಂದು ಬುಧವಾರ ಸಂಜೆ 5 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ನಡೆಯಲಿದೆ.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳ ವಿರುದ್ಧ ಸಾರ್ವಜನಿಕರು ಧ್ವನಿಗೂಡಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.





