Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಣಿಪಾಲ್ ಎಂಐಟಿಗೆ ಪ್ರತಿಷ್ಠಿತ ಸಿಎಫ್‌ಎ ಇನ್‌ಸ್ಟಿಟ್ಯೂಟ್ ನ ಮಾನ್ಯತೆ

Dhrishya News by Dhrishya News
09/05/2026
in ಮುಖಪುಟ
0
ಮಣಿಪಾಲ್ ಎಂಐಟಿಗೆ ಪ್ರತಿಷ್ಠಿತ ಸಿಎಫ್‌ಎ ಇನ್‌ಸ್ಟಿಟ್ಯೂಟ್ ನ ಮಾನ್ಯತೆ
0
SHARES
2
VIEWS
Share on FacebookShare on Twitter

ಮಣಿಪಾಲ್, 09 ಮೇ 2026: ಮಣಿಪಾಲ್ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಅಂಗಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ಎಂಐಟಿ), ಪ್ರತಿಷ್ಠಿತ ಸಿಎಫ್‌ಎ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯ ಅಫಿಲಿಯೇಷನ್ ಕಾರ್ಯಕ್ರಮ (ಯುಎಪಿ) ಸರಣಿಗೆ ಸೇರಿದ ಭಾರತದ ಮೊದಲ ಮತ್ತು ಏಕೈಕ ಎಂಜಿನಿಯರಿಂಗ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜಾಗತಿಕ ಮಟ್ಟದಲ್ಲಿ ಹಣಕಾಸು ಮತ್ತು ಹೂಡಿಕೆ ಕ್ಷೇತ್ರದಲ್ಲಿ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಸಿಎಫ್‌ಎ ಇನ್‌ಸ್ಟಿಟ್ಯೂಟ್‌ನೊಂದಿಗೆ ಕೈಜೋಡಿಸಿರುವುದು ಎಂಐಟಿಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಎಂಜಿನಿಯರಿಂಗ್ ಶಿಕ್ಷಣದ ಜತೆಗೆ ಹಣಕಾಸು ಕ್ಷೇತ್ರದ ಜಾಗತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಾಧನೆಯು ಅತ್ಯಂತ ಮಹತ್ವದ್ದಾಗಿದೆ.

ಎಂಐಟಿಯ 2023ರಿಂದ ಬಿ.ಟೆಕ್ (ಕಂಪ್ಯೂಟರ್ ಸೈನ್ಸ್ ಮತ್ತು ಫೈನಾನ್ಶಿಯಲ್ ಟೆಕ್ನಾಲಜಿ) ಎಂಬ ವಿನುತನ ಕೋರ್ಸ್ ಅನ್ನು ಆರಂಭಿಸಿದೆ. ಕಂಪ್ಯೂಟರ್ ಸೈನ್ಸ್ ಜತೆಗೆ ಹಣಕಾಸು, ಅನಲಿಟಿಕ್ಸ್‌, ತಂತ್ರಜ್ಞಾನಗಳನ್ನು ಒಳಗೊಂಡ ಅಂತರಶಿಸ್ತೀಯ ಕೋರ್ಸ್‌ ಪರಿಚಯಿಸಿದ ದೇಶದ ಮೊದಲ ಮತ್ತು ಏಕೈಕ ಸಂಸ್ಥೆ ಎಂಬ ಕೀರ್ತಿಗೆ ಪಾತ್ರವಾಗಿದೆ. ಇಂದಿನ ಆಧುನಿಕ ಉದ್ಯೋಗ ಮಾರುಕಟ್ಟೆಗೆ ಪೂರಕವಾದ ಪರಿಣಿತರನ್ನು ಸಿದ್ಧಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತಿದೆ.

ಮೇ 6 ರಂದು ಮಣಿಪಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಫ್‌ಎ ಇನ್‌ಸ್ಟಿಟ್ಯೂಟ್‌ನ ಪ್ರತಿನಿಧಿಗಳಾದ ಸೈಮ್ ಫಕಿಹ್ ಮತ್ತು ಕುಮಾರಿ ಅಂಜನಾ ನಹರ್ ಅವರು ಮಾಹೆಯ ಕುಲಸಚಿವ ಡಾ. ಪಿ. ಗಿರಿಧರ್ ಕಿಣಿ ಅವರಿಗೆ ವಿಶ್ವವಿದ್ಯಾಲಯದ ಈ ಹೊಸ ಮಾನ್ಯತೆಯ ಸ್ಮರಣ ಫಲಕವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಣಿಪಾಲದ ಎಂಐಟಿ ನಿರ್ದೇಶಕ ಕಮಾಂಡರ್ (ಡಾ) ಅನಿಲ್ ರಾಣಾ, ಡಾ. ಕುಂಚಂ ಶ್ಯಾಮ್ ಪ್ರಸಾದ್, ಎಂಐಟಿ ಸ್ಕೂಲ್ ಆಫ್ ಬೇಸಿಕ್ ಸೈನ್ಸಸ್, ಹ್ಯುಮಾನಿಟೀಸ್ ಅಂಡ್ ಮ್ಯಾನೇಜ್‌ಮೆಂಟ್‌ನ ಸಹ ಡೀನ್ ಡಾ. ಯೋಗೇಶ್ ಪೈ ಪಿ ಹಾಗೂ ಇದೇ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಈ ಮಾನ್ಯತೆಯಿಂದಾಗಿ ವಿದ್ಯಾರ್ಥಿಗಳಿಗೆ ಹಣಕಾಸು ತಂತ್ರಜ್ಞಾನದ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಶಿಕ್ಷಣ ದೊರೆಯಲಿದೆ. ಸಿಎಫ್‌ಎ ಇನ್‌ಸ್ಟಿಟ್ಯೂಟ್‌ನ ಈ ಮಾನ್ಯತೆಯು ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಅಧ್ಯಯನ ಸಾಮಗ್ರಿಗಳನ್ನು ಒದಗಿಸುವುದಲ್ಲದೆ, ಉದ್ಯಮದ ತಜ್ಞರೊಂದಿಗೆ ಸಂಪರ್ಕ ಸಾಧಿಸಲು ಮತ್ತು ವಿವಿಧ ವಿದ್ಯಾರ್ಥಿವೇತನಗಳನ್ನು ಪಡೆಯಲು ದಾರಿಯಾಗಿದೆ.

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 08 ಶುಕ್ರವಾರ )

Next Post

ಮೊಬೈಲ್ ವರ್ಜನ ಶಿಬಿರ – ನೋಂದಣಿಗೆ ಕೊನೆಯ ದಿನಾಂಕ ಮೇ 11

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೊಬೈಲ್ ವರ್ಜನ ಶಿಬಿರ – ನೋಂದಣಿಗೆ ಕೊನೆಯ ದಿನಾಂಕ ಮೇ 11

ಮೊಬೈಲ್ ವರ್ಜನ ಶಿಬಿರ - ನೋಂದಣಿಗೆ ಕೊನೆಯ ದಿನಾಂಕ ಮೇ 11

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News