Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ16 ಶನಿವಾರ)

Dhrishya News by Dhrishya News
16/05/2026
in मौसम
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ16 ಶನಿವಾರ)
0
SHARES
10
VIEWS
Share on FacebookShare on Twitter

ಉಡುಪಿ:ಮೇ 16:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.

*01,🐏ಮೇಷರಾಶಿ🐏*

📃, ಈ ರಾಶಿಯವರಿಗೆ ಇಂದು ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ,

ಗಮನಿಸಿ:-ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ,

ಪರಿಹಾರ:-ಇಂದುಕಾಗೆಗಳಿಗೆ ಆಹಾರ ನೀಡಿ,

*02,🐂ವೃಷಭರಾಶಿ🐂*

📃, ಈ ರಾಶಿಯವರು ಹೊಸ ವಾಹನ ಮತ್ತು ವಸ್ತು ಲಾಭವನ್ನು ಪಡೆಯುತ್ತೀರಿ. ಹಳೆಯ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಕೈಗೊಂಡ ವ್ಯವಹಾರದಲ್ಲಿ ಯಶಸ್ಸು ಸಾದಿಸುತ್ತೀರಿ. ಆತ್ಮೀಯರಿಂದ ಅಮೂಲ್ಯ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ವೃತ್ತಿಪರ ವ್ಯವಹಾರಗಳು ಸೂಕ್ತವಾಗಿರುತ್ತವೆ, ಗಮನಿಸಿ:-ಉದ್ಯೋಗದಲ್ಲಿನ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ,

ಪರಿಹಾರ:-ನಿಮ್ಮ ಮನೆದೇವರ ಪ್ರಾರ್ಥನೆ ಮಾಡಿ,

*03,👥ಮಿಥುನ ರಾಶಿ👥*

📃,ಈರಾಶಿಯವರಿಗೆ

ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಉದ್ಯೋಗಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದರಿಂದ ನಷ್ಟ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ,

ಗಮನಿಸಿ:-ದೂರ ಪ್ರಯಾಣದಿಂದ ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ,

ಪರಿಹಾರ:- ನಿಮ್ಮಗುರುಗಳ ಮಾರ್ಗದರ್ಶನ ಪಡೆಯಿರಿ,

*04,🦀ಕಟಕ ರಾಶಿ🦀*

📃, ಈ ರಾಶಿಯವರಿಗೆ ಇಂದು ಕೌಟುಂಬಿಕ ವಿಚಾರಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗಲಿದೆ. ಪ್ರಮುಖ ವ್ಯವಹಾರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹೊಸ ವಸ್ತುಗಳ ಖರೀದಿ ಯೋಗವಿದೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭಕ್ಕಿಂತ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ,

ಗಮನಿಸಿ:-ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ,

ಪರಿಹಾರ:-ಶಿವರಾಧನೆ ಮಾಡುವುದು ಒಳ್ಳೆಯದು,

*05,🦁ಸಿಂಹ ರಾಶಿ🦁*

📃, ಈ ರಾಶಿಯವರು ಇಂದು ಹಣಕಾಸಿನ ಏರಿಳಿತದಿಂದ ಹೊರಬರುತ್ತೀರಿ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭೋಜನ, ಮನೋರಂಜನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ, ಗಮನಿಸಿ:-ಉದ್ಯೋಗಸ್ಥರು ಅಧಿಕಾರಿಗಳ ಕೃಪೆಗೆ ಪಾತ್ರರಾಗುತ್ತೀರಿ,

ಪರಿಹಾರ:- ಮಾತೇ ಮಹಾಲಕ್ಷ್ಮಿಯ ಅನುಗ್ರಹಕ್ಕಾಗಿ ಗೂಬೆ ವಿಗ್ರಹವನ್ನು ಪೂಜಿಸಿ,

*06,👩‍🦳ಕನ್ಯಾ ರಾಶಿ👩‍🦳*

📃, ಈ ರಾಶಿಯವರು ಇಂದು ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ದೂರದ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ, ಗಮನಿಸಿ:-ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ,

ಪರಿಹಾರ:-ನಿಮ್ಮ ಗ್ರಾಮ ದೇವತೆಯನ್ನು ಪ್ರಾರ್ಥಿಸಿ,

*07,⚖️ತುಲಾ ರಾಶಿ⚖️*

📃, ಈ ರಾಶಿಯವರು ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸ ಬಹುದು.ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಮನೆಯ ಹೊರಗೆ ಸಾಲದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಅಡೆಚಣೆಗಳು ಎದುರಾಗುತ್ತವೆ. ವೃತ್ತಿ ವ್ಯಾಪಾರದಲ್ಲಿ ಪಾಲುದಾರರೊಂದಿಗಿನ ವಿವಾದಗಳಿಂದ ದೂರವಿರುವುದು ಉತ್ತಮ, ಗಮನಿಸಿ:-ಇಂದು ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ,

ಪರಿಹಾರ:-ಶ್ರೀ ಹನುಮಂತನನ್ನು ಪ್ರಾರ್ಥಿಸಿ, 

*08,🦂ವೃಶ್ಚಿಕ ರಾಶಿ🦂*

📃, ಈ ರಾಶಿಯವರ ನಿರುದ್ಯೋಗಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ, ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡಲಿವೆ. ದೂರ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಕುಟುಂಬ ಸದಸ್ಯರೊಂದಿಗೆ ಸಾಮರಸ್ಯ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳಲ್ಲಿ ಸಂಗಾತಿಯ ಸಹಾಯ ತೆಗೆದುಕೊಳ್ಳುವುದು ಒಳ್ಳೆಯದು,

ಗಮನಿಸಿ:- ಇಂದು ವೃತ್ತಿಪರ ಉದ್ಯೋಗಗಳಲ್ಲಿ ಅಪೇಕ್ಷಿತ ಪ್ರಗತಿ ಸಾಧಿಸಲಾಗುತ್ತದೆ,

ಪರಿಹಾರ:- ಇಂದು ಸಂಜೆ ನವಗ್ರಹ ಪ್ರದಕ್ಷಿಣೆ ಮಾಡಿ ಶುಭವಾಗುವುದು,

*09,🏹ಧನಸ್ಸು ರಾಶಿ🏹*

📃, ಈ ರಾಶಿಯವರಿಗೆ ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಆರ್ಥಿಕ ವಾತಾವರಣ ಉತ್ತಮವಾಗಿರುತ್ತದೆ. ಅಗತ್ಯಕ್ಕೆ ತಕ್ಕಂತೆ ಸಂಬಂಧಿಕರಿಂದ ನೆರವು ದೊರೆಯಲಿದೆ. ವೃತ್ತಿ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ಉದ್ಯೋಗದಲ್ಲಿ ನಿಮ್ಮ ದಕ್ಷತೆಯನ್ನು ಅಧಿಕಾರಿಗಳು ಗುರುತಿಸುತ್ತಾರೆ,

ಗಮನಿಸಿ:- ಇಂದು ವ್ಯವಹಾರಗಳು ಲಾಭದಾಯಕವಾಗಿರುತ್ತವೆ,

ಪರಿಹಾರ:-ಗಾಯತ್ರಿ ಮಂತ್ರ ಪಠಣೆ ಮಾಡಿ ಒಳ್ಳೆಯದಾಗುವುದು,

*10,🐊ಮಕರ ರಾಶಿ🐊*

📃, ಈ ರಾಶಿಯವರಿಗೆ ಇಂದು ಆದಾಯಕ್ಕಿಂತ ಖರ್ಚುಗಳು ಅಧಿಕವಾಗಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಸಮಸ್ಯೆಗಳು ಎದುರಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಅನಿವಾರ್ಯವಾಗಿ ಮಾತಿನ ಚಕಮಕಿ ನಡೆಯುತ್ತದೆ, ಹೆಚ್ಚುವರಿ ಜವಾಬ್ದಾರಿಗಳಿಂದ ನೌಕರರಿಗೆ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಸ್ನೇಹಿತರೊಂದಿಗೆ ಭಿನ್ನಭಿಪ್ರಾಯಗಳು ಉಂಟಾಗುತ್ತವೆ,

ಗಮನಿಸಿ:-ವಾಹನ ಪ್ರಯಾಣದಲ್ಲಿ ಹೆಚ್ಚು ಜಾಗರೂಕರಾಗಿರಿ,

ಪರಿಹಾರ:-ಅನಾಥರಿಗೆ ಅನ್ನದಾನ ಮಾಡಿ,

*11,⚱️ಕುಂಭ ರಾಶಿ⚱️*

📃, ಈ ರಾಶಿಯವರು ಇಂದು ಮಾಡುವ ಕೆಲಸದಲ್ಲಿ ಖರ್ಚು ಮತ್ತು ಶ್ರಮ ಅಧಿಕವಾಗಲಿದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಬಂಧುಗಳಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತವೆ, ವೃತ್ತಿ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗ ವಿಷಯದಲ್ಲಿ ಅಧಿಕಾರಿಗಳು ಚರ್ಚೆಗಳಿಗೆ ಹೋಗದಿರುವುದು ಉತ್ತಮ,

ಗಮನಿಸಿ:-ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ,

ಪರಿಹಾರ:-ತಾಯಿ ದುರ್ಗೆಯನ್ನು ಸ್ಮರಿಸಿ ನಿಮ್ಮ ಪ್ರಯತ್ನಗಳು ನೆರವೇರುತ್ತವೆ,

*12,🐬ಮೀನ ರಾಶಿ🐬*

📃, ಈ ರಾಶಿಯವರಿಗೆ ಮನೆಯ ಹೊರಗೆ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ ಮತ್ತು ದೂರ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಪ್ರಮುಖ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ, ಗೃಹ ನಿರ್ಮಾಣ ಕಾರ್ಯಗಳು ಚುರುಕುಗೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸುತ್ತೀರಿ, ಗಮನಿಸಿ:-ಉದ್ಯೋಗಿಗಳಿಗೆ ಹೆಚ್ಚುವರಿಜವಾಬ್ದಾರಿಗಳಿದ್ದರೂ. ನಿಧಾನವಾಗಿ ಪೂರ್ಣಗೊಳ್ಳುತ್ತದೆ,

ಪರಿಹಾರ:-ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,

ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ದ್ರಶ್ಯ ನ್ಯೂಸ್  ವೆಬ್ ಸೈಟ್ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

ಮೂಲ :ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ :ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

Next Post

ಮಂಗಳೂರಿನಲ್ಲಿ ಮಾಹೆ 33ನೇ ಘಟಿಕೋತ್ಸವ: ‘ಎಐ ಆಲ್ಗಾರಿದಮ್‌ಗಳಿಗಿಂತ ಮಾನವೀಯ ಅನುಕಂಪವೇ ನಿಮ್ಮ ನಿಜವಾದ ಶಕ್ತಿʼ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರಿನಲ್ಲಿ ಮಾಹೆ 33ನೇ ಘಟಿಕೋತ್ಸವ: ‘ಎಐ ಆಲ್ಗಾರಿದಮ್‌ಗಳಿಗಿಂತ ಮಾನವೀಯ ಅನುಕಂಪವೇ ನಿಮ್ಮ ನಿಜವಾದ ಶಕ್ತಿʼ

ಮಂಗಳೂರಿನಲ್ಲಿ ಮಾಹೆ 33ನೇ ಘಟಿಕೋತ್ಸವ: ‘ಎಐ ಆಲ್ಗಾರಿದಮ್‌ಗಳಿಗಿಂತ ಮಾನವೀಯ ಅನುಕಂಪವೇ ನಿಮ್ಮ ನಿಜವಾದ ಶಕ್ತಿʼ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved