ಉಡುಪಿ:ಉಡುಪಿಯ ವಿಶೇಷ ಮಕ್ಕಳ ಸರ್ವತೋಮುಖದ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯವನ ಪಾರ್ಕ್” ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು.
ವಿಶೇಷ ಚೇತನ ಮಕ್ಕಳಿಗೆ ಮುಕ್ತವಾಗಿ ಆಟವಾಡಲು ಹಾಗೂ ಅವರಲ್ಲಿ ನವಚೇತನ ತುಂಬಲು ಈ ಪಾರ್ಕ್ ಮುಂದಿನ ದಿನಗಳಲ್ಲಿ ಪ್ರಮುಖ ವೇದಿಕೆಯಾಗಲಿದೆ.
ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಪ್ರಮುಖರಾದ ರುದ್ರಣ್ಣ, ಶ್ರೀಮತಿ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈ ವಿಠ್ಠಲ್, ಹರಿಪ್ರಸಾದ ರಾಯ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.








