Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ

Dhrishya News by Dhrishya News
18/05/2026
in ಕರಾವಳಿ
0
ಕಾರ್ಕಳ: ನಾರಿಶಕ್ತಿ ಜಾಗೃತಿ ಸಮಾವೇಶ, ಸಾಧಕಿಯರಿಗೆ ಸನ್ಮಾನ
0
SHARES
18
VIEWS
Share on FacebookShare on Twitter

ಕಾರ್ಕಳ: ಮಹಿಳಾ ಸಬಲೀಕರಣ ಎಂದರೆ ಕೇವಲ ಹಕ್ಕುಗಳಿಗಾಗಿ ಸದ್ದು ಮಾಡುವುದಲ್ಲ. ಬದಲಿಗೆ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಯುತ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ, ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ ಮುನ್ನಡೆಯುವುದಾಗಿದೆ ಎಂದು ವಾಗ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುರಭಿ ಹೊಡಿಗೆರೆ ಪ್ರತಿಪಾದಿಸಿದರು.

ಇಲ್ಲಿನ ಮಂಜುನಾಥ ಪೈ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ನಾರಿಶಕ್ತಿ ಸಾಧಕ ಮಹಿಳೆಯರ ಅಭಿನಂದನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು. ಆಧುನಿಕ ಸಮಾಜದಲ್ಲಿ ಮಹಿಳೆಗೆ ಕೇವಲ ಸುರಕ್ಷತೆ ಅಥವಾ ರಕ್ಷಣೆ ನೀಡಿದರೆ ಸಾಲದು. ಅದಕ್ಕಿಂತ ಹೆಚ್ಚಾಗಿ ಆಕೆಗೆ ಸ್ವತಂತ್ರವಾಗಿ ಮತ್ತು ಮುಕ್ತವಾಗಿ ಬೆಳೆಯುವ ಪೂರಕ ವಾತಾವರಣ ಹಾಗೂ ಸಮಾನ ನ್ಯಾಯದ ಅಗತ್ಯವಿದೆ. ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತಮ್ಮ ಕಾಲಿನ ಮೇಲೆ ತಾವು ನಿಂತು ಸ್ವಾವಲಂಬಿಗಳಾದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬ ಮಹಿಳೆಯೂ ತನ್ನ ಸೌಮ್ಯತೆಯ ಹಿಂದಿರುವ ನಾರಿಶಕ್ತಿಯನ್ನು ಜಾಗೃತಗೊಳಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಸಾಧ್ವಿ ಶ್ರೀ ಮಾತಾ ನಂದಮಯೀ ಅವರು ಇತಿಹಾಸದ ಪುಟಗಳನ್ನು ತಿರುವಿ ನೋಡಿದರೆ ಪ್ರತಿ ಯುಗದಲ್ಲೂ ಮಹಿಳೆ ಕೇವಲ ಒಂದು ಪಾತ್ರವಾಗಿ ಉಳಿದಿಲ್ಲ, ಆಕೆ ಶಕ್ತಿಯಾಗಿ ಹೊರಹೊಮ್ಮಿದ್ದಾಳೆ. ಭಾರತೀಯ ಸಂಸ್ಕೃತಿಯಲ್ಲಿ ಮಾತ್ರ ಮಹಿಳೆಯರನ್ನು ಸರಸ್ವತಿ, ಲಕ್ಷ್ಮಿಯಂತಹ ದೇವತೆಯ ರೂಪದಲ್ಲಿ ಆರಾಧಿಸುವ ಶ್ರೇಷ್ಠ ಪರಂಪರೆ ಇದೆ. ಇಂದಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯೇ ಅತ್ಯುನ್ನತ ಸ್ಥಾನದಲ್ಲಿದ್ದಾಳೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ ಮಹಿಳೆಯರು ಜನ್ಮತಃ ತ್ಯಾಗಮಯಿಗಳು ಮತ್ತು ಆದರ್ಶ ಜೀವನ ನಡೆಸುವವರು. ಇಂದು ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯೆ ಮುದುಡಿ ಕೂರದೆ ಶಿಕ್ಷಣ, ವಿಜ್ಞಾನ, ಕ್ರೀಡೆ, ರಾಜಕೀಯ ಮತ್ತು ಸಮಾಜಸೇವೆಯಲ್ಲಿ ಅಪೂರ್ವ ಸಾಧನೆ ಮಾಡುವ ಮೂಲಕ ಹೊಸ ಇತಿಹಾಸ ಬರೆಯುತ್ತಿದ್ದಾರೆ. ಇಂತಹ ಸಾಧಕಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕಿ ಡಾ. ಸಬಿತಾ ಕೊರಗ ಉಪಸ್ಥಿತರಿದ್ದರು.

ಮಹಿಳಾ ಆಯೋಗ ಮಾಜಿ ಸದಸ್ಯೆ ಶ್ಯಾಮಲ ಕುಂದರ್, ಶಿಕ್ಷಣ ಕ್ಷೇತ್ರದ ಸಾವಿತ್ರಿ ಮನೋಹರ್, ಧಾರ್ಮಿಕ ಕ್ಷೇತ್ರದ ಜ್ಯೋತಿ ಪೈ ಸಾಮಾಜಿಕ ಕ್ಷೇತ್ರದ ತನುಲ, ಸಾಹಿತ್ಯ ಕ್ಷೇತ್ರದ ಪ್ರೇಮ ಸುರಿಗ ಅಜೆಕಾರು, ಕ್ರೀಡಾ ಕ್ಷೇತ್ರದ ಅಪ್ಸರಾ ಕಟೀಲ್, ಸಮಾಜಸೇವೆಗಾಗಿ ಆಯೇಷಾ ಬಾನು, ಆರೋಗ್ಯ ಸೇವೆಗಾಗಿ ಲೈಲಾ ಥೋಮಸ್ ಹಾಗೂ ಬಾಲ ಪ್ರತಿಭೆಗಳಾದ ಭೂಮಿ, ಅನ್ವಿ ಹೆಚ್. ಅಂಚನ್, ಸುಧಾನ್ಯ, ಪ್ರಣತಿ ಬಿ. ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಅಜೆಕಾರು ಸಿ.ಎ ಬ್ಯಾಂಕು ನಿರ್ದೆಶಕಿ ಜಲಜ ಸ್ವಾಗತಿಸಿದರು, ವಿನಯ ಡಿ. ಬಂಗೇರ ಪ್ರಸ್ತಾವನೆಗೈದರು. ಜ್ಯೋತಿರಮೇಶ್ ವಂದಿಸಿ, ನಿರೂಪಿಸಿದರು. ಪ್ರಮೀಳಾ ಪ್ರಾರ್ಥಿಸಿದರು.

Previous Post

ಕೊಲ್ಲೂರು ಬಳಿ ಭೀಕರ ಅಪಘಾತ: ಲಾರಿಗೆ ಜೀಪು ಡಿಕ್ಕಿ – ಇಬ್ಬರು ಮೃತ್ಯು , ಮಕ್ಕಳೂ ಸೇರಿ ಎಂಟು ಮಂದಿಗೆ ಗಾಯ..!

Next Post

4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ

4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿದಿಯೂರು ಸಂಪಿಗೆ ನಗರ ಮುಖ್ಯರಸ್ತೆ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News