Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕತ್ತಿಯಿಂದ ಕಡಿದು ಮೂವರಿಗೆ ಗಾಯ, ನಾಲ್ವರ ವಿರುದ್ಧ ಪ್ರಕರಣ ದಾಖಲು..!

Dhrishya News by Dhrishya News
19/05/2026
in ಸುದ್ದಿಗಳು
0
ಕತ್ತಿಯಿಂದ ಕಡಿದು ಮೂವರಿಗೆ ಗಾಯ, ನಾಲ್ವರ ವಿರುದ್ಧ ಪ್ರಕರಣ ದಾಖಲು..!
0
SHARES
18
VIEWS
Share on FacebookShare on Twitter

ಕಾಪು: ವೈಯಕ್ತಿಕ ವೈಷಮ್ಯದ ಹಿನ್ನೆಲೆ ವಾಚ್‌ಮನ್‌ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪಿರ್ಯಾದಿದಾರರಾದ ಶಂಕರ್ ಗಾಣಿಗ (58) ಅವರು ಉಡುಪಿ ಸೂಪರ್ ಬಜಾರ್‌ನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದು, ಅದೇ ಕಟ್ಟಡದಲ್ಲಿರುವ ಆರ್‌.ಕೆ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಪರಿಚಯದ ಕೃಷ್ಣ ಗಾಣಿಗ ಎಂಬವರು ಕೆಲಸದ ವಿಚಾರವಾಗಿ ಆಗಾಗ ಗುರಾಯಿಸಿ ನಿಂದಿಸುತ್ತಿದ್ದರೆಂದು ದೂರಲಾಗಿದೆ.

ಸುಮಾರು 15 ದಿನಗಳ ಹಿಂದೆ ಕೃಷ್ಣ ಗಾಣಿಗ ಮದ್ಯಪಾನ ಮಾಡಿಕೊಂಡು ಬಂದು ಶಂಕರ್ ಗಾಣಿಗ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇದೇ ವಿಚಾರವಾಗಿ ಮೇ 17ರಂದು ಸಂಜೆ 6.30ರ ಸುಮಾರಿಗೆ ಉಡುಪಿಯ ಬಲಾಯಿಪಾದೆ ಬಳಿ ನಡೆದುಕೊಂಡು ಹೋಗುತ್ತಿದ್ದ ಶಂಕರ್ ಗಾಣಿಗ ಅವರ ಮೇಲೆ ಕೃಷ್ಣ ಗಾಣಿಗ ಹಾಗೂ ಆತನ ಸ್ನೇಹಿತರಾದ ದಯಾನಂದ ಮತ್ತು ಅಣ್ಣೋಜಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವಿಚಾರವನ್ನು ಮಗ ಸೃಜನ್‌ಗೆ ತಿಳಿಸಿದ ಬಳಿಕ ರಾಜಿ ಮಾತುಕತೆಗಾಗಿ ಶಂಕರ್ ಗಾಣಿಗ, ಸೃಜನ್ ಹಾಗೂ ಸಂಬಂಧಿ ಸಂತೋಷ್ ಅವರು ಕೃಷ್ಣ ಗಾಣಿಗ ಮನೆಗೆ ತೆರಳಿದ್ದರು. ಈ ವೇಳೆ “ಯಾಕೆ ಹಲ್ಲೆ ಮಾಡಿದ್ದೀರಿ” ಎಂದು ಪ್ರಶ್ನಿಸಿದ ಸಂದರ್ಭ ಕೃಷ್ಣ ಗಾಣಿಗ ಹಾಗೂ ಆತನ ಪತ್ನಿ ಕೈಯಲ್ಲಿ ಕತ್ತಿ ಮತ್ತು ಕೋಲು ಹಿಡಿದು ಬಂದು ಶಂಕರ್ ಗಾಣಿಗ ಅವರ ತಲೆಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆ ತಡೆಯಲು ಮುಂದಾದ ಸೃಜನ್ ಹಾಗೂ ಸಂತೋಷ್ ಮೇಲೂ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಅಲ್ಲಿಗೆ ಬಂದ ದಯಾನಂದ ಮತ್ತು ಅಣ್ಣೋಜಿ ಕೂಡ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Previous Post

ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:19-05-2026 ಮಂಗಳವಾರ..!

Next Post

ಪತ್ನಿಯಿಂದ ಪತಿಗೆ ಚೂರಿ ಇರಿತ: ಕಾರ್ಕಳದಲ್ಲಿ ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪತ್ನಿಯಿಂದ ಪತಿಗೆ ಚೂರಿ ಇರಿತ: ಕಾರ್ಕಳದಲ್ಲಿ ಪ್ರಕರಣ ದಾಖಲು

ಪತ್ನಿಯಿಂದ ಪತಿಗೆ ಚೂರಿ ಇರಿತ: ಕಾರ್ಕಳದಲ್ಲಿ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ  ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಮಾನ್ಯ ಪೌರಾಡಳಿತ ಸಚಿವ ಶ್ರೀ ಎಚ್. ಸಿ. ಬಾಲಕೃಷ್ಣ ಅವರಿಂದ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ

17/09/2026
ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ ನಗರ ಬಿಜೆಪಿಯಿಂದ ಬೃಹತ್ ರಕ್ತದಾನ ಶಿಬಿರ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

17/09/2026
ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಪ್ರಯಾಣ ಸೇವೆಗೆ ಚಾಲನೆ

17/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

17/09/2026

Recent News

imunify-bot-check