Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ನವೀಕೃತ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿರುವ ಡಾ. ಟಿಎಂಎ ಪೈ ಆಸ್ಪತ್ರೆ; ಜೂನ್ 1ರಿಂದ ಸೇವೆ ಆರಂಭ..!

Dhrishya News by Dhrishya News
21/05/2026
in ಮುಖಪುಟ
0
ಉಡುಪಿ: ನವೀಕೃತ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿರುವ ಡಾ. ಟಿಎಂಎ ಪೈ ಆಸ್ಪತ್ರೆ; ಜೂನ್ 1ರಿಂದ ಸೇವೆ ಆರಂಭ..!
0
SHARES
63
VIEWS
Share on FacebookShare on Twitter

ಉಡುಪಿ, ಮೇ 21, 2026: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ನವೀಕರಿಸಿದ ಮತ್ತು ಉತ್ತಮ ಮೂಲಸೌಕರ್ಯದೊಂದಿಗೆ ಹೊಸ ಸ್ಥಳಕ್ಕೆ ಸ್ಥಳಾಂತರಗೊಳ್ಳುತ್ತಿದೆ , ಜೂನ್ 1, 2026 ರಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತದೆ ಮೇ 22ರಿಂದ 24ರವರೆಗೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರ್ವಜನಿಕರಿಗೆ ಆಸ್ಪತ್ರೆ ಮುಕ್ತ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

1984ರಲ್ಲಿ ಸ್ಥಾಪನೆಯಾದ ಈ ಆಸ್ಪತ್ರೆ, ಉಡುಪಿ ಹಾಗೂ ಸುತ್ತಮುತ್ತಲಿನ ಜನತೆಗೆ ನಾಲ್ಕು ದಶಕಗಳಿಗೂ ಅಧಿಕ ಕಾಲ ಆರೋಗ್ಯ ಸೇವೆ ನೀಡಿದ ಬಳಿಕ ಇದೀಗ ವಿಶಾಲ ಮತ್ತು ಆಧುನಿಕ ಕ್ಯಾಂಪಸ್‌ಗೆ ಸ್ಥಳಾಂತರಗೊಳ್ಳುತ್ತಿದೆ. 1.4 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಹೊಸ ಆಸ್ಪತ್ರೆ, ಸುಧಾರಿತ ಮೂಲಸೌಕರ್ಯ, ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ರೋಗಿ ಸ್ನೇಹಿ ಸೌಲಭ್ಯಗಳೊಂದಿಗೆ ರೂಪುಗೊಂಡಿದೆ.

152 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ಅಸ್ಥಿ ಮತ್ತು ಕೀಲು ವಿಭಾಗ, ಕಿವಿ-ಮೂಗು-ಗಂಟಲು, ಪ್ರಸೂತಿ ಮತ್ತು ಸ್ತ್ರೀರೋಗ, ನೇತ್ರ, ಮನೋವೈದ್ಯಶಾಸ್ತ್ರ, ಗ್ಯಾಸ್ಟ್ರೋಎಂಟರಾಲಜಿ, ಸಾಮಾನ್ಯ ಶಸ್ತ್ರಚಿಕಿತ್ಸೆ, ಚರ್ಮರೋಗ, ದಂತವೈದ್ಯಶಾಸ್ತ್ರ, ಫಿಸಿಯೋಥೆರಪಿ ಸೇರಿದಂತೆ ಹಲವು ವಿಭಾಗಗಳು ಕಾರ್ಯನಿರ್ವಹಿಸಲಿವೆ. ಜೊತೆಗೆ ಹೃದ್ರೋಗ, ನರವಿಜ್ಞಾನ, ಮೂತ್ರಪಿಂಡಶಾಸ್ತ್ರ, ಆಂಕೊಲಾಜಿ, ನರಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಮಕ್ಕಳ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಹಲವು ಸೂಪರ್-ಸ್ಪೆಷಾಲಿಟಿ ಸೇವೆಗಳೂ ಲಭ್ಯವಿರಲಿವೆ.

24×7 ತುರ್ತು ಚಿಕಿತ್ಸೆ ಮತ್ತು ಅಪಘಾತ ಆರೈಕೆ ಕೇಂದ್ರ, ನಾಲ್ಕು ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳು, 25 ಹಾಸಿಗೆಗಳ ಐಸಿಯು, ಸುಧಾರಿತ ಡಯಾಲಿಸಿಸ್ ಕೇಂದ್ರ, ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್, ಎಕ್ಸ್-ರೇ, ಪ್ರಯೋಗಾಲಯ, ಔಷಧಾಲಯ, ಆರೋಗ್ಯ ತಪಾಸಣೆ ಘಟಕ, ಡೇ ಕೇರ್ ಸೇವೆಗಳು ಹಾಗೂ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಹೊಸ ಆಸ್ಪತ್ರೆಯ ಪ್ರಮುಖ ಆಕರ್ಷಣೆಗಳಾಗಿವೆ.

ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಮಾತನಾಡಿ, ಹೊಸ ಆಸ್ಪತ್ರೆಯ ಉದ್ಘಾಟನೆ ಸಂಸ್ಥೆಯ ಆರೋಗ್ಯ ಸೇವಾ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ತುರ್ತು ಹಾಗೂ ನಿರ್ಣಾಯಕ ಆರೈಕೆ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ತುರ್ತು ಸಂದರ್ಭಗಳಿಗೆ ತ್ವರಿತ ಸೇವೆ ಒದಗಿಸುವಂತೆ ಆಸ್ಪತ್ರೆಯನ್ನು ವಿನ್ಯಾಸಗೊಳಿಸಲಾಗಿದೆ ಎಂದರು.

ಉಪ ವೈದ್ಯಕೀಯ ಅಧೀಕ್ಷಕ ಡಾ. ರಾಜಾರಾಮ್ ಪೈ ಅವರು, “ಆಧುನಿಕ ಸೌಲಭ್ಯಗಳಿದ್ದರೂ ಸಾಮಾನ್ಯ ಜನರಿಗೆ ಕೈಗೆಟುಕುವ ಮತ್ತು ಪಾರದರ್ಶಕ ಚಿಕಿತ್ಸಾ ವೆಚ್ಚಗಳನ್ನು ಕಾಯ್ದುಕೊಳ್ಳುವ ಬದ್ಧತೆ ಆಸ್ಪತ್ರೆಯದ್ದಾಗಿದೆ” ಎಂದು ತಿಳಿಸಿದರು.

ಆಡಳಿತ ಮುಖ್ಯಸ್ಥ ಹಾಗೂ ಗ್ರೂಪ್ ಮ್ಯಾನೇಜರ್ ಶ್ರೀ ದೀಪಕ್ ಪ್ರಭು ಮಾತನಾಡಿ, ರೋಗಿಗಳ ಸುರಕ್ಷತೆ, ಗುಣಮಟ್ಟದ ಆರೈಕೆ, ಸುಲಭ ಪ್ರವೇಶ, ವೈದ್ಯರಿಗೆ ದಕ್ಷ ನಿರ್ವಹಣಾ ವ್ಯವಸ್ಥೆ ಹಾಗೂ ಭವಿಷ್ಯದ ಆರೋಗ್ಯ ಅಗತ್ಯಗಳನ್ನು ಗಮನದಲ್ಲಿಟ್ಟು ಆಸ್ಪತ್ರೆಯನ್ನು ಯೋಜಿಸಲಾಗಿದೆ ಎಂದು ಹೇಳಿದರು.

“ಹೀಲಿಂಗ್ ಹಾರ್ಟ್ಸ್, ಓಪನ್ ಡೋರ್ಸ್” ಥೀಮ್ ಅಡಿಯಲ್ಲಿ ಸಾರ್ವಜನಿಕರು ಹಾಗೂ ಕಾರ್ಪೊರೇಟ್ ಪ್ರತಿನಿಧಿಗಳನ್ನು ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ವೀಕ್ಷಣೆ ಮಾಡಲು ಹಾಗೂ ಆಸ್ಪತ್ರೆ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು ಆಹ್ವಾನಿಸಲಾಗಿದೆ.

Previous Post

ಹೆಚ್ಚಿನ ಲಾಭಾಂಶದ ಆಮಿಷ: ಕಾರ್ಕಳ ವ್ಯಕ್ತಿಗೆ ₹2 ಲಕ್ಷ ಆನ್‌ಲೈನ್ ವಂಚನೆ..!

Next Post

ನಾಪತ್ತೆಯಾದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಪತ್ತೆಯಾದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check