ಬ್ರಹ್ಮಾವರ: ಹಂದಾಡಿ ಗ್ರಾಮದ ಭಂಡಾರಿ ಮನೆ ನಿವಾಸಿ ಲಕ್ಷ್ಮಣ ಪೂಜಾರಿ (57) ಅವರೊಂದಿಗೆ ವಾಸವಾಗಿದ್ದ ಅವರ ಅಕ್ಕ ಮೀನಾಕ್ಷಿ (65) ಅವರು ಮೇ 19ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯಿಂದ ತೆರಳಿದ್ದು, ಬಳಿಕ ಕಾಣೆಯಾಗಿದ್ದರು.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆ ಪ್ರಕರಣ ದಾಖಲಾಗಿತ್ತು.
ನಂತರ ಮೇ 22ರಂದು ಬೆಳಿಗ್ಗೆ 6:30ರ ಸುಮಾರಿಗೆ ಹಂದಾಡಿ ಗ್ರಾಮದ ಬೆಣ್ಣೆಕುದ್ರು ಸೀತಾ ನದಿಯ ತೀರದಲ್ಲಿ ಮೀನಾಕ್ಷಿ ಅವರ ಮೃತದೇಹ ಪತ್ತೆಯಾಗಿದೆ. ಮನೆ ಬಿಟ್ಟು ನದಿಯ ತಟಕ್ಕೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







