Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಿಸದೇ ಸಾವು..!

Dhrishya News by Dhrishya News
24/05/2026
in ಸುದ್ದಿಗಳು
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
16
VIEWS
Share on FacebookShare on Twitter

ಶಂಕರನಾರಾಯಣ: ಬಸ್ಸಿಗೆ ಕಾಯುತ್ತಾ ಸಿಮೆಂಟ್ ಬೆಂಚ್ ಮೇಲೆ ಕುಳಿತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.

ಮೃತರನ್ನು ತಾರೇಮರನ ಜೆಡ್ಡು ನಿವಾಸಿ ಮಂಜುಳಾ ಪೂಜಾರ್ತಿ (50) ಎಂದು ಗುರುತಿಸಲಾಗಿದೆ. ಅವರ ಅಣ್ಣ ರಘುರಾಮ ಪೂಜಾರಿ ನೀಡಿದ ದೂರಿನಂತೆ, ಮಂಜುಳಾ ಅವರು ಮೇ 23ರಂದು ಉಳ್ಳೂರಿನ ಗೇರು ಬೀಜ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ದೈವದ ಮನೆಯ ಪೂಜೆಯ ನಿಮಿತ್ತ ತನ್ನ ಪಾಲಿನ ಹಣವನ್ನು ನೀಡಲು ಪಿರ್ಯಾದಿದಾರರ ಮನೆಗೆ ಬಂದಿದ್ದರು.

ಬಳಿಕ ಮನೆಗೆ ತೆರಳಲು ಬಸ್ಸಿಗೆ ಕಾಯುತ್ತಾ ಸಿಮೆಂಟ್ ಬೆಂಚ್ ಮೇಲೆ ಕುಳಿತಿದ್ದ ವೇಳೆ ಸಂಜೆ ಸುಮಾರು 4 ಗಂಟೆಗೆ  ಕಾರನ್ನು ಚಾಲಕ ಪ್ರಣಯ ಶೆಟ್ಟಿ ಅಂಪಾರು ಕಡೆಯಿಂದ ಶಂಕರನಾರಾಯಣ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಏಕಾಏಕಿ ರಸ್ತೆಯ ಬಲಭಾಗಕ್ಕೆ ತಿರುಗಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಕಾರು ಬಸ್ಸಿಗೆ ಕಾಯುತ್ತಿದ್ದ ಮಂಜುಳಾ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಎಡ ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಕ್ಷಣ ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮಂಜುಳಾ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಉಡುಪಿ: ಉದ್ಯೋಗದ ಆಮಿಷ: ₹6.23 ಲಕ್ಷ ವಂಚನೆ; ಪ್ರಕರಣ ದಾಖಲು

Next Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check