Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಂಗ್ರೆಸ್ ನಾಯಕತ್ವ ಬದಲಾವಣೆ? ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರಾ?

Dhrishya News by Dhrishya News
27/05/2026
in ಸುದ್ದಿಗಳು
0
ಕಾಂಗ್ರೆಸ್ ನಾಯಕತ್ವ ಬದಲಾವಣೆ? ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರಾ?
0
SHARES
11
VIEWS
Share on FacebookShare on Twitter

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲು ಸಿಎಂ ಕಚೇರಿಯಿಂದ ಸಮಯ ಕೋರಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಸುದೀರ್ಘ ಮ್ಯಾರಥಾನ್ ಸಭೆಯಲ್ಲಿ, ರಾಹುಲ್ ಗಾಂಧಿ ಅವರೊಂದಿಗಿನ ಒನ್-ಟು-ಒನ್ ಮಾತುಕತೆ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ಸೂತ್ರದಂತೆ ಹುದ್ದೆ ತ್ಯಜಿಸಲು ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ದೆಹಲಿಯಿಂದ ವಾಪಸ್ಸಾದ ಬಳಿಕ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನಾಳೆ ಬೆಳಗ್ಗೆ ತಮ್ಮ ನಿವಾಸದಲ್ಲಿ ಎಲ್ಲಾ ಸಚಿವರಿಗಾಗಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟ ಆಯೋಜಿಸಿದ್ದಾರೆ. ಈ ಸಭೆಗೆ ವೈಯಕ್ತಿಕವಾಗಿ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಿಂದ ಗುರುವಾರ ಮುಂಜಾನೆ ಬೆಂಗಳೂರಿಗೆ ಆಗಮಿಸಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ, ಸಿಎಂ ರಾಜೀನಾಮೆ ಕುರಿತ ಸುದ್ದಿಗಳು ಹರಡುತ್ತಿದ್ದಂತೆ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಆಪ್ತ ಸಚಿವರು ಹಾಗೂ ಶಾಸಕರು ಆಗಮಿಸುತ್ತಿದ್ದಾರೆ. ಸಚಿವರಾದ ಜಮೀರ್ ಅಹ್ಮದ್ ಖಾನ್, ಎಂ.ಸಿ. ಸುಧಾಕರ್, ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಸೇರಿದಂತೆ ಹಲವು ನಾಯಕರು ಸಿಎಂ ಅವರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ಬೆಳಗಿನ ಉಪಾಹಾರ ಕೂಟದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Previous Post

ನಕಲಿ ಚಿನ್ನ ಅಡವಿಟ್ಟು ₹3.49 ಲಕ್ಷ ಸಾಲ; ಪಡುಬಿದ್ರಿಯಲ್ಲಿ ಪ್ರಕರಣ ದಾಖಲು

Next Post

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check