Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು: ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭ

Dhrishya News by Dhrishya News
01/06/2026
in ಕರಾವಳಿ, ಸುದ್ದಿಗಳು
0
ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು: ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭ
0
SHARES
12
VIEWS
Share on FacebookShare on Twitter

ಬೆಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರಿನ ನಡುವಿನ ರೈಲು ಪ್ರಯಾಣ ಮತ್ತಷ್ಟು ವೇಗ ಪಡೆದುಕೊಳ್ಳಲಿದ್ದು, ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಜೂನ್ 3ರಿಂದ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ . ಸೋಮಣ್ಣ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಕಲೇಶಪುರ–ಕುಕ್ಕೆ ಸುಬ್ರಹ್ಮಣ್ಯ ನಡುವಿನ 55 ಕಿ.ಮೀ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿರುವುದರಿಂದ ವಂದೇ ಭಾರತ್ ರೈಲು ಸಂಚಾರಕ್ಕೆ ದಾರಿ ಸುಗಮವಾಗಿದೆ ಎಂದು ಹೇಳಿದರು.

ಜೂನ್ 3ರಿಂದ ರೈಲಿನ ಪ್ರಾಯೋಗಿಕ ಓಟ ಆರಂಭವಾಗಲಿದ್ದು, ಮುಂದಿನ 15 ರಿಂದ 20 ದಿನಗಳೊಳಗೆ ಬೆಂಗಳೂರು–ಮಂಗಳೂರು ನಡುವೆ ಪೂರ್ಣ ಪ್ರಮಾಣದ ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೂಚನೆ ನೀಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಪ್ರಸ್ತುತ ಕರ್ನಾಟಕದ 14 ಜಿಲ್ಲೆಗಳಲ್ಲಿ 12 ವಂದೇ ಭಾರತ್ ರೈಲುಗಳು ಸಂಚರಿಸುತ್ತಿದ್ದು, ಬೆಂಗಳೂರು–ಮಂಗಳೂರು ಮಾರ್ಗದ 13ನೇ ವಂದೇ ಭಾರತ್ ರೈಲು ಶೀಘ್ರದಲ್ಲೇ ಸೇರ್ಪಡೆಯಾಗಲಿದೆ ಎಂದರು.

ಇದೇ ವೇಳೆ ರಾಜ್ಯದ ರೈಲ್ವೆ ಅಭಿವೃದ್ಧಿ, ಅಮೃತ್ ಭಾರತ್ ರೈಲುಗಳು, ಮೆಮೋ ರೈಲು ಸೇವೆಗಳು, ರೈಲ್ವೆ ನಿಲ್ದಾಣಗಳ ಆಧುನೀಕರಣ ಹಾಗೂ ಲೆವೆಲ್ ಕ್ರಾಸಿಂಗ್ ತೆರವು ಕಾಮಗಾರಿಗಳ ಕುರಿತು ಸಚಿವರು ವಿವರ ನೀಡಿದರು. ರಾಜ್ಯಕ್ಕೆ 2026–27ನೇ ಸಾಲಿನಲ್ಲಿ ₹7,748 ಕೋಟಿ ರೈಲ್ವೆ ಅನುದಾನ ಮಂಜೂರಾಗಿರುವುದಾಗಿ ಅವರು ತಿಳಿಸಿದರು.

Previous Post

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.

Next Post

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಚಾಲಕ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಚಾಲಕ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಚಾಲಕ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News