Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ಆಗ್ರಹ: ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಪೊಲೀಸ್ ಠಾಣೆಗೆ ದೂರು

Dhrishya News by Dhrishya News
10/06/2026
in ಮುಖಪುಟ
0
ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ಆಗ್ರಹ: ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಪೊಲೀಸ್ ಠಾಣೆಗೆ ದೂರು
0
SHARES
44
VIEWS
Share on FacebookShare on Twitter

ಬ್ರಹ್ಮಾವರ: ಬಿಲ್ಲವ (ಪೂಜಾರಿ) ಸಮಾಜದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ಹೇಳಿಕೆಗಳನ್ನು ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಅನಿತಾ ಕಾಸರಗೋಡು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಾವರ ವತಿಯಿಂದ ಬ್ರಹ್ಮಾವರ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಲಾಯಿತು.

ದೂರಿನಲ್ಲಿ, ಅನಿತಾ ಕಾಸರಗೋಡು ಅವರು ಯೂಟ್ಯೂಬ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಬಿಲ್ಲವ (ಪೂಜಾರಿ) ಸಮುದಾಯದ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಜಾತಿ ವೈಮನಸ್ಸು ಉಂಟುಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ತುಳು ಭಾಷೆಯಲ್ಲಿ ನೀಡಿರುವ ಕೆಲವು ಹೇಳಿಕೆಗಳ ಮೂಲಕ ಇಡೀ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದು, ಇದರಿಂದ ಸಮಾಜದ ಲಕ್ಷಾಂತರ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಲ್ಲವ ಸಮಾಜವು ಬ್ರಹ್ಮಶ್ರೀ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಮನುಷ್ಯನಿಗೆ” ಎಂಬ ಮಾನವತಾವಾದಿ ತತ್ವವನ್ನು ಅನುಸರಿಸಿಕೊಂಡು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯನ್ನು ಬೆಳೆಸಿಕೊಂಡು ಬಂದಿದೆ. ಇಂತಹ ಸಮಾಜದ ವಿರುದ್ಧ ಉದ್ದೇಶಪೂರ್ವಕವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶವನ್ನು ತೋರಿಸುತ್ತದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ (BNS), 2023ರ ವಿವಿಧ ವಿಧಿಗಳ ವ್ಯಾಪ್ತಿಗೆ ಒಳಪಡುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವಿಡಿಯೋ ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡು ತಕ್ಷಣವೇ ಎಫ್‌ಐಆರ್ ದಾಖಲಿಸಿ, ಸಮಗ್ರ ತನಿಖೆ ನಡೆಸಿ ಕಾನೂನಿನ ಅನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಲಾಗಿದೆ

ಈ ಸಂದರ್ಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ಬ್ರಹ್ಮಾವರದ ಅಧ್ಯಕ್ಷರಾದ ಶಂಕರ ಪೂಜಾರಿ, ಉಪಾಧ್ಯಕ್ಷರಾದ ರಾಘು ಪೂಜಾರಿ ಹೇರೂರು ಹಾಗೂ ಸಂತೋಷ ಪೂಜಾರಿ ಬಿರ್ತಿ, ಕಾರ್ಯದರ್ಶಿ ಶೇಖರ್ ಪೂಜಾರಿ, ಖಜಾಂಚಿ ಮೋಹನ್ ಪೂಜಾರಿ, ಜೊತೆ ಕಾರ್ಯದರ್ಶಿಗಳಾದ ಅಶೋಕ್ ಪೂಜಾರಿ ಹೇರೂರು ಮತ್ತು ಉಮೇಶ್ ಪೂಜಾರಿ ಬಿರ್ತಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪೂಜಾರಿ, ಮ್ಯಾನೇಜರ್ ಅಶೋಕ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸೀತಾರಾಮ್ ಪೂಜಾರಿ ಸೇರಿದಂತೆ ಬಿಲ್ಲವ ಸಮಾಜದ ಮುಖಂಡರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು

Previous Post

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Next Post

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ 'ದೀಪ ಸಂಜೀವಿನಿ ಒಕ್ಕೂಟ'ದ ವಾರ್ಷಿಕ ಮಹಾಸಭೆ!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check