Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

Dhrishya News by Dhrishya News
11/06/2026
in ಕರಾವಳಿ
0
ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ
0
SHARES
96
VIEWS
Share on FacebookShare on Twitter

ಉಡುಪಿ : ಜೂನ್ 11: ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್‌ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯ ಪ್ರಥಮ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಅದರಿಂದಲೇ ಕುಟುಂಬದ ಜೀವನ ನಿರ್ವಹಿಸುತ್ತಿದ್ದರು.

ಮಾಹಿತಿಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ತಾಯಿ ಸುಚಿತ್ರ ಪೂಜಾರಿ ಅವರು ಮಗ ದಕ್ಷ್‌ನನ್ನು ಕಂಕುಳಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷ್‌ನ ತಲೆಗೆ ಬಡಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದರು. ಆದರೆ ತಲೆಯ ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ದಕ್ಷ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ದಾರುಣ ಘಟನೆ ಹೆರಂಜೆ ಹಾಗೂ ಬ್ರಹ್ಮಾವರ ಭಾಗದ ಜನರಲ್ಲಿ ತೀವ್ರ ದುಃಖವನ್ನುಂಟು ಮಾಡಿದ್ದು, ಬಾಲಕನ ಅಕಾಲಿಕ ನಿಧನಕ್ಕೆ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

Previous Post

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Next Post

ಬ್ರಹ್ಮಾವರ: ಪಡುಗರಡಿ ಬಾಬು ಪೂಜಾರಿ ನಿಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ಪಡುಗರಡಿ ಬಾಬು ಪೂಜಾರಿ ನಿಧನ..!

ಬ್ರಹ್ಮಾವರ: ಪಡುಗರಡಿ ಬಾಬು ಪೂಜಾರಿ ನಿಧನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check