Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾವಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ..!

ಪರಿಸರ ಮಾಹಿತಿ, ಗಿಡ ನಾಟಿ ಹಾಗೂ ಜಾಗೃತಿ ಕಾರ್ಯಕ್ರಮ.

Dhrishya News by Dhrishya News
12/06/2026
in ಮುಖಪುಟ
0
ಕಾವಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ..!
0
SHARES
9
VIEWS
Share on FacebookShare on Twitter

ಬ್ರಹ್ಮಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬ್ರಹ್ಮಾವರ ತಾಲೂಕು, ಬಾರ್ಕೂರು ವಲಯ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ, ಕಾವಡಿ ಇಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯ ಶಿಕ್ಷಕಿರಾದ *ಶ್ರೀಮತಿ ಜಯಶ್ರೀ ನೆರವೇರಿಸಿ ಜೂನ್ ತಿಂಗಳಲ್ಲಿ ವಿಶ್ವದಾದ್ಯಂತ ಅನೇಕ ಸಂಘ ಸಂಸ್ಥೆಗಳು ಪರಿಸರ ರಕ್ಷಣೆಗೆ ಪೂರಕವಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಸಂರಕ್ಷಣೆಯ ಬಗ್ಗೆ ಅರಿವು ಹಾಗೂ ಕಾಳಜಿವಹಿಸಬೇಕಾದ ಅರಿವು ಮೂಡಿಸಿದಂತಾಗುತ್ತದೆ. ಇಂದಿನ ಯುವ ಪೀಳಿಗೆ ಸ್ವಚ್ಛಂದವಾಗಿ ಉಸಿರಾಡುತ್ತಿದೆ ಎಂಬುದಕ್ಕೆ ಮುಖ್ಯ ಕಾರ್ಯಭೂತರು ನಮ್ಮ ಹಿರಿಯರು, ಆದ್ದರಿಂದ ಇಂದಿನ ಯುವ ಪೀಳಿಗೆ ಗಿಡ ನಾಟಿ ಮಾಡಿ ಪೋಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ನಾವು ಸ್ವಚ್ಛಂದ ಪರಿಸರವನ್ನು ಹಸ್ತಾಂತರಿಸಬೇಕಾಗಿದೆ. ಪ್ರತಿ ವಿದ್ಯಾರ್ಥಿಗಳು ತಮ್ಮ ಹುಟ್ಟಿದ ದಿನದಂದು ಕನಿಷ್ಠ ಒಂದು ಗಿಡ ನಾಟಿಮಾಡಿ ಅದನ್ನು ಪೋಷಣೆ ಮಾಡಿದಲ್ಲಿ ಅದಕ್ಕಿಂತ ದೊಡ್ಡ ಉಡುಗೊರೆ ಇಲ್ಲ ಎಂಬುದಾಗಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಕೋ ಕ್ಲಬ್‌ನ ಸದಸ್ಯರಾದ ಸುಂದರ್ ಇವರು ಇಂದಿನ ದಿನಗಳಲ್ಲಿ ಪರಿಸರದಲ್ಲಿ ಆಮ್ಲಜನಕದ ಕೊರತೆ ಉಂಟಾಗುತ್ತಿದೆ ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲೆ ಆಗುವ ದೌರ್ಜನ್ಯಗಳು ಮುಖ್ಯ ಕಾರಣವಾಗಿದೆ. ಅಭಿವೃದ್ಧಿಯ ಜೊತೆ ಜೊತೆಗೆ ಪರಿಸರದ ಬಗ್ಗೆ ಕಾಳಜಿಯು ಕೂಡ ಅಷ್ಟೇ ಮುಖ್ಯವಾಗಿದ್ದು ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಹಾಗೂ ಜವಾಬ್ದಾರಿ ಆಗಿರುತ್ತದೆ.

ನಮ್ಮ ಹಿರಿಯರು ಪರಿಸರದಲ್ಲಿ ದೈವತ್ವವನ್ನು ಕಾಣುತ್ತಿದ್ದು ಅದರಂತೆಯೇ ನಾಗಬನಗಳು, ದೇವರ ಕಾಡುಗಳು ಎಂಬ ಪರಿಕಲ್ಪನೆಗಳು ಈಗಲೂ ಚಾಲ್ತಿಯಲ್ಲಿದ್ದು ಈ ಪರಿಕಲ್ಪನೆಗಳು ಪರಿಸರದ ರಕ್ಷಣೆಗೆ ಕಾರಣೀಭೂತವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ವಿದ್ಯಾರ್ಥಿ ಜೀವನದಲ್ಲಿ ತನ್ನ ಕೈಲಾದಷ್ಟು ಪರಿಸರ ಸಂರಕ್ಷಣೆ ಮಾಡುವ ಸಂಕಲ್ಪ ಕೈಗೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ವಹಿಸಿಕೊಂಡಿದ್ದರು ವೇದಿಕೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಸರಿತಾ, ಹವರಾಲು ಸೇವಾ ಪ್ರತಿನಿಧಿ ನಂದಿನಿ ಉಪಸ್ಥಿತರಿದ್ದರು.

ಶಿಕ್ಷಕರದ ಪ್ರಶಾಂತ್ ಇವರು ಸಾವತಿಸಿ, ವಲಯ ಮೇಲ್ವಿಚಾರಕ ರವೀಂದ್ರ ಎಸ್ ಕಾರ್ಯಕ್ರಮ ನಿರೂಪಿಸಿ, ಎಲ್ಲರನ್ನು ವಂದಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು. ಸಾಂಕೇತಿಕ ಗಿಡ ವಿತರಣೆ ಮಾಡಿ , ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಲಾಯಿತು.

Previous Post

ಎಸ್‌ಐಆರ್ ಪ್ರಕ್ರಿಯೆ ಮಹಿಳಾ ಸ್ನೇಹಿಯಾಗಲಿ: ಜನವಾದಿ ಮಹಿಳಾ ಸಂಘ ಮನವಿ..!

Next Post

ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News