Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

Dhrishya News by Dhrishya News
15/06/2026
in ಸುದ್ದಿಗಳು
0
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!
0
SHARES
23
VIEWS
Share on FacebookShare on Twitter

ಬೆಂಗಳೂರು, ಜೂನ್ 15: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ ನಡೆಸಲಾಗಿದೆ. ಯೋಜನೆಯ ದುರುಪಯೋಗ ಮತ್ತು ಅನರ್ಹ ಫಲಾನುಭವಿಗಳ ಪತ್ತೆಯಾದ ಹಿನ್ನೆಲೆಯಲ್ಲಿ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲನೆ ಮಾಡಲಾಗಿದ್ದು, ಕೆಲವು ಖಾತೆಗಳಿಗೆ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.

ಈ ಕುರಿತು ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕಾಗಬಹುದು ಎಂದು ಸೂಚನೆ ನೀಡಿದ್ದರು. ಪ್ರಸ್ತುತ ಲಭ್ಯ ಮಾಹಿತಿಯ ಪ್ರಕಾರ, 1.30 ಕೋಟಿ ಫಲಾನುಭವಿಗಳ ಪೈಕಿ 3.89 ಲಕ್ಷ ಮಂದಿ ಅನರ್ಹರು ಎಂದು ಗುರುತಿಸಲಾಗಿದೆ.

ವಿವಿಧ ಇಲಾಖೆಗಳ ದತ್ತಾಂಶಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸುವ 1.94 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಟ್ಟಿದೆ. ಅಲ್ಲದೇ ಮೃತಪಟ್ಟ 1.95 ಲಕ್ಷ ಫಲಾನುಭವಿಗಳ ಹೆಸರಿನಲ್ಲಿದ್ದ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದ್ದು, ಅಂತಹ ಖಾತೆಗಳಿಗೂ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.

ಅನರ್ಹ ಫಲಾನುಭವಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 47,871 ಮಂದಿ ಗೃಹಲಕ್ಷ್ಮಿಯರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಬಳಿಕ ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಮಾರ್ಚ್ ತಿಂಗಳಲ್ಲೇ ಈ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಇಲಾಖೆ, ಮುಂದಿನ ದಿನಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರುವ ಸಿದ್ಧತೆಯಲ್ಲಿದೆ. ಇದರಿಂದ ನಕಲಿ ಫಲಾನುಭವಿಗಳು ಹಾಗೂ ತಾಂತ್ರಿಕ ಲೋಪಗಳನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪರಿಷ್ಕರಣೆಯಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 77 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.

Previous Post

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

Next Post

ಕೊಡವೂರು :ವ್ಯಕ್ತಿ ನಾಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News