Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

Dhrishya News by Dhrishya News
20/06/2026
in ಸುದ್ದಿಗಳು
0
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 
0
SHARES
1
VIEWS
Share on FacebookShare on Twitter

ಮಣಿಪಾಲ,: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು, ಜೂನ್ 15, 2026 ರಿಂದ ಅನ್ವಯವಾಗುವಂತೆ ತನ್ನ ಆರೋಗ್ಯ ವಿಜ್ಞಾನ ವಿಭಾಗದ ನೂತನ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್, ವಿಎಸ್‌ಎಂ (ನಿವೃತ್ತ) ಅವರನ್ನು ನೇಮಕ ಮಾಡಿದೆ. 

ಮ್ಯಾಥ್ಯೂಸ್ ಜೇಕಬ್ ಅವರು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ 36 ವರ್ಷಗಳ ಸುದೀರ್ಘ ಹಾಗೂ ವಿಶಿಷ್ಟ ಸೇವಾ ಅನುಭವ ಹೊಂದಿದ್ದಾರೆ. ಕ್ಲಿನಿಕಲ್ ಕೇರ್, ವೈದ್ಯಕೀಯ ಶಿಕ್ಷಣ, ಸಂಶೋಧನೆ, ಆರೋಗ್ಯ ರಕ್ಷಣಾ ನಾಯಕತ್ವ ಮತ್ತು ಸಾಂಸ್ಥಿಕ ಆಡಳಿತದಲ್ಲಿ ಅಪಾರ ಪರಿಣತಿಯನ್ನು ಹೊಂದಿದ್ದಾರೆ. ಪ್ರಸಿದ್ಧ ಅರಿವಳಿಕೆ ಮತ್ತು ಕ್ರಿಟಿಕಲ್ ಕೇರ್ ತಜ್ಞರಾಗಿರುವ ಇವರು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ಹೊಸ ಆವಿಷ್ಕಾರಗಳನ್ನು ತರುವ ಜೊತೆಗೆ, ರೋಗಿಗಳ ಆರೈಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಶ್ರಮಿಸಿದ್ದಾರೆ. 

ಅವರು ಪುಣೆಯ ಪ್ರತಿಷ್ಠಿತ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಮತ್ತು ಅರಿವಳಿಕೆ ಹಾಗೂ ಕ್ರಿಟಿಕಲ್ ಕೇರ್‌ನಲ್ಲಿ ಎಂಡಿ ಪದವಿ ಪಡೆದಿದ್ದಾರೆ. ಜತೆಗೆ ಡಿಎನ್‌ಬಿ ಮತ್ತು ನ್ಯಾಷನಲ್ ಅಕಾಡೆಮಿ ಆಫ್ ಮೆಡಿಕಲ್ ಸೈನ್ಸಸ್‌ನ ಸದಸ್ಯತ್ವವನ್ನು ಹೊಂದಿದ್ದಾರೆ. ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ನಿಂದ ಆಸ್ಪತ್ರೆ ಆಡಳಿತದಲ್ಲಿ ಎಕ್ಸಿಕ್ಯೂಟಿವ್ ಸ್ನಾತಕೋತ್ತರ ಡಿಪ್ಲೊಮಾ, ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಿಂದ ಮೆಡಿಕಲ್ ಲಾ ಮತ್ತು ಎಥಿಕ್ಸ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಅಮೆರಿಕನ್‌ ಕಾಲೇಜ್ ಆಫ್ ಎಮರ್ಜೆನ್ಸಿ ಮೆಡಿಸಿನ್ ಎಕ್ಸ್‌ಪರ್ಟ್ಸ್ ಫೆಲೋಶಿಪ್, ವೃದ್ಧಾಪ್ಯ ವೈದ್ಯಕೀಯದಲ್ಲಿ ಪ್ರಮಾಣಪತ್ರ ಮತ್ತು ಕಾರ್ಯತಂತ್ರದ ರಕ್ಷಣಾ ನಿರ್ವಹಣೆಯಲ್ಲಿ ತರಬೇತಿಯನ್ನು ಪಡೆದು ತಮ್ಮ ಜ್ಞಾನದ ಹರವನ್ನು ವಿಸ್ತರಿಸಿಕೊಂಡಿದ್ದಾರೆ. 

ಸುಧಾರಿತ ವೈದ್ಯಕೀಯ ಶಿಕ್ಷಣದಲ್ಲಿ ಫೆಲೋಶಿಪ್ ಹೊಂದಿರುವ ಡಾ. ಜೇಕಬ್ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಆವಿಷ್ಕಾರಗಳನ್ನು ಬೆಂಬಲಿಸಿದ್ದಾರೆ. ಅರಿವಳಿಕೆ ಮತ್ತು ಕ್ರಿಟಿಕಲ್ ಕೇರ್ ವಿಭಾಗದ ಪ್ರಾಧ್ಯಾಪಕರಾಗಿ ಬೋಧನೆ, ಸ್ನಾತಕೋತ್ತರ ತರಬೇತಿ, ಪಠ್ಯಕ್ರಮ ಅಭಿವೃದ್ಧಿ, ಮೌಲ್ಯಮಾಪನ ಮತ್ತು ವಿದ್ಯಾರ್ಥಿ ಮಾರ್ಗದರ್ಶನದಲ್ಲಿ 14 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ 35 ಕ್ಕೂ ಹೆಚ್ಚು ಪ್ರಕಟಣೆಗಳನ್ನು ರಚಿಸಿದ್ದಾರೆ ಹಾಗೂ ಹಲವಾರು ಸ್ನಾತಕೋತ್ತರ ಪ್ರಬಂಧಗಳಿಗೆ ಮಾರ್ಗದರ್ಶನ ನೀಡಿ ಸಂಶೋಧನಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. 

ಇವರ ನಾಯಕತ್ವದಲ್ಲಿ, ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದ ಅನೇಕ ಮಹತ್ವದ ಕಾರ್ಯಗಳು ನಡೆದಿವೆ. ಮೂಳೆ ಮಜ್ಜೆ (ಬೋನ್ ಮ್ಯಾರೋ) ಮತ್ತು ಮೂತ್ರಪಿಂಡ ಕಸಿ ಕಾರ್ಯಕ್ರಮಗಳ ಸ್ಥಾಪನೆ, ಸೂಪರ್-ಸ್ಪೆಷಾಲಿಟಿ ಸೇವೆಗಳ ವಿಸ್ತರಣೆ ಮತ್ತು ಆಂಕೊಲಾಜಿ ಸೌಲಭ್ಯಗಳ ಉನ್ನತೀಕರಣ, ತೀವ್ರ ನಿಗಾ ಘಟಕಗಳ ಮತ್ತು ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳ ನವೀಕರಣ, ಅಂಗಾಂಗ ಮರುಪಡೆಯುವಿಕೆ ಮತ್ತು ಕಸಿ ಸೇವೆಗಳ ಬಲವರ್ಧನೆ. ಇದಲ್ಲದೆ, ಗುಣಮಟ್ಟ ಮತ್ತು ಮಾನ್ಯತಾ ಮಾನದಂಡಗಳನ್ನು ಕಾಪಾಡುವ ನಿಟ್ಟಿನಲ್ಲಿ ಎನ್‌ಎಬಿಎಚ್‌ ಮೌಲ್ಯಮಾಪಕರಾಗಿ ಮತ್ತು ಸಿಎಎಚ್‌ಒನ ಆಡಳಿತ ಮಂಡಳಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 

ಸಶಸ್ತ್ರ ಪಡೆಗಳು ಮತ್ತು ಆರೋಗ್ಯ ವಲಯಕ್ಕೆ ಅವರು ನೀಡಿದ ಅಸಾಧಾರಣ ಸೇವೆ ಹಾಗೂ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ, 2023ರಲ್ಲಿ ಪ್ರತಿಷ್ಠಿತ ‘ವಿಶಿಷ್ಟ ಸೇವಾ ಪದಕ’ ನೀಡಿ ಗೌರವಿಸಲಾಗಿದೆ.

Previous Post

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

Next Post

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026

Recent News

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved